‘ಏಕತಾ ನಡಿಗೆ’ಯಲ್ಲಿ ಮೊಳಗಿದ ದೇಶಭಕ್ತಿ
Patriotism resounded in the 'Unity Walk'
ಯಲಬುರ್ಗಾ 31 : ‘ಸರ್ದಾರ್ ವಲ್ಲಭಭಾಯ್ ಪಟೇಲ್ ಅವರು ದೇಶದ ಎಲ್ಲ ಸಂಸ್ಥಾನಗಳನ್ನು ಒಗ್ಗೂಡಿಸಿದರು. ದೇಶದ ಐಕ್ಯತೆ, ಸಮಗ್ರತೆ, ಆಂತರಿಕ ಭದ್ರತೆಗಾಗಿ ಶ್ರಮಿಸಿದ ಮಹನೀಯ’ ಎಂದು ಪಿಎಸ್‌ಐ ಎಸ್ ಪಿ ನಾಯ್ಕ ಬಣ್ಣಿಸಿದರು. ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಜಯಂತ್ಯುತ್ಸವ ಅಂಗವಾಗಿ ತಾಲೂಕಿನ ಬೇವೂರು ಪೊಲೀಸ್ ಠಾಣೆಯಲ್ಲಿ ಶುಕ್ರವಾರ ದಂದು ಏರಿ್ಡಸಿದ್ದ ರಾಷ್ಟ್ರೀಯ ಏಕತಾ ದಿನ ಅಂಗವಾಗಿ ಏಕತಾ ನಡಿಗೆಗೆ ಹಸಿರು ನಿಶಾನೆ ತೋರಿ ಚಾಲನೆ ನೀಡಿ ಅವರು ಮಾತನಾಡಿದರು.
ಏಕತಾ ದಿನವು ಪೊಲೀಸ್ ಇಲಾಖೆಗೆ ಮಹತ್ವದ ದಿನ. ಸರ್ದಾರ್ ವಲ್ಲಭಭಾಯ್ ಪಟೇಲ್ ಅವರು ದೇಶಕ್ಕಾಗಿ ಅಪಾರ ಕೊಡುಗೆ ನೀಡಿದ್ದಾರೆ. ಅವರ ಕಾರ್ಯಸಾಧನೆಗಳು ನಮಗೆಲ್ಲರಿಗೂ ಸ್ಫೂರ್ತಿಯಾಗಿವೆ. ಐಕ್ಯತೆ, ಸಮಗ್ರತೆ, ಆಂತರಿಕ ಭದ್ರತೆ ನಿಟ್ಟಿನಲ್ಲಿ ಒಗ್ಗೂಡಿ ಕಾರ್ಯನಿರ್ವಹಿಸಲು ಈ ಏಕತಾ ದಿನ ಆಚರಣೆ ಪ್ರೇರಣೆಯಾಗಿದೆ ಎಂದರು. ಈ ಕಾರ್ಯಕ್ರಮ ವಿಶೇಷವಾಗಿ ಶಾಲಾ ಕಾಲೇಜು ಮಕ್ಕಳಿಗೆ ಪ್ರಬಂಧ ಸ್ಪರ್ಧೆ, ಏಕತಾ ನಡಿಗೆ ಕಾರ್ಯಕ್ರಮ ಹಾಗೂ 1000 ಮೀಟರ್ ಮೆರಾಥನ್ ಕಾರ್ಯಕ್ರಮ ಆಯೋಜಿಸಲಾಗಿತ್ತು ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಈ ವೇಳೆ ಪೊಲೀಸ್ ಸಿಬ್ಬಂದಿ ಮಂಜುನಾಥ್, ಶಂಕ್ರಯ್ಯ, ಬಸವರಾಜ್, ರವಿ ರಾಠೋಡ್, ಜಗದೀಶ್, ಬಾಲಪ್ಪ, ಗವಿಸಿದ್ದಯ್ಯ, ಶರಣಪ್ಪ ಹನುಮಂತ್ ಬಸವರಾಜ್ ಹಾಜರಿದ್ದರು ಹಾಗೂ ಕಾಲೇಜಿನ ಉಪನ್ಯಾಸಕರು ಮತ್ತು ವೈದ್ಯಕೀಯ ಸಿಬ್ಬಂದಿಗಳು ವಿದ್ಯಾರ್ಥಿಗಳು ಇದ್ದರು.
ಆಗಸ್ಟ್ 6ರ ವಿಧಾನಸಭೆ ಅಧಿವೇಶನಕ್ಕೂ ಮುನ್ನ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಸಿಎಂ ಡಿ.ಕೆ. ಶಿವಕುಮಾರ್
ರಾಜಸ್ಥಾನದ ಬಾಲೋತ್ರಾ-ಜೋಧ್ಪುರ ಹೆದ್ದಾರಿಯಲ್ಲಿ ಎಸ್ಯುವಿ-ಡಂಪರ್ ಡಿಕ್ಕಿ: ಐವರು ಸಾವು, ಮೂವರಿಗೆ ಗಾಯ
ಬಕ್ಕಖಾಲಿ ಕರಾವಳಿಯಲ್ಲಿ ಮುಳುಗಿದ್ದ ಮೀನುಗಾರಿಕಾ ದೋಣಿಯಲ್ಲಿ 9 ಮೀನುಗಾರರ ಶವ ಪತ್ತೆ; 6 ಮಂದಿಗಾಗಿ ಶೋಧ ಮುಂದುವರಿಕೆ
ಅಂತರರಾಷ್ಟ್ರೀಯ ಭೌತಶಾಸ್ತ್ರ ಒಲಿಂಪಿಯಾಡ್ 2026ರಲ್ಲಿ ಚಿನ್ನದ ಪದಕಗಳ ಸಾಧನೆ ಮಾಡಿದ ಭಾರತೀಯ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ
ಶಾಸಕರ ಆಮಿಷ ಆರೋಪದ ಕಾನೂನು ನೋಟಿಸ್ ಬಳಿಕ ಬಿಜೆಪಿ ನ್ಯಾಯಾಲಯದ ಮೂಲಕ ರಾಜಕೀಯ ಹೋರಾಟ ನಡೆಸುತ್ತಿದೆ ಎಂದು ಒಮರ್ ಅಬ್ದುಲ್ಲಾ ಆರೋಪ
ಮಧುರೈ ಸಮೀಪ ಓಮ್ನಿ ಬಸ್–ಟಿಎನ್ಎಸ್ಟಿಸಿ ಬಸ್ ಮುಖಾಮುಖಿ ಡಿಕ್ಕಿ: ಐವರು ಸಾವು, 42 ಮಂದಿಗೆ ಗಾಯ 