ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾಗಿ ಪಾಟೀಲ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಕುರಿ ಆಯ್ಕೆ
Patil elected as district president of Primary School Teachers' Association, Kuri as district genera
ಕೊಪ್ಪಳ 22 : ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಜಿಲ್ಲಾ ಘಟಕ ಕೊಪ್ಪಳ 2026-2031 ರ ಅವಧಿಗೆ ನೂತನ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಜಿಲ್ಲಾಧ್ಯಕ್ಷರಾಗಿ ಶರಣಬಸನಗೌಡ ಪಾಟೀಲ,ಉಪಾಧ್ಯಕ್ಷರಾಗಿ ಹೊಳಿಬಸಯ್ಯ.ಕೆ.ಎಮ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಹನುಮಂತಪ್ಪ ಕುರಿ,ಮಹಿಳಾ ಉಪಾಧ್ಯಕ್ಷರಾಗಿ ಶ್ರೀಮತಿ ಮಾಲಾ ಹುನಗುಂದ,ಕೋಶ್ಯಾಧ್ಯಕ್ಷರಾಗಿ ಪಾಂಡುರಂಗ ಅಲ್ಲೂರ ಜಿಲ್ಲಾ ಸಹ ಕಾಯದರ್ಶಿಯಾಗಿ ಬಸವರಾಜ ಕಮಲಾಪೂರ, ಮಹಿಳಾ ಸಹ ಕಾರ್ಯದರ್ಶಿಯಾಗಿ ಶ್ರೀಮತಿ ವಹೀದಾತಾಜ್,ಸಂಘಟನಾ ಕಾರ್ಯದರ್ಶಿಯಾಗಿ ಮುರ್ತೂಜಾಸಾಬ ಮುಜಾವರ ಆಯ್ಕೆಯಾಗಿದ್ದಾರೆ.
ಕೊಪ್ಪಳ ಜಿಲ್ಲಾ ನೂತನ ಪದಾಧಿಕಾರಿಗಳಾಗಿ ಅವಿರೋಧವಾಗಿ ಆಯ್ಕೆಯಾಗಲು ಸಹಕರಿಸಿದ ರಾಜ್ಯ ಘಟಕದ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳು, ಕೊಪ್ಪಳ ಜಿಲ್ಲಾ ಎಲ್ಲಾ ತಾಲೂಕಿನ ಕಾರ್ಯಕಾರಿ ಸಮಿತಿ ಸದಸ್ಯರಿಗೆ ಮತ್ತು ಕೊಪ್ಪಳ ಜಿಲ್ಲೆಯ ಸರ್ವ ಮುಖ್ಯೋಪಾಧ್ಯಾಯರು ಮತ್ತು ಗುರುಗಳು-ಗುರುಮಾತೆಯರಿಗೆ ನೂತನ ಪದಾಧಿಕಾರಿಗಳು ಅಭಿನಂದಿಸಿದ್ದಾರೆ.ಹರ್ಷ : ಕೊಪ್ಪಳ ಜಿಲ್ಲಾ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಶರಣಬಸವನಗೌಡ ಪಾಟೀಲ್, ಜಿಲ್ಲಾ ಉಪಾಧ್ಯಕ್ಷರಾಗಿ ಹೊಳಿಬಸಯ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಹನುಮಂತಪ್ಪ ಕುರಿ ಸೇರಿದಂತೆ ಉಳಿದ ನೂತನ ಪದಾಧಿಕಾರಿಗಳು ಆಯ್ಕೆಯಾಗಿದ್ದು ಶಿಕ್ಷಕ ವೃಂದ ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದೆ.
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್ 