ತಿರುಮಲ ವೆಂಕಟೇಶ್ವರನ ದರ್ಶನ ಪಡೆದ ಪೇಜಾವರ ಶ್ರೀ

ತಿರುಮಲ, ಡಿ 17:       ಉಡುಪಿಯ ಪೇಜಾವರ ಮಠದ ಪೀಠಾಧಿಪತಿ ವಿಶ್ವೇಶ್ವರ ತೀರ್ಥ ಸ್ವಾಮೀಜಿ ಮಂಗಳವಾರ ಇಲ್ಲಿನ ವೆಂಕಟೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಭಗವಾನ್ ವೆಂಕಟೇಶ್ವರನ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು.ವೇದ ಮಂತ್ರಗಳ ಪಠಣದೊಂದಿಗೆ ಸ್ವಾಮೀಜಿಯವರಿಗೆ ಸಾಂಪ್ರದಾಯಿಕ ಸ್ವಾಗತ ನೀಡಲಾಯಿತು.ತಿರುಮಲ ತಿರುಪತಿ ದೇವಸ್ತಾನಂ (ಟಿಟಿಡಿ) ಕಾರ್ಯನಿರ್ವಾಹಕ ಅಧಿಕಾರಿ ಅನಿಲ್ ಕುಮಾರ್ ಸಿಂಘಾಲ್ ಅವರು ಪೇಜಾವರ ಮಠದ 32ನೇ ಸ್ವಾಮೀಜಿಯವರನ್ನು ಸ್ವಾಗತಿಸಿದರು.ದೇವಾಲಯದ ಉಪ ಕಾರ್ಯನಿರ್ವಾಹಕ ಅಧಿಕಾರಿ ಹರಿದ್ರನಾಥ್, ಟಿಟಿಡಿ ಮಂಡಳಿ ಸದಸ್ಯ ಡಿ.ಪಿ. ಅನಂತ ಮತ್ತು ಇತರರು ಉಪಸ್ಥಿತರಿದ್ದರು.