ಹೆಣ್ಣು ಮಗುವಿನ ಕಾಳಜಿ ಬಗ್ಗೆ ಪಾಲಕರಲ್ಲಿ ಅರಿವು ಅವಶ್ಯ

ಹಾವೇರಿ ಜ.21: ಪಾಲಕರು ಹೆಣ್ಣು ಮಗುವಿಗೆ ಶಿಕ್ಷಣ ಒದಗಿಸಿ ಉತ್ತಮ ಭವಿಷ್ಯ ರೂಪಿಸಬೇಕು. ಹೆಣ್ಣು ಮಗುವಿನ ಬಗ್ಗೆ ಪ್ರತಿಯೊಬ್ಬ ಪಾಲಕರಿಗೂ ಕಾಳಜಿ ಹಾಗೂ ಅರಿವು ಅವಶ್ಯ ಎಂದು ಶಾಸಕರಾದ ನೆಹರು ಓಲೇಕಾರ ಅವರು ಹೇಳಿದರು.

   ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪೋಲಿಸ್ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾವೇರಿ ಇವರ ಸಂಯುಕ್ತಾಶ್ರಯದಲ್ಲಿ ಹೆಣ್ಣು ಮಗುವನ್ನು ರಕ್ಷಿಸಿ ಹೆಣ್ಣು ಮಗುವನ್ನು ಓದಿಸಿ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. 

  ಸಮಾಜದಲ್ಲಿ ಹೆಣ್ಣುಮಗುವನ್ನು ಗೌರವಿಸಬೇಕು. ಭ್ರೂಣ ಹತ್ಯೆ ತಡೆಗಟ್ಟಿ ಹೆಣ್ಣುಮಗುವನ್ನು ರಕ್ಷಿಸಬೇಕು. ಹೆಣ್ಣು ಮಗುವಿನ ಉತ್ತಮ ಭವಿಷ್ಯಕ್ಕಾಗಿ  ರಾಜ್ಯಸಕರ್ಾರದಿಂದ ಭಾಗ್ಯಲಕ್ಷ್ಮೀ ಯೋಜನೆಯನ್ನು ಜಾರಿಗೆ ತರಲಾಗಿದೆ. ಹೆಣ್ಣು ಮಗುವಿಗೆ 18 ವರ್ಷವಾದಾಗ ಒಂದು ಲಕ್ಷ ರೂ.ಗಳ ಬಾಂಡ್ನ್ನು ಸಕರ್ಾರದಿಂದ ನೀಡಲಾಗುತ್ತಿದೆ. ಈ ಯೋಜನೆ ಜಾರಿಗೆ ಬಂದ ಮೇಲೆ ಭ್ರೂಣ ಹತ್ಯೆ ಕಡಿಮೆಯಾಗಿದೆ. ಮಹಿಳೆಯರನ್ನು ಮುಖ್ಯವಾಹಿನಿಗೆ ತರಲು ಸಹಕಾರಿಯಾಗಿದೆ ಎಂದು ಅವರು ಹೇಳಿದರು. 

  ಬೇಟಿ ಬಚಾವೋ ಬೇಟಿ ಪಡಾವೋ ಜಾಗೃತಿಗಾಗಿ ನಗರದ ಪ್ರಮುಖ ಬೀದಿಗಳಲಿ ಜಾಥಾದ ಮೂಲಕ ಜಾಗೃತಿ ಮೂಡಿಸಲಾಯಿತು.

 ಸಂಚಾರ ಮಾಡಿ ಪಾಲಕರಲ್ಲಿ ಹಾಗೂ ಸಾರ್ವಜನಿಕರಲ್ಲಿ ಹೆಣ್ಣು ಮಗುವಿನ ರಕ್ಷಣೆಯ  ಇದರ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ಹೇಳಿದರು.

  ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ  ಅಭಿವೃದ್ಧಿ ಇಲಾಖೆ ಉಪನಿದರ್ೆಶಕ ಪಿ.ವೈ.ಶೆಟ್ಟೆಪ್ಪನವರ, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಮಲ್ಲಿಕಾಜರ್ುನ ಮಠದ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಹೆಚ್.ಪಾಟೀಲ, ಬಿಇಓ , ಬಾಲವಿಕಾಸ ಯೋಜನಾಧಿಕಾರಿ ಉಮಾ ಮತ್ತಿತರರು ಭಾಗವಹಿಸಿದ್ದರು.

  ಜಾಥಾ: ಜಾಗೃತಿ ಜಾಥಾದಲ್ಲಿ ನಗರದ ಮುನ್ಸಿಪಲ್ ಹೈಸ್ಕೂಲ್, ಶ್ರೀ ಮಂಜುನಾಥ ಪ್ರೌಢಶಾಲೆ, ಸಕರ್ಾರಿ ಉದರ್ು ಪ್ರೌಢಶಾಲೆ, ಸರ್.ಎಂ. ವಿಶ್ವೇಶ್ವರಯ್ಯ ಇಂಗ್ಲೀಷ್ ಮಿಡಿಯಂ ಪ್ರೈಮರಿ ಮತ್ತು ಹೈಸ್ಕೂಲ್ ಸೇರಿದಂತೆ ವಿವಿಧ ಶಾಲೆಯ ಶಿಕ್ಷಕರು ಹಾಗೂ ವಿದ್ಯಾಥರ್ಿಗಳು ಪಾಲ್ಗೋಂಡಿದ್ದರು.

   ವಿದ್ಯಾಥರ್ಿಗಳು ಹೆಣ್ಣು ಮಗುವನ್ನು ಓದಿಸಿ, ಬಾಲ್ಯವಿವಾಹ ಮಾಡಬೇಡಿ ಶಿಕ್ಷೆಗೆ ಗುರಿಯಾಗಬೇಡಿ, ಬಾಲ್ಯವಿವಾಹ ತಡೆಗಟ್ಟಿ ಮಕ್ಕಳ ಬಾಳನ್ನು ಬೆಳಗಿಸಿ, ಶಿಕ್ಷಣ ನನ್ನ ಮೂಲಬೂತ ಹಕ್ಕು, ಮಕ್ಕಳ ಬಾಲ್ಯವನ್ನು ಬಲಿಕೊಡಬೇಡಿ ಎಂಬ ವಿವಿಧ ಘೋಷವಾಕ್ಯಗಳ ಜಾಗೃತಿ ಫಲಕಗಳನ್ನು ಹಿಡಿದು ಜಾಗೃತಿ ಮೂಡಿಸದರು.