ಜನರು ಟ್ರಾಫಿಕ್ ನಿಯಮಗಳನ್ನು ಪಾಲಿಸಬೇಕು- ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ

ಜನರು ಟ್ರಾಫಿಕ್ ನಿಯಮಗಳನ್ನು ಪಾಲಿಸಬೇಕು- ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ People should follow traffic rules - District Collector Dr. Suresh B. Itnal


      ಕೊಪ್ಪಳ  23 :   ಟ್ರಾಫಿಕ್ ನಿಯಮಗಳನ್ನು ಪಾಲನೆ ಮಾಡದಿರುವುದಕ್ಕೆ ಬಹಳಷ್ಟು ಅಪಘಾತಗಳು ಸಂಭವಿಸುತ್ತವೆ. ಹಾಗಾಗಿ ಜನರು ಟ್ರಾಫಿಕ್ ನಿಯಮಗಳನ್ನು ಪಾಲನೆ ಮಾಡಬೇಕೆಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಹೇಳಿದರು. 

ಅವರು ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕೊಪ್ಪಳ ಸ್ಕೌಟ್ ಮತ್ತು ಗೈಡ್ಸ್‌ ಹಾಗೂ ಎನ್‌.ಸಿ.ಸಿ. ಮತ್ತು ಪ್ರಾದೇಶಿಕ ಸಾರಿಗೆ ಕಛೇರಿ ಕೊಪ್ಪಳ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ 37ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಜಾಥಾ ಕಾರ್ಯಕ್ರಮಕ್ಕೆ ಕೊಪ್ಪಳ ಗವಿಮಠದ ಆವರಣದಿಂದ ಚಾಲನೆ ನೀಡಿ ಮಾತನಾಡಿದರು. 

ಅಪ್ರಾಪ್ತರು ವಾಹನ ಚಾಲನೆ ಮಾಡಬಾರದು. ರಸ್ತೆಗಳು ಎಷ್ಟೇ ಚೆನ್ನಾಗಿದ್ದರು ರಸ್ತೆ ನಿಯಮಗಳನ್ನು ಪಾಲಿಸದಿದ್ದರೆ ಬಹಳಷ್ಟು ಅಪಘಾತಗಳಾಗುತ್ತವೆ. ರಸ್ತೆ ಸುರಕ್ಷತಾ ಪ್ರಾಧಿಕಾರದಿಂದ  ಐ.ಐ.ಟಿ ಮದ್ರಾಸ ವತಿಯಿಂದ ಜಿಲ್ಲೆಯ ಹಾಟ್ ಸ್ಪಾಟಗಳನ್ನು ಗುರುತಿಸಿ ಅವುಗಳನ್ನು ಸರಿಪಡಿಸುವ ಕೆಲಸ ಮಾಡುತ್ತಿದ್ದೆವೆ. ಸ್ಕೌಟ್ ಮತ್ತು ಗೈಡ್ಸ್‌ ಹಾಗೂ ಎನ್‌.ಸಿ.ಸಿ ವಿದ್ಯಾರ್ಥಿಗಳದ್ದು ರಾಷ್ಟ್ರ ನಿರ್ಮಾಣದಲ್ಲಿ ಬಹುದೊಡ್ಡ ಪಾತ್ರವಿದೆ ಎಂದು ಹೇಳಿದರು. 

ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮಿಜಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಜನರು ತಮ್ಮ ಮೊಬೈಲ್ ಹೊಡಿಬಾರದು ಅಂತಹ ಸ್ಕ್ರೀನಗಾರ್ಡ್‌ ಮೊಬೈಲಗೆ  ಹಾಕಿಸುತ್ತಾರೆ. ಆದರೆ, ತಲೆ ಹೊಡಿಬಾರದು ಅಂತಹ ಹೆಲಮೆಟ್ ಹಾಕಲ್ಲ. ದೇವರು ಕೊಟ್ಟ ಈ ಜೀವನ ಜಾಣತನದಿಂದ ಬಳಸಿಕೊಳ್ಳಬೇಕು. ಒಬ್ಬ ಜವಾಬ್ದಾರಿ ನಾಗರಿಕರಾಗಿ ದೇಶ ಕಟ್ಟುವದೆಲ್ಲಿ. ನಮ್ಮ ಜೀವನ ನಾವಾದರು ಕಟ್ಟಿಕೊಳ್ಳಬೇಕು. ಪ್ರತಿಯೊಬ್ಬರು ತಮ್ಮ  ಜವಾಬ್ದಾರಿಗಳನ್ನು  ಪಾಲಿಸಬೇಕೆಂದು ಹೇಳಿದರು. 

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್‌. ಎಲ್ ಅರಸಿದ್ದಿ ಅವರು ಮಾತನಾಡಿ, ಜನರು ದಿನ ನಿತ್ಯದ ಜೀವನದಲ್ಲಿ ಮುಂಜಾಗ್ರತೆವಹಿಸಬೇಕು. ಇಂದು ಜಾಥಾ ಕಾರ್ಯಕ್ರಮ ಮಾಡಿದರೆ ಸಾಲದು ಅಪಘಾತದಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟರೆ, ಇಡೀ ಅವನ ಕುಟುಂಬ ಸಾಯುತ್ತದೆ. ಹಾಗಾಗಿ ಸಾರ್ವಜನಿಕರು ಮುಂಜಾಗ್ರತೆವಹಿಸಿ ರಸ್ತೆ ನಿಯಮಗಳನ್ನು ಪಾಲನೆ ಮಾಡುವ ಮೂಲಕ ವಾಹನ ಚಲಾಯಿಸಬೇಕೆಂದರು. 

ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಭುಸ್ವಾಮಿ ಹಿರೇಮಠ ಅವರು ಮಾತನಾಡಿ, ಜಿಲ್ಲೆಯಲ್ಲಿ 37ನೇ ರಸ್ತೆ ಸುರಕ್ಷತಾ ಮಾಸಾಚರಣೆ ಕಾರ್ಯಕ್ರಮ ನಡೆಸುತ್ತಿದ್ದೆವೆ. ಈ ಕಾರ್ಯಕ್ರಮ ಜಿಲ್ಲೆಯ ಇತರೆ ತಾಲ್ಲೂಕುಗಳಲ್ಲಿ ಹಮ್ಮಿಕೊಳ್ಳಲಾಗುತ್ತಿದೆ. ಇದರ ಉದ್ದೇಶ ವಾಹನ ಚಾಲಕರು ಮತ್ತು ಮಾಲೀಕರು ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸುತ್ತ ವಾಹನ ಚಾಲಾಯಿಸಬೇಕೆಂದು ಸಾರ್ವಜನಿಕರಲ್ಲಿ ಮನವಿ ಮಾಡುತ್ತೆನೆ. ಕೊಪ್ಪಳ ಜಿಲ್ಲೆಯನ್ನು ಅಪಘಾತ ರಹಿತ ಜಿಲ್ಲೆಯನ್ನಾಗಿಸುವುದು ನಮ್ಮ ಉದ್ದೇಶವಾಗಿದ್ದು ಸಾರ್ವಜನಿಕರು ಇದಕ್ಕೆ ಸಹಕಾರ ನೀಡಬೇಕೆಂದು ಹೇಳಿದರು. 

ರಸ್ತೆ ಸುರಕ್ಷತಾ ಜಾಥಾ ಕಾರ್ಯಕ್ರಮ ಕೊಪ್ಪಳ ಗವಿಮಠದ ಆವರಣದಿಂದ ಅಶೋಕ ವೃತ್ತದವರೆಗೆ ನಡೆದು. ಅಶೋಕ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಕಾರ್ಯಕ್ರಮ ಮುಕ್ತಾಯಗೊಳಿಸಲಾಯಿತು. 

ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕೊಪ್ಪಳ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ ಎಸ್‌. ದರಗದ. ವಾರ್ತಾ ಇಲಾಖೆಯ ಸಹಾಯಕ ನಿರ್ದೆಶಕರಾದ ಸುರೇಶ ಜಿ. ಪ್ರಾದೇಶಿಕ ಸಾರಿಗೆ ಇಲಾಖೆಯ ಹಿರಿಯ ಮೋಟಾರ ವಾಹನ ನೀರೀಕ್ಷಕರಾದ ಸುರೇಶ ಹಾಗೂ ಪ್ರಕಾಶ. ಸ್ಕೌಟ್‌- ಗೈಡ್ಸ್‌ ಮತ್ತು ಎನ್‌.ಸಿ.ಸಿ ಸೇರಿದಂತೆ ಇತರೆ ವಿವಿಧ ಶಾಲೆಗಳ ವಿಧ್ಯಾರ್ಥಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು. 

ಜಾಗೃತಿ ವಾಹನಕ್ಕೆ ಚಾಲನೆ: ರಸ್ತೆ ಸುರಕ್ಷತಾ ಕಾರ್ಯಕ್ರಮದ ಅಂಗವಾಗಿ ರಸ್ತೆ ಸುರಕ್ಷತಾ ಜಾಗೃತಿ ವಾಹನಕ್ಕೆ ಜಿಲ್ಲಾಧಿಕಾರಿಗಳು ಇಂದು ತಮ್ಮ ಕಛೇರಿ ಆವರಣದಲ್ಲಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ ಎಸ್‌. ದರಗದ. ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಭುಸ್ವಾಮಿ ಹಿರೇಮಠ ಸೇರಿದಂತೆ ಇತರರು ಉಪಸ್ಥಿತರಿದ್ದರು.