ವಿದ್ಯಾರ್ಥಿಗಳಲ್ಲಿ ರಾಷ್ಟ್ರೇ​‍್ರಮ ಬೆಳೆಸಬೇಕು: ಗುರುತಿಗಿರಿ ಕಿವಿಮಾತು

ವಿದ್ಯಾರ್ಥಿಗಳಲ್ಲಿ ರಾಷ್ಟ್ರೇ​‍್ರಮ ಬೆಳೆಸಬೇಕು: ಗುರುತಿಗಿರಿ ಕಿವಿಮಾತು  Patriotism must be fostered among students: Gurutigiri's advice

ಲೋಕದರ್ಶನ ವರದಿ 

ಧಾರವಾಡ 06 : ವಿದ್ಯಾರ್ಥಿಗಳಲ್ಲಿ ರಾಷ್ಟ್ರೇ​‍್ರಮ ಹಾಗೂ ರಾಷ್ಟ್ರಾಭಿಮಾನ ಬೆಳೆಸುವುದು ಅಗತ್ಯ ಎಂದು ಧಾರವಾಡ ನಿವೃತ್ತ ನೌಕರರ ಸಹಕಾರಿ ಸಂಘದ ಅಧ್ಯಕ್ಷ ಗುರುತಿಗಿರಿ ಕಿವಿಮಾತು ಹೇಳಿದರು.  

ಕರ್ನಾಟಕ ವಿದ್ಯಾವರ್ಧಕ ಸಂಘದ ಮಹಿಳಾ ಮತ್ತು ಮಕ್ಕಳ ಮಂಟಪ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ವನಹಳ್ಳಿ ಇವರ ಸಹಯೋಗದಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆಗಸ್ಟ್‌ 4ರಂದು ಆಯೋಜಿಸಿದ್ದ ಸ್ವಾತಂತ್ರ್ಯ ಚಳವಳಿ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.  

ಇಂದಿನ ಸಂಕ್ರಮಣ ಕಾಲದಲ್ಲಿ ರಾಷ್ಟ್ರೇ​‍್ರಮದ ಅಗತ್ಯ ಹೆಚ್ಚಾಗಿದೆ. ವಿದ್ಯಾರ್ಥಿಗಳು ದೇಶಾಭಿಮಾನ ಬೆಳೆಸಿಕೊಂಡು ನಿಸ್ವಾರ್ಥತೆಯಿಂದ ದೇಶದ ಪ್ರಗತಿಗೆ ದುಡಿಯಬೇಕು ಎಂದು ಅವರು ಹೇಳಿದರು.  

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವೀರಭದ್ರಯ್ಯ ಚಿಕ್ಕಮಠ ಅವರು, ವಿದ್ಯಾರ್ಥಿಗಳು ದೇಶದ ಅಭಿವೃದ್ಧಿಗೆ ಶ್ರಮಿಸುವ ಸಂಕಲ್ಪ ಮಾಡಬೇಕು ಎಂದರು. ಸ್ವಾತಂತ್ರ್ಯ ಹೋರಾಟದಲ್ಲಿ ಅನೇಕ ನಾಯಕರು ತ್ಯಾಗ ಮತ್ತು ಬಲಿದಾನ ಮಾಡಿದ್ದಾರೆ. ಅವರ ಕೊಡುಗೆಯನ್ನು ಸ್ಮರಿಸಿ, ದೊರೆತ ಸ್ವಾತಂತ್ರ್ಯವನ್ನು ಉಳಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಹೇಳಿದರು.  

ಕಾರ್ಯಕ್ರಮದಲ್ಲಿ ಮಕ್ಕಳಿಗಾಗಿ ದೇಶಭಕ್ತಿ ಗೀತೆ ಹಾಗೂ ಸ್ವಾತಂತ್ರ್ಯ ಹೋರಾಟಗಾರರ ಕುರಿತು ಭಾಷಣ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. 25ಕ್ಕೂ ಹೆಚ್ಚು ಶಾಲಾ ಮಕ್ಕಳು ಭಾಗವಹಿಸಿದ್ದರು. ವಿಜೇತರಿಗೆ ಬಹುಮಾನ ಹಾಗೂ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು.  

ಮಹಿಳಾ ಮತ್ತು ಮಕ್ಕಳ ಮಂಟಪದ ಸಂಚಾಲಕಿ ಡಾ. ಶೈಲಜಾ ಅಮರಶೆಟ್ಟಿ ಸ್ವಾಗತಿಸಿದರು. ಡಾ. ವಿ. ಶಾರದಾ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಶಾಲೆಯ ಮುಖ್ಯ ಶಿಕ್ಷಕಿ ಎಲ್‌.ಐ. ಲಕ್ಕಮ್ಮ ಅತಿಥಿಗಳನ್ನು ಪರಿಚಯಿಸಿದರು.  

ಕಾರ್ಯಕ್ರಮದಲ್ಲಿ ಡಾ. ಕರುಣಾ ಹಳಿಕೇರಿ, ಶಶಿಕಲಾ ಶಾಸ್ತ್ರಿಮಠ, ಗೀತಾಗಾಣಿ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶಕುಂತಲಾ ಭಜಂತ್ರಿ, ಶಾಲಾ ಸಿಬ್ಬಂದಿ, ಎಸ್ಡಿಎಂಸಿ ಸದಸ್ಯರು, ಗ್ರಾಮಸ್ಥರು ಹಾಗೂ ಪಾಲಕರು ಭಾಗವಹಿಸಿದ್ದರು.