ಸ್ವಚ್ಛತೆಯಲ್ಲಿ ಸಹಭಾಗಿತ್ವ: ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ಬೋಧನೆ
Partnership in Cleanliness: Administering the Pledge to Students
ಲಕ್ಷ್ಮೇಶ್ವರ: ‘ಸ್ವಚ್ಛತಾ ಹಿ ಸೇವಾ’ ಕಾರ್ಯಕ್ರಮದ ಅಂಗವಾಗಿ ‘ಸ್ವಚ್ಛತೆಯಲ್ಲಿ ಸಹಭಾಗಿತ್ವ, ಸ್ವಚ್ಛ ವಿಕಸಿತ ಭಾರತ’ ಎಂಬ ಘೋಷವಾಕ್ಯದಡಿ ಪಟ್ಟಣದ ತಾಯಿ ಪಾರ್ವತಿ ಮಕ್ಕಳ ಬಳಗದ ಶಾಲೆಯಲ್ಲಿ ಸ್ವಚ್ಛ ಪಾಠಶಾಲೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಶಾಲೆಯ ಎಲ್ಲ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಸ್ವಚ್ಛತಾ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಸ್ವಚ್ಛತಾ ಹಿ ಸೇವಾ ಲೋಗೊ ಪ್ರದರ್ಶಿಸುವ ಮೂಲಕ ಸ್ವಚ್ಛತೆಯ ಮಹತ್ವದ ಕುರಿತು ಜಾಗೃತಿ ಮೂಡಿಸಲಾಯಿತು.
ಘನತ್ಯಾಜ್ಯ ವಸ್ತುಗಳ ನಾಲ್ಕು ವಿಧದ ವಿಂಗಡಣೆ, ತ್ಯಾಜ್ಯ ನಿರ್ವಹಣೆ ಹಾಗೂ ವೈಯಕ್ತಿಕ ಸ್ವಚ್ಛತೆ ಕುರಿತು ಆರೋಗ್ಯ ಶಿಕ್ಷಣ ನೀಡಲಾಯಿತು. ಈ ಸಂದರ್ಭದಲ್ಲಿ ಪುರಸಭೆ ಮುಖ್ಯಾಧಿಕಾರಿ ಪರಶುರಾಮ ಗುಡದಾರಿ, ಹಿರಿಯ ಆರೋಗ್ಯ ನೀರೀಕ್ಷಣಾಧಿಕಾರಿ ಮಂಜುನಾಥ ಮುದಗಲ್, ತಾಯಿ ಪಾರ್ವತಿ ಮಕ್ಕಳ ಬಳಗದ ಸದಸ್ಯರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 