ವ್ಯಕ್ತಿತ್ವ ವಿಕಸನ ಉತ್ತಮ ಭವಿಷ್ಯಕ್ಕೆ ನಾಂದಿ: ಪ್ರೊ. ಘಾಟೆ
Personality development is the beginning of a better future: Prof. Ghate
ಬೆಳಗಾವಿ 09: ವಿದ್ಯಾರ್ಥಿಗಳಿಗೆ ಪದವಿಯ ಶಿಕ್ಷಣದ ಜೊತೆಗೆ ವ್ಯಕ್ತಿತ್ವ ವಿಕಸನ ದೊರೆತಲ್ಲಿ ಅದು ಅವರ ಉತ್ತಮ ಭವಿಷ್ಯಕ್ಕೆ ನಾಂದಿ ಹಾಡುತ್ತದೆ ಎಂದು ರಾಷ್ಟ್ರೀಯ ವಿಧಿ ವಿಜ್ಞಾನ ವಿಶ್ವವಿದ್ಯಾಲಯದ ಧಾರವಾಡ ಕ್ಯಾಂಪಸ್ ನ ನಿರ್ದೇಶಕ ಪ್ರೊ. ಮಂಜುನಾಥ ಘಾಟೆ ಅಭಿಪ್ರಾಯಪಟ್ಟರು.
ನಗರದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯವು ಜುಲೈ 8ರಿಂದ 12ರವರೆಗೆ ವಿವಿಧ ಪದವಿಯ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಮಹಾವಿದ್ಯಾಲಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಐದು ದಿನದ ಓರಿಯೆಂಟೇಷನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿ ಜೀವನದಲ್ಲಿ ಪದವಿಯು ಕಲಿಕೆ, ವೈಯಕ್ತಿಕ ಬೆಳವಣಿಗೆ ಮತ್ತು ಕೌಶಲ್ಯ ಅಭಿವೃದ್ಧಿಯ ನಿರ್ಣಾಯಕ ಹಂತವಾಗಿದೆ. ಈ ಅವಧಿಯು ಅವರ ಭವಿಷ್ಯದ ಯಶಸ್ಸಿಗೆ ಅಡಿಪಾಯವನ್ನು ಹಾಕುತ್ತದೆ. ಜೊತೆಗೆ ಗಟ್ಟಿಯಾದ ವ್ಯಕ್ತಿತ್ವವನ್ನು ರೂಪಿಸುತ್ತದೆ. ಈ ಹಂತದಲ್ಲಿ ವಿದ್ಯಾರ್ಥಿಗಳು ತಮ್ಮ ಗಮನವನ್ನು ಬೇರೆಡೆ ಹರಿಸದೇ ಸಂಪೂರ್ಣವಾಗಿ ಶೈಕ್ಷಣಿಕ ಚಟುವಟಿಕೆ , ಸಾಮಾಜಿಕ ಸಂವಹನ ಮತ್ತು ಹೊಸ ಅನುಭವಗಳ ಅನ್ವೇಷಣೆಯತ್ತ ಗಮನಹರಿಸಬೇಕು ಎಂದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 