ಪ್ಯಾಕೇಜ್ ಟೆಂಡರ್ ಕೈಬಿಡಲು ಆಗ್ರಹಿಸಿ ಮನವಿ
Petition demanding cancellation of package tender
ಬೆಳಗಾವಿ 19: ಪ್ಯಾಕೇಜ್ ಟೆಂಡರ್ ವಿರೋಧಿಸಿ ಗುತ್ತಿಗೆದಾರರ ಸಂಘದ ವತಿಯಿಂದ ಇಂದು ಬೃಹತ್ ಪ್ರತಿಭಟನೆಯನ್ನು ಮಾಡಲಾಯಿತು.
ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಜಗನ್ನಾಥ್ ಶೇಖಾಜಿ ಅವರು ಮಾತನಾಡಿ ಪ್ಯಾಕೇಜ್ ಟೆಂಡರ್ ಬೇಡ, ಎಸ್ಟಿಮೆಟ್ ಟೆಂಡರ್‌ಗಳನ್ನು ಮಾಡಬೇಕು ಎಂದು ಹಲವಾರು ಬಾರಿ ಸಂಬಂಧಪಟ್ಟ ಸಚಿವರಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ಸಿಎಂ ಗಮನ ಸೆಳೆಯಲು ರಾಜ್ಯಾದ್ಯಂತ ಪ್ರತಿಭಟನೆಯನ್ನು ಆರಂಭಿಸಲಾಗಿದೆ. ಗುತ್ತಿಗೆದಾರರಿಗೆ ಬಿಲ್‌ನ್ನೇ ನೀಡಿಲ್ಲ. ಶೇ.12 ರಷ್ಟು ಪರ್ಸೆಂಟೆಜ್ ಪಡೆಯಲಾಗುತ್ತಿದೆ. ಆದರೇ, ಬಿಲ್ ನೀಡುತ್ತಿಲ್ಲವೆಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಕಾರ್ಮಿಕ ಸಚಿವ ಸಂತೋಷ್ ಲಾಡ್ ಮತ್ತು ಶಾಸಕರ ವಿರುದ್ಧ ನೇರವಾಗಿ ಆರೋಪ ಮಾಡಿದರು.
ಬಿಜೆಪಿಯವರು ಮಾಡಿದ್ದನ್ನೇ ಈಗ ಕಾಂಗ್ರೆಸ್ ಕೂಡ ಅದೇ ದಾರಿಯನ್ನ ಹಿಡಿದಿದೆ ಎಂದು ದೂರಿದರು.
ಗುತ್ತಿಗೆದಾರರ ಬೆಳಗಾವಿ ಜಿಲ್ಲಾಧ್ಯಕ್ಷ ರಾಜು ಪದ್ಮಣ್ಣವರ 25 ವಾರ್ಡಗಳನ್ನು ಕೂಡಿಸಿ ಪ್ಯಾಕೇಜ್ ಟೆಂಡರ್ ಕರೆಯಲಾಗಿದೆ. 1 ಕೋಟಿವರೆಗಿನ ಕಾಮಗಾರಿಗಳನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ -1ಕ್ಕೆ ಹಂಚಿಕೆ ಮಾಡಬೇಕೆಂದು ಸರ್ಕಾರವೇ ಆದೇಶಿಸಿದೆ. ಆದರೇ, ನಗರಾಭಿವೃದ್ಧಿ ಸಚಿವರು ಮೀಸಲಾತಿ ನೀಡದೇ, ವಿವಿಧ ವಾರ್ಡಗಳನ್ನು ಒಂದುಗೂಡಿಸಿ ಪ್ಯಾಕೇಜ್ ಟೆಂಡರ್ ಕರೆದಿದ್ದಾರೆ. ಬೇರೆ ಜಿಲ್ಲೆಯ ಗುತ್ತಿಗೆದಾರರಿಗೆ ಗುತ್ತಿಗೆ ನೀಡಿ ಸ್ಥಳೀಯ ಗುತ್ತಿಗೆದಾರರನ್ನು ಅಡಿಯಾಳಾಗಿ ದುಡಿಸಲು ಮುಂದಾಗಿದೆ. ವಾರ್ಡ್ ಪ್ರಕಾರ ಟೆಂಡರ್‌ಗಳನ್ನು ಕರೆಯಬೇಕು ಎಂದು ಆಗ್ರಹಿಸಿದರು. ತಕ್ಷಣ ತನ್ನ ನೀತಿಯನ್ನು ನಗರಾಭಿವೃದ್ಧಿ ಇಲಾಖೆಯೂ ಕೈಬಿಡುವ ತನಕ ಪ್ರತಿಭಟನೆಯನ್ನು ಕೈಬಿಡುವುದಿಲ್ಲವೆಂದು ಎಚ್ಚರಿಕೆಯನ್ನು ನೀಡಿದರು.
ಪ್ರತಿಭಟನಾ ಮೆರವಣಿಗೆಯ ಮೂಲಕ ಬೆಳಗಾವಿ ರಾಣಿ ಚೆನ್ನಮ್ಮ ವೃತ್ತಕ್ಕೆ ಆಗಮಿಸಿದ ಬೆಳಗಾವಿ ಮಹಾನಗರ ಗುತ್ತಿಗೆದಾರ ಸಂಘ ಮತ್ತು ಬೆಳಗಾವಿ ಜಿಲ್ಲಾ ಗುತ್ತಿಗೆದಾರರ ಸಂಘವು ಪ್ಯಾಕೇಜ್ ಟೆಂಡರ್‌ಗಳನ್ನು ಕೂಡಲೇ ರದ್ದುಪಡಿಸಬೇಕೆಂದು ಆಗ್ರಹಿಸಿ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.
ಮೆರವಣಿಗೆಯ ಮೂಲಕ ತೆರಳಿ ಜಿಲ್ಲಾಧಿಕಾರಿಗಳು ಮತ್ತು ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿಯನ್ನು ಸಲ್ಲಿಸಿ ಸರ್ಕಾರ ಕೂಡಲೇ ತನ್ನ ನಿರ್ಣಯ ಬದಲಿಸಬೇಕೆಂದು ಆಗ್ರಹಿಸಿದರು.
ಮನವಿ ಸ್ವೀಕರಿಸಿದ ಬೆಳಗಾವಿ ಮಹಾನಗರ ಪಾಲಿಕೆಯ ಆಯುಕ್ತ ಶುಭಾ ಬಿ. ಅವರು, ಮಹಾತ್ಮಾ ಗಾಂಧಿ ಯೋಜನೆಯ ಕಾಮಗಾರಿಯ ಗುತ್ತಿಗೆಯನ್ನು ಮಹಾನಗರ ಪಾಲಿಕೆ ಕರೆದಿಲ್ಲ. ಇದನ್ನು ಮುಖ್ಯ ಕಾರ್ಯದರ್ಶಿಗಳ ಹಂತದಲ್ಲಿ ಕರೆಯಲಾಗಿದೆ. ಈ ಕುರಿತು ಪರೀಶೀಲಿಸಲಾಗುವುದು ಎಂದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 