ಕಾನೂನು ಸುವ್ಯವಸ್ಥೆ ಕಾಪಾಡಲು ಕರ್ತವ್ಯ ನಿರ್ವಹಿಸಿ: ನರಹರಿ ಕಟ್ಟಿ
Perform your duties to maintain law and order: Narahari Katti
ಶಿಗ್ಗಾಂವಿ, ಆ.26: ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸರು ಯಾವುದೇ ಒತ್ತಡಕ್ಕೆ ಮಣಿಯದೆ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ನರಹರಿ ಕಟ್ಟಿ ಆಗ್ರಹಿಸಿದರು. ಶಿಗ್ಗಾಂವಿ ಬಂದ್ಗೆ ಸಂಬಂಧಿಸಿದಂತೆ 12 ಮಂದಿಗೆ ನೋಟಿಸ್ ನೀಡಿರುವುದನ್ನು ಖಂಡಿಸಿದ ಅವರು, ಪೊಲೀಸರ ಕ್ರಮ ಪಕ್ಷಪಾತದಿಂದ ಕೂಡಿದೆ ಎಂದು ಆರೋಪಿಸಿದರು. ನೋಟಿಸ್ಗಳನ್ನು ಹಿಂಪಡೆಯದಿದ್ದರೆ ರಾಜ್ಯಮಟ್ಟದ ನಾಯಕರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.
ಬಿಜೆಪಿ ಅಧ್ಯಕ್ಷ ವಿಶ್ವನಾಥ ಹರವಿ ಮಾತನಾಡಿ, ಘಟನೆಯ ಹೊಣೆಯಾದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಸ್ಥಳೀಯ ವ್ಯಾಪಾರಸ್ಥರು ಸ್ವಯಂಪ್ರೇರಿತರಾಗಿ ಬಂದ್ಗೆ ಬೆಂಬಲ ನೀಡಿ ಸಹಕರಿಸಿದ್ದಕ್ಕೆ ಕೃತಜ್ಞತೆ ಸಲ್ಲಿಸಲಾಯಿತು. ತಾಲೂಕು ಯುವ ಮೋರ್ಚಾ ಅಧ್ಯಕ್ಷ ಅನಿಲ್ ಸಾತಣ್ಣವರ, ಪ್ರಧಾನ ಕಾರ್ಯದರ್ಶಿ ರೇಣುಕನಗೌಡ ಪಾಟೀಲ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 