ಪತಂಜಲಿ ಯೋಗ ಸಮಿತಿಯಿಂದ ಜೂ21ಅಂತರಾಷ್ಟ್ರೀಯ ಯೋಗ ದಿನಾಚರಣೆ
Patanjali Yoga Committee celebrates International Yoga Day on June 21st
ಕಂಪ್ಲಿ 19: ಪತಂಜಲಿ ಯೋಗ ಸಮಿತಿಯಿಂದ ಜೂ.21ರ ಶನಿವಾರದಂದು ಸ್ಥಳೀಯ ಶಾರದಾ ಶಾಲೆ ಆವರಣದಲ್ಲಿ 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಮ್ಮಿಕೊಳ್ಳಲಾಗಿದೆ ಎಂದು ಪತಂಜಲಿ ಯೋಗ ಸಮಿತಿಯ ತಾಲೂಕು ಪ್ರಭಾರಿ ಡಿ.ಮೌನೇಶ ತಿಳಿಸಿದರು.
ಅವರು ಗುರುವಾರ ಪಟ್ಟಣದಲ್ಲಿ ಪತ್ರಿಕಾ ಪ್ರಕಟಣೆ ನೀಡಿ ಮಾತನಾಡಿ, ಅಂತರಾಷ್ಟ್ರೀಯ ಯೋಗ ದಿನದಂದು ಬೆಳಿಗ್ಗೆ 5:30ರಿಂದ 7ಗಂಟೆವೆಗೆ ಯೋಗ, ಧ್ಯಾನ, ಪ್ರಾಣಾಯಾಮ ನಡೆಯಲಿದ್ದು, ಯೋಗ ಸಾಧಕರಾದ ಬಾಲಚಂದ್ರ ಶರ್ಮ ಇವರು ಉಚಿತವಾಗಿ ಯೋಗ ನಡೆಸಿಕೊಡಲಿದ್ದಾರೆ. ಮುಖ್ಯ ಅತಿಥಿಯಾಗಿ ಶಾಸಕ ಜೆ.ಎನ್.ಗಣೇಶ ಭಾಗವಹಿಸಲಿದ್ದಾರೆ, ಅತಿಥಿಯಾಗಿ ಪುರಸಭೆ ಅಧ್ಯಕ್ಷ ಭಟ್ಟ ಪ್ರಸಾದ್ ಸೇರಿದಂತೆ ಹಲವು ಪಾಲ್ಗೊಳ್ಳಲಿದ್ದಾರೆ. ಜೂ.20ರಂದು ಸಂಜೆ ಸೈಕಲ್ ಮೋಟರ್ ಜಾಥಾ ಕಾರ್ಯಕ್ರಮವು ಶ್ರೀರಾಮ ದೇವಸ್ಥಾನದಿಂದ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಅಧ್ಯಕ್ಷ ಟಿ.ಕೊಟ್ರೇಶ, ಕಾರ್ಯದರ್ಶಿ ಎಸ್.ಜಿ.ಚಿತ್ರಗಾರ್ ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 