ನವಭಾರತ ನಿರ್ಮಾಣದಲ್ಲಿ ಪಟೇಲರ ಪಾತ್ರ ಸದಾಕಾಲ ಸ್ಮರಣೀಯ
Patel's role in building a new India will always be remembered.
ಗದಗ 10: ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ಸ್ವತಂತ್ರ ಭಾರತದ ಮೊದಲ ಉಪ ಪ್ರಧಾನಮಂತ್ರಿ ಮತ್ತು ಗೃಹ ಸಚಿವರಾಗಿ ಸುಮಾರು 565ಕ್ಕೂ ಹೆಚ್ಚು ರಾಜಸಂಸ್ಥಾನಗಳನ್ನು ಭಾರತದ ಒಕ್ಕೂಟಕ್ಕೆ ಸೇರಿಸುವಲ್ಲಿ ನಿರ್ವಹಿಸಿದ ತಂತ್ರ ಮತ್ತು ಕೌಶಲ್ಯಗಳನ್ನು ಭಾರತೀಯರು ಯಾವುದೇ ಕಾಲಕ್ಕೂ ಮರೆಯಲು ಸಾಧ್ಯವಿಲ್ಲವೆಂದು ಪ್ರೊ. ಸುಧಾ ಕೌಜಗೇರಿ ಹೇಳಿದರು.
ಅವರು ಹುಲಕೋಟಿಯ ಕೆ.ಎಚ್. ಪಾಟೀಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್. ಘಟಕ ಆಯೋಜಿಸಿದ್ದ ‘ಸರ್ದಾರ್ ವಲ್ಲಭಭಾಯಿ ಪಟೇಲರ ಜನ್ಮದಿನ ಮತ್ತು ರಾಷ್ಟ್ರೀಯ ಐಕ್ಯತಾ ದಿನ’ ಅಂಗವಾಗಿ ಏರಿ್ಡಸಿದ್ದ ವಿವಿಧ ಸ್ಪರ್ಧೆಗಳ ಬಹುಮಾನ ವಿತರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತ, ವಿದ್ಯಾರ್ಥಿಗಳು ನವರಾಷ್ಟ್ರದ ನಿರ್ಮಾಣದಲ್ಲಿ ಪಟೇಲರ ಪಾತ್ರವನ್ನು ಅರಿಯಲು ಅವರನ್ನು ಓದಿಕೊಳ್ಳಬೇಕೆಂದು ಹೇಳಿದರು.
ಇತಿಹಾಸ ಪ್ರಾಧ್ಯಾಪಕ ಮತ್ತು ಎನ್.ಎಸ್.ಎಸ್. ಘಟಕದ ಕಾರ್ಯಕ್ರಮ ಅಧಿಕಾರಿ ಪ್ರೊ. ಅಪ್ಪಣ್ಣ ಹಂಜೆ ಭಾರತದ ಸ್ವಾತಂತ್ರ್ಯ, ರಾಜಕೀಯ ಏಕೀಕರಣ ಮತ್ತು ನವಭಾರತದ ಸರ್ವತೋಮುಖ ಅಭಿವೃದ್ಧಿಗೆ ತಮ್ಮನ್ನು ಸಂಪೂರ್ಣ ಅರ್ಿಸಿಕೊಂಡ ಪಟೇಲರ ಬದುಕು, ಸಾಧನೆ, ಕೊಡುಗೆಗಳು ಸದಾಕಾಲ ಸ್ಮರಣೀಯವಾಗಿದ್ದು, ವಿದ್ಯಾರ್ಥಿಗಳು ಅವರ ಜೀವನ ಮೌಲ್ಯಗಳು, ಆದರ್ಶಗಳನ್ನು ಓದಿಕೊಂಡು ಸರಳ ಬದುಕು, ದೃಢನಿರ್ಧಾರ, ರಾಷ್ಟ್ರಸೇವೆಯನ್ನು ಮೈಗೂಡಿಸಿಕೊಳ್ಳಬೇಕೆಂದು ಹೇಳಿದರು. ಸಾಂಸ್ಕೃತಿಕ ವಿಭಾಗದ ಸಂಯೋಜಕ ರಮೇಶ ಹುಲಕುಂದ, ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಹುಸೇನಭಾಷ, ಸುಭಾಸ ಹರಿಹರ ಅವರು ಪಟೇಲರ ಬದುಕು, ಹೋರಾಟ, ಚಳುವಳಿ, ರಾಷ್ಟ್ರೀಯ ಏಕತೆ ಕುರಿತು ಮಾತನಾಡಿದರು.
ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗೆ ಐರನ್ ರೆಸೊಲ್ವ್, ಐರನ್ ನೇಷನ್ ವಿಷಯಗಳ ಕುರಿತು ಪ್ರಬಂಧ ಸ್ಪರ್ಧೆ, ‘ವೈವಿಧ್ಯತೆಯಲ್ಲಿ ಏಕತೆ ಭಾರತದ ದೊಡ್ಡ ಶಕ್ತಿ ಮತ್ತು ಅದರ ದೊಡ್ಡ ಪರಿಹಾರ’ ವಿಯದ ಕುರಿತು ಚರ್ಚಾಸ್ಪರ್ಧೆ, ‘ಭಾರತೀಯ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ರೂಪಿಸುವಲ್ಲಿ ಪಟೇಲರ ಪಾತ್ರ’ ಹಾಗೂ ‘ಸರ್ದಾರ್ ಪಟೇಲರು ಮತ್ತು ಸೇವಾ ಮನೋಭಾವ’ ವಿಷಯಗಳ ಕುರಿತು ಉಪನ್ಯಾಸಗಳು, ಪೋಸ್ಟರ್, ಬ್ಯಾನರ್, ಪಟಗಳ ತಯಾರಿಕೆ ಸ್ಪರ್ಧೆಗಳನ್ನು ಏರಿ್ಡಸಿ, ವಿಜೇತರಿಗೆ ಪ್ರಶಸ್ತಿಪತ್ರ ಮತ್ತು ಬಹುಮಾನಗಳನ್ನು ವಿತರಿಸಲಾಯಿತು. ಕಾರ್ಯಕ್ರಮದ ಅಂತ್ಯದಲ್ಲಿ ಪ್ರೊ. ಲಕ್ಷ್ಮಣ ಮುಳಗುಂದ ರಾಷ್ಟ್ರೀಯ ಐಕ್ಯತಾ ದಿನದ ಪ್ರತಿಜ್ಞಾವಿಧಿ ಬೋಧಿಸಿದರು. ಎನ್.ಎಸ್.ಎಸ್. ಸ್ವಯಂ ಸೇವಕರು ಕಾರ್ಯಕ್ರಮ ನಡೆಸಿಕೊಟ್ಟರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 