ಜಿಲ್ಲಾ ಜಾಲತಾಣ ಅಧ್ಯಕ್ಷರಾಗಿ ಪರಶುರಾಮ ಮೇತ್ರಿ ಆಯ್ಕೆ
Parashurama Metri elected as District Website President
ಲೋಕದರ್ಶನ ವರದಿ
ಮಹಾಲಿಂಗಪುರ 16: ಬಾಗಲಕೋಟೆ ಜಿಲ್ಲೆಯ ಪರಿಶಿಷ್ಟ ವಿಭಾಗದ ಜಿಲ್ಲಾ ಸಾಮಾಜಿಕ ಜಾಲತಾಣದ ಅಧ್ಯಕ್ಷರನ್ನಾಗಿ ಮಹಾಲಿಂಗಪುರ ಪಟ್ಟಣದ ಪರಶುರಾಮ ಮೇತ್ರಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಾಜು ಮಣ್ಣಿಕೇರಿ ತಿಳಿಸಿದ್ದಾರೆ.
ಮೇತ್ರಿಯವರು ತೆರದಾಳ ಮತಕ್ಷೇತ್ರದ ಪರಿಶಿಷ್ಟ ಜಾತಿ ಪಂಗಡದ ನಾಯಕ, ಸಾರ್ವಜನಿಕ ಬದುಕಿನ ಸೇವೆ ಗುರುತಿಸಿ ಕಾಂಗ್ರೆಸ್ ಪಕ್ಷದ ಬಲ ವರ್ಧನೆ ಸಲುವಾಗಿ ಇವರಿಗೆ ಹೆಚ್ಚಿನ ಹೊಣೆಯನ್ನು ನೀಡಿದ್ದು, ತರುವಾಯ ಇವರು ಕಾಂಗ್ರೆಸ್ ಪಕ್ಷದ ಹಿರಿಯ ಕಿರಿಯ ಎಲ್ಲರನ್ನೂ ಒಳಗೊಂಡಂತೆ ಅವರೆಲ್ಲರ ವಿಶ್ವಾಸದ ಅಡಿಯಲ್ಲಿ ಕಾರ್ಯ ನಿರ್ವಹಿಸಲು ಪಕ್ಷದ ಮೂಲಗಳು ತಿಳಿಸಿವೆ.
ಸೇವೆ ಗುರುತಿಸಿ ಶಿಫಾರಸು ಮಾಡಿದ ತೇರದಾಳ ಮತ ಕ್ಷೇತ್ರದ ಕಾಂಗ್ರೆಸ್ ಧುರೀಣ ಸಿದ್ದು ಕೊಣ್ಣೂರ ಅವರನ್ನು ಸೇರಿದಂತೆ ಉಸ್ತುವಾರಿ ಸಚಿವರಾದ ಆರ್. ಬಿ.ತಿಮ್ಮಾಪುರ, ಕೆಪಿಸಿಸಿ ಜಿಲ್ಲಾ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ ಮತ್ತು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಪ್ಪ ಸಿಂಗಾಡಿ ಮತ್ತು ಪರೋಕ್ಷ ಹಾಗೂ ಅಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಮೇತ್ರಿಯವರು ಅಭಿನಂದನೆಗಳನ್ನು ತಿಳಿಸಿದ್ದಾರೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 