ಮಕ್ಕಳ ಪ್ರಗತಿಯಲ್ಲಿ ಶಿಕ್ಷಕರಷ್ಟೇ ಪೋಷಕರು ಗಮನ ಹರಿಸಬೇಕು: ದೀಕ್ಷಿತ್
Parents should pay as much attention to children's progress as teachers: Dixit
ಸವದತ್ತಿ 17: ಮಕ್ಕಳ ಪ್ರಗತಿಯಲ್ಲಿ ಶಿಕ್ಷಕರಷ್ಟೇ ಪೋಷಕರು ಗಮನ ಹರಿಸಬೇಕಾಗುತ್ತದೆ. ಪೋಷಕರು ಶಾಲೆಗೆ ಬಂದು ಮಕ್ಕಳ ಪ್ರಗತಿಯ ಬಗ್ಗೆ ಶಿಕ್ಷಕರೊಂದಿಗೆ ಚರ್ಚಿಸಿ ಸಹಕಾರ ನೀಡುವುದರ ಮೂಲಕ ಮಕ್ಕಳ ಪ್ರಗತಿಗೆ ಸಹಕರಿಸಬೇಕು ಎಂದು ಶಾಲೆಯ ಪ್ರಧಾನ ಗುರುಗಳಾದ ಪಿ.ಎಮ್ ದೀಕ್ಷಿತ್ ಸರ್ ಹೇಳಿದರು.
ಅವರು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಕಲ್ಲಾಪುರದಲ್ಲಿ ಏರಿ್ಡಸಲಾದ ಪೋಷಕ - ಶಿಕ್ಷಕ ಮಹಾಸಭೆಯಲ್ಲಿ ಭಾಗವಹಿಸಿದ್ದ ಸರ್ವರನ್ನು ಸ್ವಾಗತಿಸಿ, ಪ್ರಾಸ್ತಾವಿಕ ನುಡಿಯಲ್ಲಿ ಪೋಷಕ ಶಿಕ್ಷಕ ಕಾರ್ಯಕ್ರಮದ ಮಹತ್ವವನ್ನು ತಿಳಿಸಿದರು. ಮುಖ್ಯ ಅತಿಥಿಗಳಾದ ಕುಂಬರ್ ಸರ್ ಮಾತನಾಡಿ ವಿದ್ಯಾರ್ಥಿಗಳನ್ನು ತಪ್ಪದೆ ಶಾಲೆಗೆ ಕಳುಹಿಸಬೇಕು ಹಾಗೂ ಮಕ್ಕಳ ಮತ್ತು ಪೋಷಕರ ಜವಾಬ್ದಾರಿಯನ್ನು ಕುರಿತು ಮಾಡಿದರು.
ಮಕ್ಕಳ ದಿನಾಚರಣೆಯನ್ನು ಕುರಿತು ಶಾಲೆಯ ಕೆಲವು ವಿದ್ಯಾರ್ಥಿಗಳು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು. ಎಸ್‌ಡಿಎಮ್‌ಸಿ ಸದಸ್ಯರಾದಂತಹ ಕಡುಕೊಳರವರು ಮಾತನಾಡಿ ವಿದ್ಯಾರ್ಥಿಗಳಿಗೆ ವಸತಿ ಶಾಲೆಯ ಪರೀಕ್ಷೆಗಳಿಗೆ ಬೇಕಾದ ಪರೀಕ್ಷಾ ತಯಾರಿ ಪುಸ್ತಕಗಳನ್ನು ನೀಡಿದ್ದು ಹೆಚ್ಚಿನ ಪುಸ್ತಕಗಳು ಬೇಕಾದರೆ ಶಿಕ್ಷಕರಿಗೆ ಸಹಕರಿಸುತ್ತೇವೆ, ಮಕ್ಕಳ ವಿದ್ಯಾಭ್ಯಾಸಕ್ಕೆ ನಾವು ಸಹಕರಿಸುತ್ತೇವೆ ಎಂದು ತಿಳಿಸಿದರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ಡಿಎಂಸಿ ಅಧ್ಯಕ್ಷರಾದಂತಹ ಪ್ರಕಾಶ್ ಬಸಪ್ಪ ಅಳಗೋಡಿ ಅವರು ಅಧ್ಯಕ್ಷತೆವಯಿಸಿದ್ದರು. ಅತಿಥಿಗಳಾಗಿ ಹೂಲಿಕಟ್ಟಿ ಕ್ಲಸ್ಟರ್ನ ಸಿಆರ್ಿಗಳಾದಂತಹ ಎಸ್.ಎಮ್ ಕುಂಬಾರ ಸರ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಅತಿಥಿಗಳಾಗಿ ಸಿಎಸ್ಸಿ ಕಮಿಟಿಯ ಸದಸ್ಯರಾದ ಕೆ ಸಿ ಕಣವಿರವರು ಹಾಗೂ ಶಾಲೆಯ ಎಸ್‌ಡಿಎಂಸಿ ಯ ಸರ್ವ ಸದಸ್ಯರು ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಎಸ್‌ಡಿಎಮ್‌ಸಿ ಸರ್ವ ಸದಸ್ಯರು ಹಾಗೂ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಪೋಷಕರು ಭಾಗವಹಿಸಿದ್ದರು. ಶಾಲೆಯ ಎಲ್ಲಾ ಶಿಕ್ಷಕರು ಹಾಗೂ ಸಿಬ್ಬಂದಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಆರ್ ಕೆ ವೀರನಗೌಡ ಸರ್ ನಿರೂಪಿಸಿದರು. ಮಕ್ಕಳು ಅತ್ಯಂತ ಸಂತೋಷದಿಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 