ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸಿ: ಸಫಾಯಿ ಸಿಬ್ಬಂದಿಗೆ ಮುರಳಿ ಅಶೋಕ್ ಸಲಪ್ಪ ಸಲಹೆ
Pay greater attention to health: Murali Ashok Salappa advises sanitation staff
ರಾಣೆಬೆನ್ನೂರು 19: ಸಫಾಯಿ ಸಿಬ್ಬಂದಿ ಸಮಾಜದ ಸ್ವಚ್ಛತೆ ಮತ್ತು ಸಾರ್ವಜನಿಕ ಆರೋಗ್ಯ ಕಾಪಾಡುವಲ್ಲಿ ಮಹತ್ವದ ಪಾತ್ರವಹಿಸುತ್ತಿದ್ದಾರೆ. ಆದ್ದರಿಂದ ಅವರು ತಮ್ಮ ಆರೋಗ್ಯದ ಬಗ್ಗೆಯೂ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುರಳಿ ಅಶೋಕ್ ಸಲಪ್ಪ ಹೇಳಿದರು.
ನಗರಸಭೆ, ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ ಹಾಗೂ ಹಾವೇರಿ ಜಿಲ್ಲಾ ಘಟಕದ ಸಂಯುಕ್ತ ಆಶ್ರಯದಲ್ಲಿ ನಗರಸಭೆಯ ಎಂ. ವಿಶ್ವೇಶ್ವರಯ್ಯ ಸಭಾಭವನದಲ್ಲಿ ಶನಿವಾರ ಆಯೋಜಿಸಿದ್ದ ಆರೋಗ್ಯ ತಪಾಸಣೆ ಶಿಬಿರ, ಆರೋಗ್ಯ ವಿಮೆ ಯೋಜನೆ ಹಾಗೂ ವಿಮೆ ಕಾರ್ಡ್ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ರಾಜ್ಯದಲ್ಲಿ ಸಾವಿರಾರು ಮ್ಯಾನ್ಹೋಲ್ ಕಾರ್ಮಿಕರಿದ್ದು, ಅವರಿಗೂ ಆರೋಗ್ಯ ವಿಮೆ ಸೌಲಭ್ಯ ವಿಸ್ತರಿಸಲು ಸರ್ಕಾರ ಚಿಂತನೆ ನಡೆಸಿದೆ. ಸಫಾಯಿ ಸಿಬ್ಬಂದಿಯ ಆರೋಗ್ಯ ರಕ್ಷಣೆ ಸರ್ಕಾರದ ಆದ್ಯತೆಯಾಗಿದ್ದು, ರಾಜ್ಯದ ಎಲ್ಲ ನೇರ ವೇತನದ ಪೌರಕಾರ್ಮಿಕರಿಗೆ ಆರೋಗ್ಯ ವಿಮೆ ಕಾರ್ಡ್ ನೀಡುವ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದರು.
ಭವಿಷ್ಯದಲ್ಲಿ ತಂತ್ರಜ್ಞಾನ ಬಳಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಾರ್ಮಿಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಉತ್ತಮ ಭವಿಷ್ಯ ರೂಪಿಸಬೇಕು ಎಂದು ಕರೆ ನೀಡಿದರು. ಸಮಾಜದಲ್ಲಿ ಸಫಾಯಿ ಸಿಬ್ಬಂದಿಗೆ ಗೌರವಯುತ ಸ್ಥಾನಮಾನ ದೊರಕುವಂತೆ ವಿವಿಧ ಕಲ್ಯಾಣ ಯೋಜನೆಗಳನ್ನು ಜಾರಿಗೊಳಿಸಲಾಗಿದ್ದು, ಅವುಗಳ ಸದುಪಯೋಗ ಪಡೆದು ಸ್ವಾವಲಂಬಿ ಜೀವನ ಕಟ್ಟಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಅಪಘಾತ ವಿಮೆ ಯೋಜನೆಗಳ ಕುರಿತು ವ್ಯವಸ್ಥಾಪಕ ನಿರ್ದೇಶಕ ಬಿ.ಟಿ. ಮಂಜುನಾಥ್, ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಟಿ. ಕುಮಾರ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಚಂದ್ರ್ಪ, ಹಾವೇರಿ ಜಿಲ್ಲಾ ವ್ಯವಸ್ಥಾಪಕಿ ಮಾಲತಿ ಹೆಬಸೂರ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಕಾವ್ಯಶ್ರೀ ಮಾಹಿತಿ ನೀಡಿದರು.
ಜಿಲ್ಲಾ ವ್ಯವಸ್ಥಾಪಕಿ ಮಾಲತಿ ಹೆಗಸೂರು ಸ್ವಾಗತಿಸಿದರು. ನಗರಸಭೆ ಪೌರಾಯುಕ್ತ ಫಕ್ಕೀರ್ಪ ಇಂಗಳಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ನಗರಸಭೆಯ ಮಾಜಿ ಸದಸ್ಯರು, ಪೌರಕಾರ್ಮಿಕರ ಸಂಘದ ಪದಾಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು. ಆರೋಗ್ಯ ಜಾಗೃತಿ ಮತ್ತು ಆರೋಗ್ಯ ತಪಾಸಣೆ ಶಿಬಿರದಲ್ಲಿ ನೂರಾರು ಪೌರಕಾರ್ಮಿಕರು ಭಾಗವಹಿಸಿ ಆರೋಗ್ಯ ಪರೀಕ್ಷೆ ಮಾಡಿಸಿಕೊಂಡರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 