ಅಲ್ಪ ಮಳೆಗೆ ರಸ್ತೆಯಲ್ಲಿ ರಸ್ತೆ ಪಾದಚಾರಿಗಳು; ಸಾರ್ವಜನಿಕರ ಪರದಾಟ
Pedestrians struggle on the road due to light rain; public faces hardship
ಮುದ್ದೇಬಿಹಾಳ, ಜು. 6: ಅಲ್ಪ ಪ್ರಮಾಣದ ಮಳೆಯಲ್ಲೇ ಪಟ್ಟಣದ ಕೆಲ ರಸ್ತೆಗಳಲ್ಲಿ ನೀರು ನಿಂತು ಕೆಸರಿನ ವಾತಾವರಣ ನಿರ್ಮಾಣವಾಗುತ್ತಿದ್ದು, ಪಾದಚಾರಿಗಳು ಹಾಗೂ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಪಟ್ಟಣದಲ್ಲಿ ಸುಸಜ್ಜಿತ ರಸ್ತೆಗಳನ್ನು ನಿರ್ಮಿಸಿದ್ದರೂ, ಸಮರ್ಕ ಮಳೆನೀರು ಹರಿವಿನ ವ್ಯವಸ್ಥೆಯ ಕೊರತೆಯಿಂದ ಸಾರ್ವಜನಿಕರಿಗೆ ಸಮಸ್ಯೆ ಎದುರಾಗಿದೆ. ಅಲ್ಪ ಪ್ರಮಾಣದ ಮಳೆಯಾದರೂ ರಸ್ತೆಗಳಲ್ಲಿ ನೀರು ನಿಂತು ಕೆಸರು ಆವರಿಸುತ್ತಿದ್ದು, ದ್ವಿಚಕ್ರ ವಾಹನ ಸವಾರರು ಹಾಗೂ ಪಾದಚಾರಿಗಳು ಸಂಚಾರಕ್ಕೆ ಹರಸಾಹಸಪಡುತ್ತಿದ್ದಾರೆ.
ಪಟ್ಟಣದ ರಾಣಿ ಚೆನ್ನಮ್ಮ ಮಹಾದ್ವಾರದ ಎದುರಿನ ರಸ್ತೆಯಲ್ಲಿ ಮಳೆನೀರು ನಿಂತಿರುವುದರಿಂದ ಸಾರ್ವಜನಿಕರು ಕೆಸರಿನಲ್ಲೇ ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಭಾಗದಲ್ಲಿ ಸಮರ್ಕ ಚರಂಡಿ ಹಾಗೂ ನೀರು ಹರಿವಿನ ವ್ಯವಸ್ಥೆ ಇಲ್ಲದ ಕಾರಣ ಪ್ರತಿ ಮಳೆಯ ಸಂದರ್ಭದಲ್ಲೂ ಇದೇ ಸಮಸ್ಯೆ ಮರುಕಳಿಸುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರೀಶೀಲನೆ ನಡೆಸಿ, ಮಳೆನೀರು ಸರಾಗವಾಗಿ ಹರಿದುಹೋಗುವಂತೆ ಶಾಶ್ವತ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ 