ತಾಳಿಕೋಟಿಯಲ್ಲಿ ಗಣಪತಿ ಮಂಡಳಿಗಳ ಶಾಂತಿ ಸಭೆ
Peace meeting of Ganapati committees in Talikoti
ತಾಳಿಕೋಟಿ 10 : ಪಟ್ಟಣದ ವಿಠ್ಠಲ ಮಂದಿರ ಸಭಾಭವನದಲ್ಲಿ ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣಪತಿ ಮಂಡಳಿಗಳ ಶಾಂತಿ ಸಭೆಯನ್ನು ಬಸವನಬಾಗೇವಾಡಿ ಡಿವೈಎಸ್ಪಿ ಚಂದ್ರಕಾಂತ್ ನಂದಾರೆಡ್ಡಿ ಇವರ ನೇತೃತ್ವದಲ್ಲಿ ಮಂಗಳವಾರ ಸಂಜೆ ಹಮ್ಮಿಕೊಳ್ಳಲಾಯಿತು. ಸಭೆಯಲ್ಲಿ ಗಣಪತಿ ಮಂಡಳಿಗಳ ಪದಾಧಿಕಾರಿಗಳು, ಊರಿನ ಮುಖಂಡರು, ಯುವಕರು ಹಾಗೂ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದು, ಗಣೇಶೋತ್ಸವವನ್ನು ಶಾಂತಿ, ಸೌಹಾರ್ದತೆ ಹಾಗೂ ಸಂಭ್ರಮದಿಂದ ಆಚರಿಸುವ ಕುರಿತು ಚರ್ಚಿಸಲಾಯಿತು. ಗಣೇಶೋತ್ಸವದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದೆ, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಂಡು ಹಬ್ಬವನ್ನು ಶಾಂತಿಯುತವಾಗಿ ಆಚರಿಸುವಂತೆ ಸಭೆಯಲ್ಲಿ ಸಲಹೆ ನೀಡಲಾಯಿತು. ಸಾರ್ವಜನಿಕರು ಹಾಗೂ ಗಣಪತಿ ಮಂಡಳಿಯವರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಲಾಯಿತು. ಈ ಸಂದರ್ಭದಲ್ಲಿ ಸಿಪಿಐ ಮೊಹಮ್ಮದ್ ಫಸೀವುದ್ದೀನ, ಪಿಎಸ್‌ಐ ಜ್ಯೋತಿ ಕೋತ, ವಿವಿಧ ಗಣಪತಿ ಮಂಡಳಿಗಳ ಪದಾಧಿಕಾರಿಗಳು, ಮುಖಂಡರು, ಯುವಕರು ಹಾಗೂ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 