ನೋಟಿಸ್ ಪಡೆದ ಮತದಾರರ ಖುದ್ದು ಹಾಜರಿ ಕಡ್ಡಾಯ
Personal appearance of voters who received notices is mandatory.
ಲೋಕದರ್ಶನ ವರದಿ
ಕಾರವಾರ ೨೪: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಹಿನ್ನೆಲೆಯಲ್ಲಿ ನೋಟಿಸ್ ಸ್ವೀಕರಿಸುವ ಮತದಾರರು ವಿಚಾರಣೆಗೆ ಖುದ್ದಾಗಿ ಹಾಜರಾಗಿ ಅಗತ್ಯ ದಾಖಲೆಗಳನ್ನು ಸಲ್ಲಿಸುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿ ಕೆ. ಲಕ್ಷಿö್ಮಪ್ರಿಯಾ ತಿಳಿಸಿದರು.
ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯ ಒಟ್ಟು ೧೨,೩೦,೦೩೭ ಮತದಾರರ ಪೈಕಿ ೧೧,೨೩,೦೨೨ ಮಂದಿಯ ಮ್ಯಾಪಿಂಗ್ ಪೂರ್ಣಗೊಂಡಿದೆ. ಸ್ಥಳಾಂತರ, ವಲಸೆ, ಮರಣ, ದ್ವಿಪ್ರತಿ ಸೇರಿದಂತೆ ವಿವಿಧ ಕಾರಣಗಳಿಂದ ೧,೦೭,೦೧೫ ಪ್ರಕರಣಗಳನ್ನು ಗುರುತಿಸಲಾಗಿದ್ದು, ೬೫,೩೩೦ ಮಂದಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಬೇಕಿದೆ ಎಂದರು.
ಬಿಎಲ್‌ಒಗಳ ಮೂಲಕ ನೋಟಿಸ್ ನೀಡಲಾಗುತ್ತಿದ್ದು, ನೋಟಿಸ್ ಪಡೆದವರು ಅದರಲ್ಲಿ ನಮೂದಿಸಿರುವ ದಿನಾಂಕ, ಸ್ಥಳ ಹಾಗೂ ಸಮಯಕ್ಕೆ ಖುದ್ದಾಗಿ ಹಾಜರಾಗಿ ದಾಖಲೆಗಳನ್ನು ಸಲ್ಲಿಸಬೇಕು. ವಿಚಾರಣೆಗೆ ಗೈರಾದವರಿಗೆ ಮತ್ತೊಂದು ಅವಕಾಶ ನೀಡಲಾಗುತ್ತದೆ. ಗರಿಷ್ಠ ಎರಡು ವಿಚಾರಣಾ ದಿನಾಂಕಗಳಿಗೆ ಮಾತ್ರ ಅವಕಾಶವಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಸೆಪ್ಟೆಂಬರ್ ೨೩ರವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಅವಕಾಶವಿದ್ದು, ಅಕ್ಟೋಬರ್ ೧, ೨೦೨೬ಕ್ಕೆ ೧೮ ವರ್ಷ ಪೂರ್ಣಗೊಳಿಸುವ ಅರ್ಹರು ನಮೂನೆ-೬ ಹಾಗೂ ಅಗತ್ಯ ದಾಖಲೆಗಳೊಂದಿಗೆ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ಹೆಸರು ತೆಗೆದುಹಾಕಲು ನಮೂನೆ-೭ ಹಾಗೂ ವಿವಿಧ ತಿದ್ದುಪಡಿಗಳಿಗೆ ಸಂಬAಧಿಸಿದ ಅರ್ಜಿಗಳನ್ನು ಸಲ್ಲಿಸಬಹುದು.
ಜಿಲ್ಲೆಯಲ್ಲಿ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ೫,೬೨,೦೦೪ ಪುರುಷರು, ೫,೬೧,೦೧೪ ಮಹಿಳೆಯರು ಹಾಗೂ ೪ ತೃತೀಯ ಲಿಂಗಿಗಳು ಸೇರಿದಂತೆ ಒಟ್ಟು ೧೧,೨೩,೦೨೨ ಮತದಾರರಿದ್ದಾರೆ. ಮತಗಟ್ಟೆಗಳ ಪುನರ್ವಿಂಗಡಣೆ ಬಳಿಕ ೭೮ ಹೊಸ ಮತಗಟ್ಟೆಗಳನ್ನು ತೆರೆಯಲಾಗಿದ್ದು, ಒಟ್ಟು ಮತಗಟ್ಟೆಗಳ ಸಂಖ್ಯೆ ೧,೫೨೩ಕ್ಕೆ ಏರಿಕೆಯಾಗಿದೆ.
ಹಕ್ಕು ಮತ್ತು ಆಕ್ಷೇಪಣೆಗಳ ಅರ್ಜಿಗಳನ್ನು ಜಾಗರೂಕತೆಯಿಂದ ಪರಿಶೀಲಿಸಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ವಂಚಿತರಾಗದAತೆ ಕ್ರಮ ಕೈಗೊಳ್ಳಲಾಗುವುದು. ಅಕ್ಟೋಬರ್ ೨೨ರೊಳಗೆ ಎಲ್ಲಾ ಹಕ್ಕು ಮತ್ತು ಆಕ್ಷೇಪಣೆಗಳನ್ನು ವಿಲೇವಾರಿ ಮಾಡಿ, ಅಕ್ಟೋಬರ್ ೨೭ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 