ಕಾಂಗ್ರೆಸ್ ಆಡಳಿತಕ್ಕೆ ಜನ ಬೇಸರ: ಬಿಜೆಪಿ ಗೆಲುವು ಖಚಿತ ಹಿ ಐಹೊಳೆ
People are fed up with Congress rule: BJP's victory is certain in Aihole
ಚಿಕ್ಕೋಡಿ 27 : ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಜನ ಬೇಸತ್ತು ಹೋಗಿದ್ದು, ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಸಮರ್ಕವಾಗಿ ಜನರಿಗೆ ತಲುಪುತ್ತಿಲ್ಲ. ಇದರ ಪರಿಣಾಮವಾಗಿ ಜನರು ಕ್ರಮೇಣ ಬಿಜೆಪಿ ಪಕ್ಷದತ್ತ ವಾಲುತ್ತಿದ್ದಾರೆ ಎಂದು ರಾಯಬಾಗ ಶಾಸಕ ದುರ್ಯೋಧನ ಐಹೊಳೆ ಅಭಿಪ್ರಾಯಪಟ್ಟರು.ಚಿಕ್ಕೋಡಿ ತಾಲೂಕಿನ ಜಾಗನೂರ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಗ್ರಾಮದಲ್ಲಿ 40 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ಸುಧಾರಣೆ ಕಾಮಗಾರಿ ಹಾಗೂ ಎಸ್ಸಿಪಿ/ಟಿಎಸ್ಪಿ ಯೋಜನೆಯಡಿ ಮಂಜೂರಾದ 25 ಲಕ್ಷ ರೂ. ವೆಚ್ಚದಲ್ಲಿ ಕದಂ ತೋಟದವರೆಗೆ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.
ರಾಜ್ಯ ಸರ್ಕಾರದ ಯೋಜನೆಗಳ ಅನುಷ್ಠಾನದಲ್ಲಿ ಲೋಪಗಳಿದ್ದು, ಸಾಮಾನ್ಯ ಜನರಿಗೆ ತಲುಪಬೇಕಾದ ಸೌಲಭ್ಯಗಳು ಸರಿಯಾಗಿ ತಲುಪುತ್ತಿಲ್ಲ ಎಂಬ ಅಸಮಾಧಾನ ಜನರಲ್ಲಿ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ನಡೆಯಲಿರುವ ಬಾಗಲಕೋಟ ಮತ್ತು ದಾವಣಗೆರೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.ಇದೇ ವೇಳೆ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಡಳಿತ ಶೈಲಿ ಹಾಗೂ ಜನಪರ ಕಾರ್ಯಕ್ರಮಗಳಿಗೆ ದೇಶದ ಜನತೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದು, ಅದೇ ವಿಶ್ವಾಸ ರಾಜ್ಯದಲ್ಲಿಯೂ ಮುಂದುವರಿಯಲಿದೆ ಎಂದು ಹೇಳಿದರು.
ಗ್ರಾಮೀಣ ಭಾಗಗಳ ಅಭಿವೃದ್ಧಿಗೆ ರಸ್ತೆ, ಚರಂಡಿ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವುದು ಮುಖ್ಯವಾಗಿದ್ದು, ಈ ಕಾಮಗಾರಿಗಳು ಜನಜೀವನದ ಮಟ್ಟವನ್ನು ಸುಧಾರಿಸಲು ಸಹಾಯಕವಾಗಲಿವೆ ಎಂದು ಅವರು ತಿಳಿಸಿದರು.ಈ ಸಂದರ್ಭದಲ್ಲಿ ಮುಖಂಡರಾದ ಸುರೇಶ ಬೆಲ್ಲದ, ಸದಾಶಿವ ಘೋರೆ್ಡ, ಸೀತಾರಾಮ ಕುಲಕರ್ಣಿ, ಹನಮಂತ ರಬಕವಿ, ಲಕ್ಷ್ಮಣ ಹಣಮನ್ನವರ, ಉಪಾಧ್ಯಾಯ ಮಲ್ಲೇಶ ಹನುಮಂತಗೋಳ, ಮಹಾಂತೇಶ ಶಿರಗೂರ, ಮಾಳಪ್ಪ ಗೊರಗುದ್ದಿ, ದುಂಡಪ್ಪ ಮುಶಾಪ, ಕಿರಣಗೌಡ ಪಾಟೀಲ, ರಾಮಚಂದ್ರ ಮರಾಠ, ಸಿದ್ದು ಖಿಂಡಿ, ಉದ್ದಪ್ಪ ಖಿಂಡಿ, ರಾಮಕೃಷ್ಣ ಗಡಗಡಿ, ರಾಮಪ್ಪ ಗಿಡ್ಡಪಗೋಳ, ಗೋಪಾಲ ನಾವಿ, ಪರಸಪ್ಪ ತಿಗಡಿ, ರಾಮಪ್ಪ ತಿಗಡಿ, ಸಿದ್ದರಾಮ ಹನುಮನ್ನವರ, ಮಹಾದೇವ ತಿಗಡಿ, ಎಸ್.ಎಸ್. ಹೊಸಮನಿ, ರವಿ ಜಿವನಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 