ಅಪರಿಚಿತ ವಾಹನ ಡಿಕ್ಕಿ : ನವಿಲು ಸಾವು
Peacock dies after being hit by unknown vehicle
ಕಾಗವಾಡ 20: ತಾಲೂಕಿನ ಶಿರಗುಪ್ಪಿ-ಕಾಗವಾಡ ರಾಷ್ಟ್ರೀಯ ಹೆದ್ದಾರಿ ಮಧ್ಯೆ ರಾಷ್ಟ್ರೀಯ ಪಕ್ಷಿ ನವಿಲು ಅಪಘಾತದಲ್ಲಿ ಮೃತ ಪಟ್ಟಿರುವ ಘಟನೆ ಗುರುವಾರ ದಿ. 19 ರಂದು ಸಂಜೆ 5 ರಿಂದ 6 ಘಂಟೆ ಸುಮಾರಿಗೆ ಸಂಭವಿಸಿದೆ.
ರಸ್ತೆಯ ಪಕ್ಕದಿಂದ ಹಾರಿ ಹೋಗುತ್ತಿರುವ ನವಿಲಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು, ನವಿಲು ಸ್ಥಳದಲ್ಲಿಯೇ ಸಾವನ್ನಪ್ಪಿದೆ. ಈ ಕುರಿತು ಸಾರ್ವಜನಿಕರು ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿರುವುದಾಗಿ ತಿಳಿದು ಬಂದಿದೆ.
ಅಥಣಿ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸದೇ ಇರುವುದರಿಂದ ಅಲ್ಲಿ ಸೇರಿದ್ದ ನ್ಯಾಯವಾದಿ ಬಿ.ಜೆ. ಮೋಳೆ ಮತ್ತು ಸ್ಥಳೀಯರು ಸೇರಿ ನವಿಲಿನ ಮೃತದೇಹವನ್ನು ಖಾಸಗಿ ವಾಹನದಲ್ಲಿ ಕಾಗವಾಡದ ಅರಣ್ಯ ಇಲಾಖೆಯ ಚೆಕ್ ಪೋಸ್ಟ್‌ಗೆ ಕಳುಹಿಸಿಕೊಟ್ಟಿದ್ದಾರೆಂದು ತಿಳಿದು ಬಂದಿದೆ.
ರಾಷ್ಟ್ರೀಯ ಪಕ್ಷ ಮೃತ್ತಪಟ್ಟರೂ ಸ್ಥಳಕ್ಕಾಗಮಿಸದ ಅರಣ್ಯ ಇಲಾಖೆಯ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 