ರಾಷ್ಟ್ರೀಯ ಹಬ್ಬಗಳಲ್ಲಿ ಸ್ವಯಂ ಪ್ರೇರಿತವಾಗಿ ಭಾಗವಹಿಸಿ: ತಹಸೀಲ್ದಾರ್ ಗುಂಡಪ್ಪಗೊಳ
Participate in national festivals voluntarily: Tahsildar Gundappagola
ಯರಗಟ್ಟಿ, 17 : ತಾಲೂಕು ಆಡಳಿತದ ವತಿಯಿಂದ ಜನವರಿ 26 ರಂದು ಹಮ್ಮಿಕೊಳ್ಳಲಾಗುವ ಗಣರಾಜ್ಯೋತ್ಸವ ದಿನಾಚರಣೆಯನ್ನು ಅತ್ಯಂತ ವ್ಯವಸ್ಥಿತವಾಗಿ ಹಾಗೂ ಸಂಭ್ರಮದಿಂದ ಆಚರಿಸುವ ಕುರಿತು ತಹಸೀಲ್ದಾರ ಎಮ್ ವಿ ಗುಂಡಪ್ಪಗೊಳ ರವರ ಅಧ್ಯಕ್ಷತೆಯಲ್ಲಿ ತಹಸೀಲ್ದಾರ ಕಛೇರಿಯಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು. ಸಭೆಯಲ್ಲಿ ಮುಖ್ಯವಾಗಿ ಧ್ವಜಾರೋಹಣ ಮತ್ತು ಪಥಸಂಚಲನವನ್ನು ಶಿಸ್ತುಬದ್ಧವಾಗಿ ಆಯೋಜಿಸುವ ಕುರಿತು, ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಬಗ್ಗೆ ಹಾಗೂ ಕಾರ್ಯಕ್ರಮದ ಯಶಸ್ವಿಗಾಗಿ ವಿವಿಧ ಇಲಾಖೆಗಳ ಸಮನ್ವಯತೆಯ ಕುರಿತು ವಿಸ್ತೃತವಾಗಿ ಚರ್ಚಿಸಿ ರೂಪುರೇಷೆಗಳನ್ನು ಸಿದ್ಧಪಡಿಸಲಾಯಿತು.ರಾಷ್ಟ್ರೀಯ ಹಬ್ಬಗಳಲ್ಲಿ ಸ್ವಯಂ ಪ್ರೇರಿತವಾಗಿ ಹಾಗೂ ಕಡ್ಡಾಯವಾಗಿ ಭಾಗವಹಿಸಬೇಕುದೇಶದಲ್ಲಿ ರಾಷ್ಟ್ರಾಭಿಮಾನವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಪ್ರತಿಯೊಬ್ಬ ನಾಗರಿಕನು ರಾಷ್ಟ್ರೀಯ ಹಬ್ಬಗಳಲ್ಲಿ ಸ್ವಯಂ ಪ್ರೇರಿತವಾಗಿ ಹಾಗೂ ಕಡ್ಡಾಯವಾಗಿ ಭಾಗವಹಿಸಬೇಕು.
ಈ ಸಂದರ್ಭದಲ್ಲಿ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳೊಂದಿಗೆ ಸುದೀರ್ಘ ಚರ್ಚೆ ನಡೆಸಲಾಯಿತು. ಈ ಸಂದರ್ಭದಲ್ಲಿ ಪ. ಪಂ. ಮುಖ್ಯಾಧಿಕಾರಿ ಮಹೇಶ ಭಜಂತ್ರಿ, ಪಶು ವೈದ್ಯಾಧಿಕಾರಿ ಡಾ. ಎಂ ವ್ಹಿ ಪಾಟೀಲ, ಹೇಸ್ಕಾಂ ಅಧಿಕಾರಿ ಮಹಾಂತೇಶ ಯರಗಟ್ಟಿ, ಶಿವಾನಂದ ಕರಿಗೋನ್ನವರ, ಪ. ಪಂ. ಸದಸ್ಯರಾದ ಹನಮಂತ ಹಾರೂಗೊಪ್ಪ, ಸಲಿಂಬೇಗ ಜಮಾದಾರ, ಆರೋಗ್ಯ ರಕ್ಷಾ ಸಮಿತಿ ಸದಸ್ಯ ಭಾಸ್ಕರ ಹಿರೇಮೆತ್ರಿ, ಕೃಷಿ ಅಧಿಕಾರಿ ಎಂ. ಜಿ. ಕಳಸಪ್ಪನವರ, ಕರವೇ ಅಧ್ಯಕ್ಷ ರಫೀಕ ಡಿ.ಕೆ, ಶಿಕ್ಷಕರಾದ ಬಿ. ಎಸ್. ಆಲದಕಟ್ಟಿ, ಎ. ಎ. ಮಕ್ತುಮನ್ನವರ, ಎಸ್. ಬಿ. ಮಿಕಲಿ, ಎಂ. ಎಂ. ಚಿಲದ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಮತ್ತಿತರರು ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 