ಭೀಮಾ ನದಿ ದಡದ ಜನರು ಕಟ್ಟೆಚ್ಚರ: ನಾಗೇಂದ್ರ ಕೋಳಶೆಟ್ಟಿ
People living along the banks of the Bhima River on high alert: Nagendra Kolashetti
ಲೋಕದರ್ಶನ ವರದಿ
ಇಂಡಿ 29 : ಮಹಾರಾಷ್ಟ್ರದ ಉಜನಿ ಹಾಗೂ ವೀರ್ ಜಲಾಶಯದಿಂದ ಇಂದು ಬೆಳಿಗ್ಗೆ ಎಂಟು ಗಂಟೆಗೆ 59000 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಈಗ ತಾನೇ ಕರ್ನಾಟಕದ ಭೀಮಾ ನದಿಯ ದಡದಲ್ಲಿ ಇರುವ ಗೋವಿಂದಪೂರ ಬಳಿ ಈಗ ಸುಮಾರು 31000 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಎರಡು ದಿನಗಳ ಹಿಂದೆ ಭೀಮಾ ನದಿಗೆ ಒಟ್ಟು ಎರಡು ಹಂತಗಳಲ್ಲಿ 62600 ಕ್ಯೂಸೆಕ್ ನೀರು ಬಿಡಲಾಗಿದೆ. ಮಳೆಗಾಲ ಆರಂಭವಾದ ಬಹುತೇಕ ಎರಡು ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಜಲಾಶಯದಿಂದ ಭೀಮಾನದಿಗೆ ನೀರು ಹರಿಬಿಡಲಾಗಿದೆ. ಮಹಾರಾಷ್ಟ್ರದ ಉಜನಿ ಹಾಗೂ ವೀರ್ ಜಲಾಶಯ ಮುಖಾಂತರ ಸೋಮವಾರ ಮಧ್ಯಾಹ್ನ 3 ಗಂಟೆಗೆ 62 ಸಾವಿರ ಕ್ಯೂಸೆಕ್ ನೀರು ನದಿಗೆ ಬಿಡಲಾಗಿದೆ.
ಈಗಾಗಲೇ ಬಿಟ್ಟಿರುವ ನೀರು ಇಂಡಿ ತಾಲ್ಲೂಕಿನ ದೂಳಖೇಡ, ಹಿಂಗಣಿ, ಅಗರಖೇಡ, ಮಣ್ಣೂರ, ರೋಡಗಿ, ಮಿರಗಿ ಗ್ರಾಮಗಳನ್ನು ದಾಟಿದೆ ಎಂದು ಇಂಡಿ ತಹಶೀಲದಾರ ನಾಗೇಂದ್ರ ಕೋಳಶೆಟ್ಟಿ ತಿಳಿಸಿದ್ದಾರೆ. ಮಹಾರಾಷ್ಟ್ರದಲ್ಲಿ ನದಿ ಅಚ್ಚುಕಟ್ಟು ಪ್ರದೇಶದಲ್ಲಿ ಉತ್ತಮ ಮಳೆ ಸುರಿಯುತ್ತಿದ್ದು, ಭೀಮಾನದಿಗೆ ಬಿಡುವ ನೀರಿನ ಪ್ರಮಾಣ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ. ಕಾರಣ ಯಾರು ನದಿಯ ದಂಡೆಗೆ ಹೋಗಬಾರದು, ರೈತರ ವಿದ್ಯುತ್ ಪಂಪ್ ಸೆಟ್ ಗಳ ಬಗ್ಗೆ ಕಾಳಜಿ ವಹಿಸಬೇಕು ಹಾಗೂ ಜನರು ನದಿಗೆ ಇಳಿಯಬಾರದು ಎಂದು ಇಂಡಿ ತಶೀಲದಾರ ನಾಗೇಂದ್ರ ಕೋಳಶೆಟ್ಟಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 