ಬೆಳಗಾವಿ : ಬೆಳಗಾವಿಯಲ್ಲಿ ಈ ಹಿಂದೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಜನಸ್ನೇಹಿ ಕಾರ್ಯ ಮಾಡಿರುವ ಹಾಗೂ ಸದ್ಯ ಪೊಲೀಸ್ ಪ್ರಧಾನ ಕೇಂದ್ರ ಕಚೇರಿಯಲ್ಲಿ ಎಐಜಿಪಿ ಜನರಲ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಹಿರಿಯ ಐಪಿಎಸ್ ಅಧಿಕಾರಿ ಡಾ. ಸಂಜೀವ್ ಪಾಟೀಲ್ ಅವರಿಗೆ ರಾಷ್ಟ್ರಪತಿ ಶ್ಲಾಘನೀಯ ಸೇವಾ ಪದಕ ಲಭಿಸಿದೆ.
ಈ ಹಿಂದೆ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ಸಂಜೀವ್ ಪಾಟೀಲ್ ಅವರು ಜನಸ್ನೇಹಿ ಪೊಲೀಸ್ ವ್ಯವಸ್ಥೆ ಮಾಡುವಲ್ಲಿ ಯಶಸ್ವಿಯಾಗಿದ್ದರು.
ಅಷ್ಟೇ ಅಲ್ಲದೆ ಎಸ್ಪಿ ಫೋನ್ ಇನ್ ಕಾರ್ಯಕ್ರಮದ ಮೂಲಕ ಗ್ರಾಮೀಣ ಭಾಗದ ಜನರ ನೋವು ಆಲಿಸುವ ವಿನೂತನ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿಕೊಟ್ಟಿದ್ದರು. ಡಾ. ಸಂಜೀವ್ ಪಾಟೀಲ್ ಅವರ ಶ್ಲಾಘನೀಯ ಕಾರ್ಯಕ್ಕೆ ರಾಷ್ಟ್ರಪತಿ ಪದಕ ಲಭಿಸಿದೆ.