ರಾಜ್ಯದಲ್ಲಿ ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ

ಬೆಂಗಳೂರು 15: ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ ಹೆಚ್ಚಳ ಮಾಡಿದ್ದು, ರಾಜ್ಯದಲ್ಲಿ ತೈಲ ಬೆಲೆ ಹೆಚ್ಚಳ‌ವಾಗಲಿದೆ.

ರಾಜ್ಯ ಸರ್ಕಾರ ಶನಿವಾರ ಪೆಟ್ರೋಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆಯನ್ನು ಶೇ 25.92 ರಿಂದ ಶೇ 29.84 ಕ್ಕೆ ಏರಿಕೆ ಮಾಡಿದೆ ಮತ್ತು ಡೀಸೆಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆಯನ್ನು ಶೇ. 14.34 ರಿಂದ ಶೇ. 18.44 ಕ್ಕೆ ಹೆಚ್ಚಳ ಮಾಡಿದೆ.

ರಾಜ್ಯ ಸರ್ಕಾರದ ತೆರಿಗೆ ಹೆಚ್ಚಳದ ಪರಿಣಾಮ ರಾಜ್ಯದಲ್ಲಿ ಪೆಟ್ರೋಲ್ ಬೆಲೆ 3 ರೂ. ಹಾಗೂ ಡಿಸೇಲ್ ಬೆಲೆ 3.50 ರೂಪಾಯಿ ಹೆಚ್ಚಳ‌ವಾಗಲಿದೆ. ಇದರೊಂದಿಗೆ, ಸುದೀರ್ಘ ಸಮಯದ ನಂತರ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ದುಬಾರಿಯಾಗುತ್ತಿದೆ.

ತಕ್ಷಣದಿಂದಲೇ ಪೆಟ್ರೋಲ್ ಹಾಗೂ ಡೀಸೆಲ್ ದರ ಹೆಚ್ಚಳವಾಗಲಿದೆ ಎಂದು ರಾಜ್ಯ ಸರ್ಕಾರ ಇಂದು ಮಧ್ಯಾಹ್ನ ಹೊರಡಿಸಿರುವ ಸುತ್ತೋಲೆಯಲ್ಲಿ ಉಲ್ಲೇಖಿಸಿದೆ.