ಜನರು ಪ್ರವಾಹದ ಆತಂಕ ಪಡುವ ಅಗತ್ಯವಿಲ್ಲ: ಸಂಪಗಾವಿ
People need not worry about floods: Sampagavi
ಮಾಂಜರಿ 23: ಕೃಷ್ಣಾ ಸೇರಿದಂತೆ ದೂಧಗಂಗಾ, ವೇದಗಂಗಾ ನದಿಗಳಿಗೆ ಇವತ್ತು ನೀರು ಕಡಿಮೆ ಆಗುತ್ತೆ ಜನರು ಪ್ರವಾಹದ ಕುರಿತು ಆತಂಕ ಪಡುವ ಅಗತ್ಯ ಇಲ್ಲ ಎಂದು ಉಪವಿಭಾಗಧಿಕಾರಿ ಸುಭಾಷ ಸಂಪಗಾವಿ ಹೇಳಿದರು.
ಅವರು ಇವತ್ತು ಚಿಕ್ಕೋಡಿ ತಾಲೂಕಿನ ಇಂಗಳಿ ಮತ್ತು ಸಂಕ್ಷೇತ್ರ ಯಡೂರ ಗ್ರಾಮದ ಶ್ರೀ ವೀರಭದ್ರೇಶ್ವರ ದೇವಸ್ಥಾನ ಜಲಾವೃತಗೊಂಡ ಹಿನ್ನೆಲೆಯಲ್ಲಿ ಪ್ರವಾಹ ಪರಿಸ್ಥಿತಿ ಅವಲೋಕಿಸಿ ಮಾತನಾಡಿ ಅವರು ಮಹಾರಾಷ್ಟ್ರದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದೆ.
ನೀರಿನ ಹರಿವಿನ ಪ್ರಮಾಣ ಕಡಿಮೆಯಾಗಿದೆ. ಪ್ರವಾಹ ಇಳಿಕೆ ಆಗುತ್ತೆ. ಜನರು ನದಿಯ ಹತ್ತಿರ ಸ್ನಾನ, ಬಟ್ಟೆ, ವಾಹನಗಳನ್ನು ತೊಳೆಯಲು ಹೋಗಬಾರದೆಂದು ಮನವಿಯನ್ನು ಮಾಡಿಕೊಳ್ಳುತ್ತೇವೆ. ವೀರಭದ್ರೇಶ್ವರ ದೇವಸ್ಥಾನ ಮುಳಗಡೆಯಾಗಿದೆ. ಅಮವಾಸ್ಯೆ ಇರುವ ಕಾರಣ ಭಕ್ತರು ದೂರದಿಂದ ನಿಂತು ದೇವರ ದರ್ಶನ ಪಡೆಯಬೇಕು ಹಾಗೂ ಪ್ರವಾಹ ಮುಂಜಾಗ್ರತಾ ಕ್ರಮವಾಗಿ ಬೋಟ, ಕಾಳಜಿ ಕೇಂದ್ರ ಸೇರಿದಂತೆ ಇನ್ನಿತರ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.
ತಹಶೀಲ್ದಾರ ರಾಜೇಶ್ ಬುರ್ಲಿ ಕಂದಾಯ ನೀರೀಕ್ಷಕ ರಾಮಣ್ಣ ನಾಯಕ್ ಗ್ರಾಮ ಆಡಳಿತ ಅಧಿಕಾರಿ ಮನೋಜ್ ಕಾಂಬಳೆ ಹಾಗೂ ಇನ್ನುಳಿದ ಅಧಿಕಾರಿಗಳು ಹಾಜರಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 