ಪಾಲಕರು ಶಿಕ್ಷಣದ ಜೊತೆಗೆ ಸಂಸ್ಕಾರವನ್ನು ನೀಡಿ: ಬೆಳಗಲಿ
Parents should provide education along with culture: Belagali
ಲೋಕದರ್ಶನ ವರದಿ
ಶಿಂದಿಕುರಬೇಟ ಮಾಧ್ಯಮಿಕ ಶಾಲೆಯ ವಿದ್ಯಾರ್ಥಿಗಳ ಗುರುವಂದನಾ ಕಾರ್ಯಕ್ರಮ
ಗೋಕಾಕ 27: ಪಾಲಕರು ಶಿಕ್ಷಣದ ಜೊತೆಗೆ ಸಂಸ್ಕಾರವನ್ನು ಕಲಿಸಬೇಕು ಎಂದು ಶಿಕ್ಷಕ ಮಹಾಂತೇಶ ಬೆಳಗಲಿ ಹೇಳಿದರು. ಅವರು ತಾಲೂಕಿನ ಶಿಂದಿಕುರಬೇಟ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ ಸಮತಾ ಶಿಕ್ಷಣ ಸಮಿತಿಯ ಮಾಧ್ಯಮಿಕ ಶಾಲೆಯ ಎಸ್ ಎಸ್ ಎಲ್ ಸಿ ಸನ್ 2006/2007 ಸಾಲಿನ ವಿದ್ಯಾರ್ಥಿಗಳ ಗುರು ವಂದನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳ ಪ್ರೀತಿ, ವಿಶ್ವಾಸ ಎಂದೂ ಮರೆಯಲಾಗದು ಎಂದು ಹೇಳಿದರಲ್ಲದೆ ಮಕ್ಕಳ ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಶಿಕ್ಷಣ ಅತೀ ಅವಶ್ಯಕವಾಗಿದೆ ಎಂದು ಹೇಳಿದರು.
ಕಾರ್ಯಕ್ರಮವನ್ನು ಮಾಧ್ಯಮಿಕ ಶಾಲೆಯ ಮುಖ್ಯೋಪಾಧ್ಯಾಯ ಪಿ.ಎಚ್. ಗೋಸಬಾಳ ಅವರು ಉದ್ಘಾಟಿಸಿ ಮಾತನಾಡಿದ ಕಳೆದ ಹಲವಾರು ವರ್ಷಗಳ ಹಿಂದೆ ನಮ್ಮ ಶಾಲೆಯಲ್ಲಿ ಶಿಕ್ಷಣ ಕಲಿತು, ಇಂದು ವಿದ್ಯೆ ಹಾಗೂ ಜ್ಞಾನ ನೀಡಿದ ಗುರುಗಳನ್ನು ಒಂದೇ ವೇದಿಕೆಯಲ್ಲಿ ಅವರನ್ನು ಅಭಿಮಾನ ಹಾಗೂ ಗೌರವದಿಂದ ಸನ್ಮಾನಿಸಿದ ಕ್ಷಣ ನಮ್ಮ ಜೀವನದಲ್ಲಿ ಎಂದೂ ಮರೆಯಲಾಗದ ಸಂಗತಿಯಾಗಿದೆ. ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಹಲವಾರು ಯೋಜನೆಗಳು ಜಾರಿಗೆ ತಂದಿದ್ದು ಅದನ್ನು ವಿದ್ಯಾರ್ಥಿಗಳು ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಶಿಕ್ಷಕರಾದ ಕೆ.ವಿ.ಕಡ್ಡಿ, ಎಸ್.ಎನ್.ವಡರಟ್ಟಿ, ಆರ್.ಬಿ.ಕರೆಪ್ಪಗೋಳ, ಹಿರೇಮಠ, ಕೃಷ್ಣ ತಡವಳೆ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರು ತಮ್ಮ ಶಾಲೆಯ ದಿನಗಳನ್ನು ಸ್ಮರಿಸಿಕೊಂಡರು. ವಿದ್ಯೆ ಕಲಿಸಿದ ಮಾಧ್ಯಮಿಕ ಶಾಲೆಯ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಿದರು.
ಕಾರ್ಯಕ್ರಮವನ್ನು ಮಾಹಂತೇಶ್ವರಿ ಹಿರೇಮಠ ಪ್ರಾರ್ಥಿಸಿದರು. ಜ್ಯೋತಿ ನಿಲಗಾರ ಸ್ವಾಗತಿಸಿದರು.ಪ್ರಿಯಾ ಕಬಾಡಗಿ ಮತ್ತು ಶೋಭಾ ಕೊತ್ತಲ ನಿರೂಪಿಸಿದರು. ಆರತಿ ಹೊಸಪೇಟೆ ವಂದಿಸಿದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 