ಪಾಲಕರು ಮಕ್ಕಳ ಶಿಕ್ಷಣದ ಬಗ್ಗೆ ಕಾಳಜಿ ವಹಿಸಬೇಕು
ಗದಗ: ಪ್ರತಿಯೊಬ್ಬರು ಸರಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಹಾಗೂ ಸ್ವಚ್ಚತೆ, ಪರಿಸರ, ಆರೋಗ್ಯದ ಕುರಿತು ಸಾರ್ವಜನಿಕರಿಗೆ ಅರಿವನ್ನು ಮೂಡಿಸಬೇಕು, ಪಾಲಕರು ಮಕ್ಕಳ ಶಿಕ್ಷಣದ ಬಗ್ಗೆ ಕಾಳಜಿ ವಹಿಸಬೇಕು ಎಂದು ಗ್ರಾಂ. ಪಂಚಾಯತ ಅಧ್ಯಕ್ಷೆ ಸುಶೀಲಮ್ಮ ತಳವಾರ ನುಡಿದರು.
ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಚುರ್ಚೆಹಾಳ ಗ್ರಾಮದ ಗೋಣಿ ಬಸವೇಶ್ವರ ದೇವಾಲಯದ ಆವರಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಗದಗ ಹಾಗೂ ಗ್ರಾಮ ಪಂಚಾಯತ ಇವರ ಸಹಯೋಗದಲ್ಲಿ ಜಾನಪದ ಮತ್ತು ಬೀದಿ ನಾಟಕದ ಮೂಲಕ ಸರಕಾರದ ಯೋಜನೆ ಕುರಿತು ಜನರಿಗೆ ಜಾಗೃತಿ ಮೂಡಿಸಲು ಕ್ಷೇತ್ರ ಪ್ರಚಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸಿದ್ಧಲಿಂಗೇಶ್ವರ ಜಾನಪದ ಕಲಾತಂಡ ಅಡವಿಸೋಮಾಪೂರ ಹಾಗೂ ಶ್ರೀ ಗುರು ಶಿಷ್ಯ ಪರಂಪರೆ ಜಾನಪದ ಕಲಾತಂಡ ಲಕ್ಕುಂಡಿ ಜಾನಪದ ಕಲಾ ತಂಡದವರು ಗ್ರಾಮದ ಸ್ವಚ್ಚತೆ ಹಾಗೂ ಸಕರ್ಾರದ ವಿವಿಧ ಜನಪರ ಯೋಜನೆಗಳಾದ ಕಿಸಾನ್ ಸಮ್ಮಾನ್, ಸಹಾಯಧನ, ನೇಕಾರರು, ಮೀನುಗಾರರ ಸಾಲಮನಾ, ರೈತರ ಸಾಲಮನ್ನಾ, ಸಮ್ಮಾನ್ ಯೋಜನೆ, ಆಯುಷ ಸಮ್ಮಾನ್ ಕಾರ್ಡ್ ಯೋಜನೆ, ವಿದ್ಯಾಶ್ರೀ ಯೋಜನೆ, ಬೇಟಿ ಬಚಾವೋ ಬೇಟಿ ಪಡಾವೋ, ಭಾಗ್ಯಶ್ರಿ ಯೋಜನೆ, ಗಂಗಾ ಕಲ್ಯಾಣ ಯೋಜನೆ, ರದ್ರಾಪಿ ಯೋಜನೆಗಳ ಕುರಿತು ಆಯಾ ಇಲಾಖೆಯಲ್ಲಿ ಮಾಹಿತಿ ಪಡೆದು ರೈತರು ಇದರ ಸದುಪಯೋಗ ಪಡಿಸಿಕೊಳ್ಳಿ ಎಂದು ಜಾನಪದ ಗೀತೆ ಹಾಗೂ ಬೀದಿ ನಾಟಕದ ಮೂಲಕ ಸಾರ್ವಜನಿಕರಿಗೆ ಜನಜಾಗೃತಿ ಕಾರ್ಯಕ್ರಮಗಳನ್ನು ಪ್ರಸ್ತುತಿಸಿದರು.
ಇದೇ ಸಂದರ್ಭದಲ್ಲಿ ಗ್ರಾಮದ ಹಿರಿಯರಾದ ಮಲ್ಲಪ್ಪ ಕವನೂರ, ಶೇಖರಪ್ಪ ಹರಿಜನ, ಸಿದ್ದಪ್ಪ ಬೆಲ್ಲದ, ಕಲ್ಲಯ್ಯ ಗದಗಿನ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಿಬ್ಬಂದಿ, ಸಾರ್ವಜನಿಕರ ಇದ್ದರು.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 