ಬೆಂಗಳೂರು, ಏ.30,ಲಾಕ್‌ಡೌನ್‌ನಿಂದ ಜನಸಾಮಾನ್ಯರು, ರೈತರು , ಕಾರ್ಮಿಕರು ಸೇರಿದಂತೆ ವಿವಿಧ ವರ್ಗಗಳಿಗಾಗಿರುವ ಸಮಸ್ಯೆಗಳ ಬಗ್ಗೆ ತಳಮಟ್ಟದ ಮಾಹಿತಿ ಸಂಗ್ರಹಿಸಲು ಕಾಂಗ್ರೆಸ್ ಸಿದ್ಧತೆ ನಡೆಸಿದೆ.ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ.ಕೊರೊನಾ ನಿಯಂತ್ರಣದ ವಿಷಯದಲ್ಲಿ ಸರ್ಕಾರಕ್ಕೆ ಕಾಂಗ್ರೆಸ್ ಪಕ್ಷ ಸಂಪೂರ್ಣ ಬೆಂಬಲ ನೀಡುತ್ತದೆಯಾದರೂ ಜನರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸದೇ ಇರುವುದು ಜನಸಾಮಾನ್ಯರ ಆರ್ಥಿಕ ಸ್ಥಿತಿ ಬದುಕು ಕುಸಿದಿರುವುದಕ್ಕೆ ಯಾವುದೇ ರೀತಿಯಲ್ಲಿ ಸರ್ಕಾರಕ್ಕೆ ಸಹಕರಿಸುವುದಿಲ್ಲ ಎಂದರು.ಲಾಕ್ ಡೌನ್‌ನಿಂದಾಗಿ ಜನ ಸಾಮಾನ್ಯರು ತೀವ್ರಸಂಕಷ್ಟಕ್ಕೊಳಗಾಗಿದ್ದಾರೆ. ಅವರ ಆರ್ಥಿಕ ಸ್ಥಿತಿ ಶೋಚನೀಯವಾಗಿದೆ. ಈ ಬಗ್ಗೆ ಸರ್ಕಾರ ಯಾವ ಕ್ರಮವನ್ನೂ ಕೈಗೊಂಡಿಲ್ಲ. ಈ ಬಗ್ಗೆ ತಳಮಟ್ಟದಿಂದ ಮಾಹಿತಿ ಸಂಗ್ರಹಿಸುತ್ತಿರುವುದಾಗಿ ಹೇಳಿದರು. ವಿಶೇಷ ಆರ್ಥಿಕ ಪ್ಯಾಕೇಜನ್ನು ಕೇಂದ್ರ ಘೋಷಿಸಿಲ್ಲ. ಸಾಲ, ಬಡ್ಡಿಯ ಬಗ್ಗೆ ಬ್ಯಾಂಕಿಂಗ್ ಕ್ಷೇತ್ರಕ್ಕೆ ಸರಿಯಾಗಿ ನಿರ್ದೇಶಿಸಿಲ್ಲ. ಇವೆಲ್ಲವನ್ನೂ ಗಮನದಲ್ಲಿಟ್ಟುಕೊಂಡು ಸರ್ಕಾರವನ್ನು ಎಚ್ಚರಿಸುವ ಕೆಲಸ ಮಾಡಲಾಗುವುದು ಎಂದು ಶಿವಕುಮಾರ್ ಹೇಳಿದರು.