ಮಕ್ಕಳಲ್ಲಿ ಸಾಹಿತ್ಯಾಭಿರುಚಿ ಬೆಳೆಸಲು ಪೋಷಕರ ಪಾತ್ರ ಮುಖ್ಯ
Parents play a crucial role in fostering a love for literature in children
ಹೂವಿನ ಹಡಗಲಿ 13: ಮಕ್ಕಳಿಗೆ ಜನ್ಮ ನೀಡಿ ಬೆಳೆಸುವುದರ ಜೊತೆಗೆ ಅವರಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಹೆತ್ತವರ ಋಣ ತೀರಿಸಬೇಕು. ಅಲ್ಲದೇ ಮಕ್ಕಳಲ್ಲಿ ಸಾಹಿತ್ಯದ ಅಭಿರುಚಿಯನ್ನು ಬೆಳೆಸಬೇಕು ಎಂದು ಸಾಹಿತಿ ಇಸ್ಮಾಯಿಲ್ ಯಲಿಗಾರ್ ಅಭಿಪ್ರಾಯಪಟ್ಟರು. ತಾಲೂಕಿನ ಹೊಳಲು ಗ್ರಾಮದ ಸಾಧನಾ ಸಿಬಿಎಸ್ಸಿ ಶಾಲೆಯಲ್ಲಿ ಆಡಳಿತ ಮಂಡಳಿ ವತಿಯಿಂದ ಆಯೋಜಿಸಿದ್ದ ಪ್ರೇರಣಾ ವಿಚಾರ ಸಂಕಿರಣದಲ್ಲಿ ಶಾಲಾ ಮಕ್ಕಳಿಗೆ ವ್ಯಕ್ತಿತ್ವ ವಿಕಸನ ಕುರಿತು ಅವರು ಮಾತನಾಡಿದರು.
ಬಹುತೇಕ ವಿಜ್ಞಾನಿಗಳು, ಸಾಹಿತಿಗಳು, ಹೋರಾಟಗಾರರು ಹಾಗೂ ಸಮಾಜ ಸುಧಾರಕರು ತಮ್ಮ ತಾಯ್ನಾಡಿನ ಮಾತೃಭಾಷೆಯಲ್ಲಿ ಶಿಕ್ಷಣ ಪಡೆದು ಸಾಧಕರಾಗಿ ಹೊರಹೊಮ್ಮಿದ್ದಾರೆ. ಆದ್ದರಿಂದ ಕನ್ನಡ ಭಾಷೆ ಮತ್ತು ಸಾಹಿತ್ಯವನ್ನು ಹೆಚ್ಚು ಓದಿ ಜ್ಞಾನವನ್ನು ಸಂಪಾದಿಸಿ ಕನ್ನಡ ತಾಯಿಯ ಸೇವೆ ಮಾಡಬೇಕು ಎಂದು ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತಾಧಿಕಾರಿ ಕೋಟೆಪ್ಪ ಬಿ., ಪ್ರಾಂಶುಪಾಲ ಪ್ರಶಾಂತ್ಗೌಡ ಬಿ., ಶಿಕ್ಷಕರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು. ಶಾಲಾ ವಿದ್ಯಾರ್ಥಿಗಳು ಕಾರ್ಯಕ್ರಮದ ಪ್ರಯೋಜನ ಪಡೆದರು.
ಅಂತರರಾಷ್ಟ್ರೀಯ ಭೌತಶಾಸ್ತ್ರ ಒಲಿಂಪಿಯಾಡ್ 2026ರಲ್ಲಿ ಚಿನ್ನದ ಪದಕಗಳ ಸಾಧನೆ ಮಾಡಿದ ಭಾರತೀಯ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ
ಶಾಸಕರ ಆಮಿಷ ಆರೋಪದ ಕಾನೂನು ನೋಟಿಸ್ ಬಳಿಕ ಬಿಜೆಪಿ ನ್ಯಾಯಾಲಯದ ಮೂಲಕ ರಾಜಕೀಯ ಹೋರಾಟ ನಡೆಸುತ್ತಿದೆ ಎಂದು ಒಮರ್ ಅಬ್ದುಲ್ಲಾ ಆರೋಪ
ಮಧುರೈ ಸಮೀಪ ಓಮ್ನಿ ಬಸ್–ಟಿಎನ್ಎಸ್ಟಿಸಿ ಬಸ್ ಮುಖಾಮುಖಿ ಡಿಕ್ಕಿ: ಐವರು ಸಾವು, 42 ಮಂದಿಗೆ ಗಾಯ
ಆರೋಪಿತ ರೌಡಿ ಶೀಟರ್ ಜನ್ಮದಿನಾಚರಣೆಯಲ್ಲಿ ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ಭಾಗಿ; ಕರ್ನಾಟಕದಲ್ಲಿ ರಾಜಕೀಯ ವಿವಾದ
ಮಾಹಿತಿ ಹಕ್ಕು ಕಾಯ್ದೆ ದುರ್ಬಲಕ್ಕೆ ಯತ್ನ: ಆಯುಕ್ತರ ವಿರುದ್ಧ ಕ್ರಮಕೈಗೊಳ್ಳದಿದ್ದರೆ ಕಾನೂನು ಹೋರಾಟ, ಗಾಡಾದ ಎಚ್ಚರಿಕೆ
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ 