ಸಮಯೋಚಿತ ಕಾರ್ಯಾಚರಣೆಯಿಂದ ರಕ್ಷಣೆ ಮಾಡಿದ ಗಸ್ತು ವನಪಾಲಕ ಮುತ್ತುರಾಜ್ ಹಳ್ಳಿ
Patrol forest ranger Muthuraj Halli saved the day with a timely operation
ಮುಂಡಗೋಡ 17: ತಾಲೂಕಿನ ರಾಮಾಪುರ ಗ್ರಾಮದ ಬಸವರಾಜ ಈಳಿಗೇರ್ ಅವರ ಮನೆಯ ಸಮೀಪ ಮಂಗಳವಾರ ರಾತ್ರಿ ಸುಮಾರು 9 ಗಂಟೆಯ ವೇಳೆಗೆ ಹೆಬ್ಬಾವು ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ಭಯದ ವಾತಾವರಣ ನಿರ್ಮಾಣವಾಗಿತ್ತು.
ವಿಷಯ ತಿಳಿದ ತಕ್ಷಣ ಉರಗ ತಜ್ಞ ಹಾಗೂ ಗಸ್ತು ವನಪಾಲಕರಾದ (ಬೀಟ್ ಫಾರೆಸ್ಟರ್) ಮುತ್ತುರಾಜ್ ಹಳ್ಳಿ ಅವರಿಗೆ ಮಾಹಿತಿ ನೀಡಲಾಗಿತ್ತು. ಮಾಹಿತಿ ಪಡೆದ ಕೂಡಲೇ ಸ್ಥಳಕ್ಕೆ ಆಗಮಿಸಿದ ಮುತ್ತುರಾಜ್ ಹಳ್ಳಿ ಅವರು ಯಾವುದೇ ಅಪಾಯ ಸಂಭವಿಸದಂತೆ ಅತ್ಯಂತ ಎಚ್ಚರಿಕೆಯಿಂದ ಹೆಬ್ಬಾವನ್ನು ಹಿಡಿದು ರಕ್ಷಿಸಿದರು. ನಂತರ ಸಾರ್ವಜನಿಕರಲ್ಲಿ ಹಾವುಗಳ ಬಗ್ಗೆ ಜಾಗೃತಿ ಮೂಡಿಸಿ, ಹಿಡಿದ ಹೆಬ್ಬಾವನ್ನು ಅರಣ್ಯ ಪ್ರದೇಶಕ್ಕೆ ಸುರಕ್ಷಿತವಾಗಿ ಬಿಡಲಾಯಿತು. ಅವರ ಸಮಯೋಚಿತ ಕಾರ್ಯಾಚರಣೆಯಿಂದ ಸಂಭವಿಸಬಹುದಾದ ಅನಾಹುತ ತಪ್ಪಿದೆ.
ಈ ಕಾರ್ಯಾಚರಣೆಯಲ್ಲಿ ಪ್ರಕಾಶ ಈಳಿಗೇರ್, ಸುರೇಶ ಈಳಿಗೇರ್, ಪರಶುರಾಮ ಈಳಿಗೇರ್, ಹನುಮಂತ ಕಾರ್ಗಿ, ಮಹೇಶ ಅಕ್ಕಿಹೊಳಿ, ನಾಗರಾಜ ವಡ್ಡರ ಸೇರಿದಂತೆ ಇತರರು ಸಹಕಾರ ನೀಡಿದರು. ವನ ಇಲಾಖೆಯ ತ್ವರಿತ ಸ್ಪಂದನೆಗೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 