ವ್ಯಕ್ತಿ ನಾಪತ್ತೆ: ಪತ್ತೆಗೆ ಮನವಿ
Person Missing: appeal for tracing: Bellary
ಬಳ್ಳಾರಿ,ಜು.09: ನಗರದ ದೇವಿನಗರ ಬಡಾವಣೆಯ ಶಿವಲಿಂಗನಗರದ ಜಂಡಾಕಟ್ಟೆ ಹತ್ತಿರ ವಾರ್ಡ್ ನಂ.33 ರ ನಿವಾಸಿಯಾದ ಭಾಷಾ ಎನ್ನುವ 56 ವರ್ಷದ ವ್ಯಕ್ತಿ ಜು.05 ರಂದು ಕಾಣೆಯಾಗಿದ್ದು, ಈ ಕುರಿತು ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವ್ಯಕ್ತಿಯ ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಮನವಿ ಮಾಡಿದ್ದಾರೆ.ಚಹರೆ: ಅಂದಾಜು 5 ಅಡಿ ಎತ್ತರ, ಕೋಲು ಮುಖ, ಎಣ್ಣೆಗೆಂಪು ಮೈಬಣ್ಣ, ತೆಳುವಾದ ಮೈಕಟ್ಟು ಹೊಂದಿದ್ದು, ಎಡಕಾಲಿಗೆ ಅಪರೇಶನ್ ಮಾಡಿಸಿದ ಗುರುತು ಇರುತ್ತದೆ. ಕಾಣೆಯಾದ ಸಂದರ್ಭದಲ್ಲಿ ಸಿಮೆಂಟ್ ಬಣ್ಣದ ಅಂಗಿ, ಕಡು ನೀಲಿ ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ.ಮೇಲ್ಕಂಡ ಚಹರೆ ಗುರುತುಗಳುಳ್ಳ ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಕೌಲ್ ಬಜಾರ್ ಪೊಲೀಸ್ ಠಾಣೆಯ ದೂ.08392-240731, 244145, ಪಿಐ ಮೊ.9480803047, ಪಿಎಸ್‌ಐ ಮೊ.94808203085 ಮತ್ತು ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ.08392-258100 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 