ಜನರು ವೈದ್ಯರಲ್ಲಿ ದೇವರ ಸ್ವರೂಪ ಕಾಣುತ್ತಾರೆ: ಸಚಿವೆ ಹೆಬ್ಬಾಳಕರ್
People see the form of God in doctors: Minister Hebbalkar
ಬೆಳಗಾವಿ 29: ಹಿಂದೆಲ್ಲ ವೈದ್ಯರ ಸಂಖ್ಯೆಯೂ ಕಡಿಮೆ ಇತ್ತು, ರೋಗಗಳ ಸಂಖ್ಯೆಯೂ ಕಡಿಮೆ ಇತ್ತು. ಆದರ ಇತ್ತೀಚಿನ ದಿನಗಳಲ್ಲಿ ವೈದ್ಯರ ಸಂಖ್ಯೆ ಹೆಚ್ಚುತ್ತಿದೆ, ಹಾಗೆಯೇ ರೋಗಗಳ ಸಂಖ್ಯೆಯೂ ಬೆಳೆಯುತ್ತಿದೆ. ಆಸ್ಪತ್ರೆಗೆ ಬಂದ ರೋಗಿ ಆದಷ್ಟು ಬೇಗ ಮನೆಗೆ ಮರಳಬೇಕೆಂದು ಬಯಸುತ್ತಾನೆ. ಜನರು ವೈದ್ಯರಲ್ಲಿ ದೇವರ ಸ್ವರೂಪ ಕಾಣುತ್ತಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಭಾನುವಾರ ಬೆಳಗಾವಿಯ ಶಗುನ್ ಗಾರ್ಡನ್‌ನಲ್ಲಿ ನಡೆದ ಸೆಂಟ್ರಾಕೇರ್ ಆಸ್ಪತ್ರೆಯ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಬೆಳಗಾವಿಯ ಜನರಿಗೆ ಉತ್ತಮ ಸೇವೆ ಸಲ್ಲಿಸಬೇಕೆನ್ನುವ ಮಹದಾಸೆಯಿಂದ ಡಾ.ನೀತಾ ದೇಶಪಾಂಡೆ ಮತ್ತು ತಂಡದವರು ನೂತನ ಆಸ್ಪತ್ರೆ ಆರಂಭಿಸಿದ್ದಾರೆ. ಇದರಿಂದ ಅವರಿಗೂ, ಬೆಳಗಾವಿಯ ಜನರಿಗೂ ಒಳ್ಳೆಯದಾಗಲಿ. ರೋಗ ಬರುವುದನ್ನು ತಡೆಯುವುದಕ್ಕೆ ಮೊದಲ ಆದ್ಯತೆ ಎನ್ನುವ ಸೆಂಟ್ರಾಕೇರ್ ಆಸ್ಪತ್ರೆಯ ಧ್ಯೇಯ ಉತ್ತಮವಾಗಿದೆ. ಜನರು ಇದರ ಸದುಪಯೋಗಪಡಿಸಿಕೊಂಡು ಒಳ್ಳೆಯ ಆರೋಗ್ಯ ಕಾಪಾಡಿಕೊಳ್ಳಲಿ ಎಂದು ಸಚಿವರು ಹೇಳಿದರು.
ನಾನಾ ಪಾಟೇಕರ್ ಮತ್ತು ಸಂಭಾಜಿ ಭಿಡೆ ಗುರೂಜಿ ನಿಸ್ವಾರ್ಥದಿಂದ ಸಮಾಜ ತಿದ್ದುವ ಕೆಲಸ ಮಾಡುತ್ತಿದ್ದಾರೆ. ಡಾ.ಪ್ರಭಾಕರ ಕೋರೆ ಬೆಳಗಾವಿಯ ಹೆಸರು ಜಾಗತಿಕ ನಕ್ಷೆಯಲ್ಲಿ ಮೂಡುವಂತೆ ಮಾಡಿದ್ದಾರೆ. ಅವರೆಲ್ಲ ಸಮಾಜಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ ಎಂದು ಹೆಬ್ಬಾಳಕರ್ ಪ್ರಶಂಸಿಸಿದರು.
ಖ್ಯಾತ ನಟ ನಾನಾ ಪಾಟೇಕರ್, ಶಿವಪ್ರತಿಷ್ಠಾನ್ ಹಿಂದುಸ್ತಾನ್ ಸಂಸ್ಥಾಪಕ ಸಂಭಾಜಿ ಭಿಡೆ ಗುರೂಜಿ, ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ, ಶಾಸಕ ಆಸೀಫ್ ಸೇಠ್, ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕಿ ಡಾ.ನೀತಾ ದೇಶಪಾಂಡೆ, ಡಾ.ಅಮೃತಾ ರಾಠೆ, ರೋಹಿತ್ ದೇಶಪಾಂಡೆ, ದೀಪಕ್ ಕರಂಜಿಕರ್ ಮೊದಲಾದವರು ಇದ್ದರು.
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 