ಲೋಕದರ್ಶನ ವರದಿ
ಜಿಲ್ಲಾಡಳಿತದಿಂದ ಪರಿನಿರ್ವಾಣ ದಿನ ಆಚರಣೆ
ಬಾಗಲಕೋಟೆ 07: ಜಿಲ್ಲಾಡಳಿತದ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ ಪರಿನಿರ್ವಾಹಣಾ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ ಅವರ ಪುತ್ಥಳಿಗೆ ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ, ಜಿಲ್ಲಾಧಿಕಾರಿ ಜಾನಕಿ ಕೆ.ಎಂ, ಜಿ.ಪಂ ಸಿಇಓ ಶಶೀಧರ ಕುರೇರ, ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ, ಉಪವಿಭಾಗಾಧಿಕಾರಿ ಸಂತೋಷ ಜಗಲಾಸರ ಮಾಲಾರೆ್ಣ ಮಾಡಿ, ಪುಷ್ಪ ಅರ್ಿಸಿದರು.
ಈ ಸಂದರ್ಭದಲ್ಲಿ ಜಿ.ಪಂ ಮುಖ್ಯ ಯೋಜನಾಧಿಕಾರಿ ಪುನಿತ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸದಾಶಿವ ಬಡಿಗೇರ, ಆಹಾರ ಇಲಾಖೆಯ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ, ತೋಟಗಾರಿಕೆ ಉಪನಿರ್ದೇಶಕ ರವೀಂದ್ರ ಹಕಾಟಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪಟ್ಟಣಶೇಟ್ಟಿ, ಖಜಾನೆ ಇಲಾಖೆಯ ಉಪನಿರ್ದೇಶಕ ಶಿವಶರಣಪ್ಪ ಕುಂಬಾರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಹಾಗೂ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.