ಲೋಕದರ್ಶನ ವರದಿ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಯಾದ ನಂತರ ಮೊದಲ ಬಾರಿಗೆ ಕಣಿವೆ ರಾಜ್ಯಕ್ಕೆ ಭೇಟಿ ನೀಡಿದ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು, ಪ್ರಾಮಾಣಿಕ, ಪರಿಣಾಮಕಾರಿ ಮತ್ತು ದಕ್ಷ ಆಡಳಿತದ ಮೂಲಕ ಕಾಶ್ಮೀರದಲ್ಲಿ ಶಾಂತಿ ಮತ್ತು ಸ್ಥಿರತೆ ತರುವುದಾಗಿ ಗುರುವಾರ ಹೇಳಿದ್ದಾರೆ.
ಕಾಶ್ಮೀರ ರಾಜ್ಯಪಾಲ ಎನ್ಎನ್ ವೊಹ್ರಾ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಭಾಗವಹಿಸಿದ್ದ ಉನ್ನತ ಮಟ್ಟದ್ದ ಭದ್ರತಾ ಪರಿಶೀಲನಾ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಾಜನಾಥ್ ಸಿಂಗ್, ರಾಜ್ಯದಲ್ಲಿ ಶಾಂತಿ ಸ್ಥಾಪಿಸಿದ ನಂತರವೇ ಕಾಶ್ಮೀರಿ ಜನತೆಗೆ ಅಭಿವೃದ್ಧಿಯ ಕನಸು ನನಸಾಗಲಿದೆ ಎಂದರು.
ಕಾಶ್ಮೀರದಲ್ಲಿ ಶಾಂತಿ ಸ್ಥಾಪಿಸಲು ಮತ್ತು ಆಡಳಿತದಲ್ಲಿ ಪಾರದರ್ಶಕತೆ ತರಲು ಕೇಂದ್ರ ಸಕರ್ಾರ ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಲು ಬದ್ಧವಾಗಿದೆ ಎಂದರು.
ಬಿಜೆಪಿ, ಪಿಡಿಪಿಗೆ ನೀಡಿದ್ದ ಬೆಂಬಲ ಹಿಂಪಡೆದ ಹಿನ್ನೆಲೆಯಲ್ಲಿ ಮೆಹಬೂಬ ಮುಫ್ತಿ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ನಂತರ ಜೂನ್ 20ರಂದು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಲಾಗಿದೆ.