ಗ್ರಾಮದೇವಿಯ ಜಾತ್ರಾ ಮಹೋತ್ಸವದ ಪೆಂಡಾಲ್ ಪೂಜಾ ಕಾರ್ಯಕ್ರಮ
Pandal Puja program of the Grama Devi Jatra Mahotsav
ಸವದತ್ತಿ 08: ಪಟ್ಟಣದ ಗಡೇಕಾರ ಪ್ಲಾಟ್ ವ್ಯಾಪ್ತಿಯ ಹದ್ಲಿ ಬಿಲ್ಡಿಂಗ್ ಹಿಂಭಾಗದಲ್ಲಿ, ಗ್ರಾಮದ ಆರಾಧ್ಯ ದೈವ ಶ್ರೀ ಗ್ರಾಮದೇವಿಯ ಜಾತ್ರಾ ಮಹೋತ್ಸವದ ಅಂಗವಾಗಿ ಬುಧವಾರದಂದು ಪೆಂಡಾಲ್ ಪೂಜಾ ವಿಧಿವಿಧಾನಗಳನ್ನು ನೆರವೇರಿಸಲಾಯಿತು. ಮುಂಜಾನೆಯೇ ಸ್ಥಳಕ್ಕೆ ಆಗಮಿಸಿದ ವೇದಮೂರ್ತಿ ಅಜ್ಜಯ್ಯ ಶ್ರೀಗಳ ಇವರ ನೇತೃತ್ವದಲ್ಲಿ ಭೂಮಿ ಪೂಜೆ ಹಾಗೂ ಪೆಂಡಾಲ್ ಕಂಬಕ್ಕೆ ಪೂಜೆ ಸಲ್ಲಿಸಿ, ಜಾತ್ರಾ ಮಹೋತ್ಸವ ನಿರ್ವಿಘ್ನವಾಗಿ ನಡೆಯಲಿ ಎಂದು ಪ್ರಾರ್ಥಿಸಿದರು.
ಈ ಶುಭ ಸಂದರ್ಭದಲ್ಲಿ ಊರಿನ ಹಿರಿಯ ಮುಖಂಡರು, ಪ್ರಗತಿಪರ ರೈತರು ಹಾಗೂ ನಗರದ ಪ್ರಮುಖ ಗಣ್ಯ ವ್ಯಕ್ತಿಗಳು ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ಸ್ಥಳೀಯ ನಿವಾಸಿಗಳು ಹಾಗೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವಿಯ ಕೃಪೆಗೆ ಪಾತ್ರರಾದರು. ಪೂಜೆಯ ನಂತರ ಭಕ್ತರಿಗೆ ಅಲ್ಪೋಪಹಾರ ವ್ಯವಸ್ಥೆ ಮಾಡಲಾಗಿತ್ತು. ಗ್ರಾಮದೇವಿಯ ಜಾತ್ರೆಯು ಕೇವಲ ಒಂದು ಹಬ್ಬವಲ್ಲ, ಇದು ನಮ್ಮೂರಿನ ಒಗ್ಗಟ್ಟಿನ ಸಂಕೇತ.ಎಲ್ಲ ಭಕ್ತರು ಸೇರಿ ಈ ಬಾರಿಯ ಜಾತ್ರೆಯನ್ನು ಅತ್ಯಂತ ಯಶಸ್ವಿಯಾಗಿ ಆಚರಿಸೋಣ,"ಎಂದು ಊರಿನ ಹಿರಿಯರು ಕರೆ ನೀಡಿದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 