ಆಲಮೇಲದಲ್ಲಿ ಶಾಂತಿ ಸಭೆ: ಕಾನೂನು ಪಾಲನೆಯೊಂದಿಗೆ ಈದ್ ಮಿಲಾದ್ ಆಚರಣೆಗೆ ಕರೆ
Peace meeting in Alamel: Call to celebrate Eid Milad while adhering to the law.
ಆಲಮೇಲ ೨೪: ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಆಲಮೇಲ ಪೊಲೀಸ್ ಠಾಣೆ ಆವರಣದಲ್ಲಿ ಭಾನುವಾರ ಸಂಜೆ ೫.೩೦ಕ್ಕೆ ಶಾಂತಿ ಸಭೆ ನಡೆಯಿತು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಆಲಮೇಲ ಪಿಎಸ್‌ಐ ಅರವಿಂದ ಅಂಗಡಿ ಮಾತನಾಡಿ, ಭೇದಭಾವ ಮರೆತು ಶಾಂತಿಯುತವಾಗಿ ಹಾಗೂ ಕಾನೂನು ಪಾಲನೆಯೊಂದಿಗೆ ಈದ್ ಮಿಲಾದ್ ಆಚರಿಸಬೇಕು. ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡಬಾರದು ಎಂದು ಮನವಿ ಮಾಡಿದರು.
ಸಾರ್ವಜನಿಕ ಸ್ಥಳಗಳಲ್ಲಿ ಆಕ್ಷೇಪಾರ್ಹ ಪೋಸ್ಟರ್ಗಳನ್ನು ಹಾಕುವುದು, ಜಾತಿ ನಿಂದನೆ ಮಾಡುವುದು, ಅನ್ಯ ಧರ್ಮದವರೊಂದಿಗೆ ಅಸಭ್ಯವಾಗಿ ವರ್ತಿಸುವುದು, ವಾಟ್ಸ್ಆ್ಯಪ್ ಹಾಗೂ ಫೇಸ್ಬುಕ್ನಲ್ಲಿ ಅಶ್ಲೀಲ ಅಥವಾ ಪ್ರಚೋದನಕಾರಿ ಪದಗಳನ್ನು ಬಳಸುವುದು ಕಂಡುಬAದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು. ಇಂತಹ ಘಟನೆಗಳು ಸಾಮಾಜಿಕ ಮುಖಂಡರ ಮೇಲೂ ಪರಿಣಾಮ ಬೀರುತ್ತವೆ. ಯಾವುದೇ ಘಟನೆ ಕಂಡುಬAದರೂ ತಕ್ಷಣ ಪೊಲೀಸರ ಗಮನಕ್ಕೆ ತರಬೇಕು ಎಂದರು.
ಯುವ ಮುಖಂಡ ಹರೀಶ್ ಯಂಟಮನಿ ಮಾತನಾಡಿ, ಕಲಬುರಗಿಯಲ್ಲಿ ಈದ್ ಮಿಲಾದ್ ಹಬ್ಬವನ್ನು ವಿಶೇಷವಾಗಿ ಆಚರಿಸುವುದನ್ನು ಕಂಡಿದ್ದೇನೆ. ಅದೇ ರೀತಿಯಲ್ಲಿ ಆಲಮೇಲದಲ್ಲಿಯೂ ಭೇದಭಾವ ಮರೆತು ಸೌಹಾರ್ದತೆಯಿಂದ ಹಬ್ಬ ಆಚರಿಸೋಣ ಎಂದು ಕರೆ ನೀಡಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಾಧಿಕ್ ಸುಂಬಡ, ಮೈಬೂಬ್ ಮಸಳಿ, ರಾಜ್ ಅಹ್ಮದ್ ಪಟೇಲ್, ಬಾಬು ಕೊತ್ತಂಬರಿ, ಮುನ್ನಾ ಚೌಧರಿ, ಉಮರ್ ಬೀಳವಾರ, ಪಿಎಸ್‌ಐ ಸುರೇಶ್ ಜಾಲಗೇರಿ ಸೇರಿದಂತೆ ಪೊಲೀಸ್ ಸಿಬ್ಬಂದಿ ಹಾಗೂ ಮುಖಂಡರು ಸಭೆಯಲ್ಲಿ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 