ಕುರಿಗಾಹಿಗಳ ಹಿತರಕ್ಷಣೆ ಕಾಯ್ದೆ ಜಾರಿಗೆ ಆಗ್ರಹಿಸಿ ಮನವಿ
Petition demanding the implementation of the Shepherds Protection Act
ಜಮಖಂಡಿ 10: ಸಾಂಪ್ರದಾಯಿಕ ಕುರಿಗಾಹಿಗಳ ಹಿತರಕ್ಷಣೆ ಕಾಯ್ದೆಯನ್ನು ರೂಪಿಸಿ(ರಕ್ಷಣೆ ಹಾಗೂ ದೌರ್ಜನ್ಯ ತಡೆ) ಕಾಯ್ದೆ ಜಾರಿಗೆ ತರಬೇಕು ಎಂದು ಒತ್ತಾಯಿಸಿ ಕುರಿಗಾಹಿಗಳು ಹಾಗೂ ಮುಖಂಡರು ನಗರದ ದೇಸಾಯಿ ವೃತ್ತದಿಂದ ಕುರಿಗಳ ಜೊತೆಗೆ ತಾಲ್ಲೂಕು ಆಡಳಿತ ಸೌಧದವರೆಗೆ ಪ್ರತಿಭಟಣೆ ಮೂಲಕ ಹೋಗಿ ತಹಶೀಲ್ದಾರ ಸದಾಶಿವ ಮಕ್ಕೋಜಿ ಅವರ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿದರು.
ಮುಖಂಡ ಅರ್ಜುನ ದಳವಾಯಿ ಮಾತನಾಡಿ ಕುರಿಗಾರರ ಮೇಲೆ ನಿರಂತವಾಗಿ ನಡೆಯುತ್ತಿರುವ ದೌರ್ಜನ್ಯಗಳು, ಹಲ್ಲೆ, ಜೀವ ಬೇದರಿಕೆ, ಕೊಲೆ, ಅತ್ಯಾಚಾರ, ಕುರಿ ಕಳ್ಳತನ, ಅರಣ್ಯಾಧಿಕಾರಿಗಳ ಲಂಚದ ಬೇಡಿಕೆ ಅಧಿಕ ಪ್ರಮಾಣದಲ್ಲಿ ನಡೆಯುತ್ತಿವೆ. ಸರ್ಕಾರವು ಎಲ್ಲ ವರ್ಗದ ಮಹಿಳೆಯರ ಪರ, ಮಕ್ಕಳ ಪರ, ಶೋಷಿತ ಸಮುದಾಗಳ ಪರ ಹಾಗೂ ವಿವಿಧ ವೃತ್ತಿಪರರ ಹಿತರಕ್ಷಣೆಗೆ ವಿಶೇಷ ಕಾಯ್ದೆಗಳನ್ನು ಜಾರಿ ಮಾಡಿ ಅವರ ರಕ್ಷಣೆ ಮಾಡಬೇಕು ಎಂದರು.
ಹೂವಪ್ಪ ಉಷಾಕರ ಮಾತನಾಡಿ ಗುಡ್ಡುಗಾಡು ಪ್ರದೇಶಗಳಲ್ಲಿ ಕುರಿ ಮೇಸಲು ಹೋದಾಗ ಅರಣ್ಯ ಇಲಾಖೆಯ ಅಧಿಕಾರಿಗಳಿಂದ ಹಾಗೂ ಸಿಬ್ಬಂದಿಗಳಿಂದ ನಿರಂತರ ಕಿರುಕುಳ, ದೌರ್ಜನ್ಯಗಳು ನಡೆಯುತ್ತಿವೆ, ಕುರಿಗಾರಿಕೆ ಮೂಲಕ ಕುಟುಂಬದ ಆರ್ಥಿಕ ಪರಿಸ್ಥಿತಿ ನಿಭಾಯಿಸುವ ಸಾಂಪ್ರದಾಯಿಕ ಕುಲ ಕಸಬಾಗಿದೆ, ಬೆಟ್ಟ-ಗುಡ್ಡಗಳನ್ನು ಒಳಗೊಂಡಂತೆ ಆಯಾ ಪ್ರದೇಶಕ್ಕೆ ಅನುಗುಣವಾಗಿ ಸ್ಥಳೀಯವಾಗಿ ಹಾಗೂ ಸಂಚರಿಸುವ ಮೂಲಕ ಪಾಲನೆ ಮಾಡುತ್ತಿದ್ದು, ಬಡವರ ಪಾಲಿಗೆ ಕುರಿಗಾರಿಕೆ ವರದಾನವಾಗಿರುತ್ತದೆ ಎಂದರು.
ಮುಖಂಡ ಯಲ್ಲಪ್ಪ ಹೆಗಡೆ ಮಾತನಾಡಿ ಇತ್ತೀಚಿಗೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲ್ಲೂಕಿನ ಉಗಲವಾಟ ಗ್ರಾಮದ ಕುರಿಗಾಯಿ ಶರಣಪ್ಪ ಚಿಮ್ಮನಕಟ್ಟಿ, ಬೀದರ ಜಿಲ್ಲೆಯ ಬಸವ ಕಲ್ಯಾಣ ತಾಲ್ಲೂಕಿನ ಕುರಿಗಾಯಿ ಪ್ರಭು ಮೇತ್ರಿ ಇವರನ್ನು ಕುರಿಗಳ್ಳರು ಕೊಲೆ ಮಾಡಿದ್ದು ಹಾಗೂ ಧಾರವಾಡ ಜಿಲ್ಲೆಯ ಕುಂದಗೋಳ ತಾಲ್ಲೂಕಿನಲ್ಲಿ ಲಕ್ಷ್ಮೀ ಕಳ್ಳಮನಿ ಎಂಬ ಕುರಿಗಾಯಿ ಮಹಿಳೆಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿರುವ ನಿದರ್ಶನಗಳು ನಮ್ಮ ಮುಂದಿವೆ ಎಂದರು.
ಹಣಮಂತ ಯಮಗಾರ, ನಾಗಪ್ಪ ಹೆಗಡೆ, ಸಂತೋಷ ಮಮದಾಪೂರ, ಹಣಮಂತ ಮಗದೂಮ್, ಪರಶು ಚಿಗರಿ, ಪ್ರಲ್ಹಾದ ಭಜಂತ್ರಿ, ರಾಜು ನದಾಪ್ ಸೇರಿದಂತೆ ಇತರರು ಇದ್ದರು.
ಕುರಿ ಕಾಯಲು ಕುರಿಗಾಹಿಗಳಿಗೆ ಸರ್ಕಾರ ಅನುಕೂಲ ಮಾಡಬೇಕು, ಅರಣ್ಯ ಪ್ರದೇಶದಲ್ಲಿ ಬಿಟ್ಟರೆ ಅರಣ್ಯ ಇಲಾಖೆಯವರು ತೊಂದರೆ ಮಾಡುತ್ತಿದ್ದಾರೆ, ಆದ್ದರಿಂದ ಸರ್ಕಾರ ಶಾಶ್ವತ ಪರಿಹಾರವನ್ನು ಮಾಡಬೇಕು, ಅರಣ್ಯ ಇಲಾಖೆ ಸಚಿವರಾದ ಈಶ್ವರ ಖಂಡ್ರೆಯವರ ಜೊತೆ ಮಾತನಾಡಿ ಶಾಶ್ವತ ಪರಿಹಾರಕ್ಕೆ ಮನವಿ ಮಾಡಲಾಗುವದು, ಸ್ಥಳಿಯ ಸಮಸ್ಯೆಗಳ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆಗಳನ್ನು ಪರಿಹರಿಸಲಾಗುವದು.
- ಮಾಜಿ ಶಾಸಕ ಆನಂದ ನ್ಯಾಮಗೌಡ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 