ಕಾಲೇಜು ವಿದ್ಯಾರ್ಥಿಗಳ ಉತ್ತಮ ಫಲಿತಾಂಶಕ್ಕೆ ಪೋಷಕರ ಸಹಕಾರ ಅಗತ್ಯ: ಮಂಜುನಾಥ ಕೊಕ್ಕರಗುಂದಿ
Parental cooperation is essential for good results among college students: Manjunatha Kokkaragundi
ಲಕ್ಷ್ಮೇಶ್ವರ, 22: ಕಾಲೇಜು ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆಯುವಲ್ಲಿ ಶಿಕ್ಷಕರೊಂದಿಗೆ ಪೋಷಕರ ಪಾತ್ರವೂ ಮಹತ್ವದ್ದಾಗಿದೆ ಎಂದು ಸರ್ಕಾರಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಟಿ.ಬಿ. ಮಾನ್ವಿ ಹೇಳಿದರು.
ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿಗಳ ಪೋಷಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪೋಷಕರು ತಮ್ಮ ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ನಿರಂತರ ಗಮನಹರಿಸಬೇಕು. ಮಕ್ಕಳು ಪ್ರತಿದಿನ ಸರಿಯಾಗಿ ಕಾಲೇಜಿಗೆ ಹಾಜರಾಗುತ್ತಿದ್ದಾರೆಯೇ, ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆಯೇ ಎಂಬುದನ್ನು ಶಿಕ್ಷಕರಿಂದ ತಿಳಿದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಮಕ್ಕಳಿಗೆ ಯಾವುದೇ ತೊಂದರೆ ಎದುರಾದಾಗ ಮಾತ್ರ ಕಾಲೇಜಿಗೆ ಭೇಟಿ ನೀಡದೆ, ನಿಯಮಿತವಾಗಿ ಕಾಲೇಜಿಗೆ ಬಂದು ಅವರ ಶೈಕ್ಷಣಿಕ ಪ್ರಗತಿ, ಹಾಜರಾತಿ ಹಾಗೂ ವಿವಿಧ ವಿಷಯಗಳಲ್ಲಿನ ಸಾಧನೆ ಕುರಿತು ಶಿಕ್ಷಕರೊಂದಿಗೆ ಚರ್ಚಿಸಬೇಕು. ಯಾವ ವಿಷಯದಲ್ಲಿ ವಿದ್ಯಾರ್ಥಿಗಳು ಮುಂದಿದ್ದಾರೆ, ಯಾವ ವಿಷಯದಲ್ಲಿ ಹಿಂದುಳಿದಿದ್ದಾರೆ ಎಂಬುದನ್ನು ತಿಳಿದುಕೊಂಡು ಅಗತ್ಯ ಸಹಕಾರ ನೀಡಬೇಕು ಎಂದರು.
ಇಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಮೊಬೈಲ್ನಲ್ಲಿ ಹೆಚ್ಚಿನ ಸಮಯ ಕಳೆಯುವುದನ್ನು ಪೋಷಕರು ನಿಯಂತ್ರಿಸಬೇಕು. ಮೊಬೈಲ್ ಬಳಕೆಗೆ ಮಿತಿ ವಿಧಿಸಿ, ವಿದ್ಯಾಭ್ಯಾಸಕ್ಕೆ ಅಗತ್ಯವಾದ ಸಮಯವನ್ನು ಮೀಸಲಿಡುವಂತೆ ನೋಡಿಕೊಂಡರೆ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆಯಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಸಭೆಯಲ್ಲಿ ವಿದ್ಯಾರ್ಥಿಗಳ ವಿವಿಧ ವಿಷಯಗಳ ಪರೀಕ್ಷಾ ಅಂಕಗಳು ಹಾಗೂ ಹಿಂದುಳಿದ ವಿಷಯಗಳ ಕುರಿತು ಶಿಕ್ಷಕರು ಪೋಷಕರಿಗೆ ಮಾಹಿತಿ ನೀಡಿದರು. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೋಷಕರು ಹಾಗೂ ಶಿಕ್ಷಕರು ನಿರಂತರವಾಗಿ ಸಹಕರಿಸುವ ಅಗತ್ಯವಿದೆ ಎಂದು ತಿಳಿಸಲಾಯಿತು.
ಸಭೆಯಲ್ಲಿ ಕಾಲೇಜಿನ ಉಪನ್ಯಾಸಕರಾದ ಬಸವರಾಜ ದೊಡ್ಡಮನಿ, ಬಿ.ಎಂ. ಮರಳಿಹಳ್ಳಿ, ಎನ್.ಓ. ಸಾತಪುತೆ, ಎಸ್.ಬಿ. ಇಟ್ಟಿ, ಮಂಜುಳಾ ಗೂಳವ, ಪೂಜಾ ಮೊಟೆಬೆನ್ನೂರು, ಪರಮೇಶ್ವರ ಲಮಾಣಿ, ಸದಾನಂದ ನಡುವಿನಮನಿ, ರವಿ ಹೊನ್ನಪ್ಪ, ನಾಗರಾಜ ಹಜರದ, ಕುಶಾಲ ನಾಯಕ, ಶಿವರಾಜ ಬಿ.ಕೆ. ಸೇರಿದಂತೆ ಕಾಲೇಜಿನ ಎಲ್ಲ ಬೋಧಕ ವರ್ಗದವರು, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 