ಜನತಾ ದರ್ಶನ ಮೂಲಕ ಜನರ ಸಮಸ್ಯೆ ಇತ್ಯರ್ಥ: ಸಚಿವ ಸಂತೋಷ ಲಾಡ್
People's problems will be resolved through Janata Darshan said Minister Santosh Lad
ಹುಬ್ಬಳ್ಳಿ 28: ಜಿಲ್ಲೆಯ ಜನರ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ನಿಟ್ಟಿನಲ್ಲಿ ಜನತಾ ದರ್ಶನವನ್ನು ಆಯೋಜನೆ ಮಾಡಲಾಗುತ್ತಿದೆ. 3 ಸಾವಿರಕ್ಕೂ ಅಧಿಕ ಅರ್ಜಿಗಳನ್ನು ವಿಲೇವಾರಿ ಮಾಡುವ ಮೂಲಕ ಈಗಾಗಲೇ 17 ಜನತಾ ದರ್ಶನ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆದಿವೆ.
ಇಂದು 18ನೇ ಜನತಾ ದರ್ಶನ ನಡೆಯುತ್ತಿದೆ. ಇಂದಿನ ಜನತಾ ದರ್ಶನದಲ್ಲಿ ಜನರ ಸಮಸ್ಯೆಗಳನ್ನು ಇತ್ಯರ್ಥ ಪಡಿಸಲಾಗುವುದು ಎಂದು ಕಾರ್ಮಿಕ ಇಲಾಖೆ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ಹೇಳಿದರು. ಇಂದು ಕಲಘಟಗಿಯ ಬಮ್ಮಿಗಟ್ಟಿ ಕ್ರಾಸ್ ಹತ್ತಿರದ ಪಟ್ಟಣ ಪಂಚಾಯತಿಯ ಸಾಂಸ್ಕೃತಿಕ ಭವನದಲ್ಲಿ ಜಿಲ್ಲಾಡಳಿತದಿಂದ ಜಿಲ್ಲಾ ಮಟ್ಟದ ಜನ ಸಂಪರ್ಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜನರು ಸಾಕಷ್ಟು ಸಮಸ್ಯೆಗಳನ್ನು ಜನತಾ ದರ್ಶನದಿಂದ ಪರಿಹರಿಸಿಕೊಂಡಿದ್ದಾರೆ. ಕೆಲವು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸಿದರೆ, ಇತರ ಸಮಸ್ಯೆಗಳನ್ನು ಸಂಬಂಧಪಟ್ಟ ಇಲಾಖೆಗಳು ಕಡಿಮೆ ಸಮಯದಲ್ಲೇ ಬಗೆಹರಿಸಿವೆ.
ವಿಧವಾ ವೇತನ, ವೃದ್ಧಾಪ್ಯ ವೇತನ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಭೂಮಿ ಒತ್ತುವರಿ, ಕುಡಿಯುವ ನೀರು, ಶೌಚಾಲಯ, ವಿದ್ಯುತ್ ಸಂಪರ್ಕ, ಸಾರಿಗೆ ವ್ಯವಸ್ಥೆ ಸೇರಿದಂತೆ ಅನೇಕ ಸಮಸ್ಯೆಗಳನ್ನು ಬಗೆಹರಿಸಲು ಜನತಾ ದರ್ಶನ ಸಹಾಯಕವಾಗಿದೆ ಎಂದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 