ಸಚಿವೆ ಹೆಬ್ಬಾಳ್ಕರ್ ಮನೆ ಸಮೀಪವೇ ಪೆಟ್ರೋಲ್ ಕಳ್ಳರ ಹಾವಳಿ
Petrol thieves attack near Minister Hebbalkar's house
ಬೆಳಗಾವಿ 12 : ನಗರದಾದ್ಯಂತ ಉಡಿ ರೌಡಿಗಳ ಅಟ್ಟಹಾಸಕ್ಕೆ ಸಾರ್ವಜನಿಕರ ನಿದ್ದೆಗೆಡಿಸಿದೆ. ಪೆಟ್ರೋಲ್ ಕಳ್ಳರ ಗ್ಯಾಂಗ್ ಲಾಂಗು, ಮಚ್ಚು ಹಿಡಿದು ರಸ್ತೆಯಲ್ಲೇ ಅಟ್ಟಹಾಸ ಮೆರೆಯುತ್ತುದ್ದಾರೆ. ಬೈಕ್ ಗಳ ಪೆಟ್ರೋಲ್ ಕದಿಯುತ್ತಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಮನೆಯ ಸಮೀಪವೇ ಈ ಕಳ್ಳರ ಗ್ಯಾಂಗ್ ಅಟ್ಟಹಾಸ ಮೆರೆದಿರುವ, ದೃಶ್ಯ ಇದೀಗ ಸಿಸಿಟಿವಿಯಲ್ಲಿ ಸೆರೆಯಾಗಿದೆ.ಬೆಳಗಾವಿಯ ಹನುಮಾನ ನಗರದ ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೆಟ್ರೋಲ್ ಕಳ್ಳರ ಗ್ಯಾಂಗ್ ಸರಣಿ ಕಳ್ಳತನಕ್ಕೆ ಸ್ಥಳೀಯರಲ್ಲಿ ಭಯವನ್ನು ಹುಟ್ಟು ಹಾಕಿದೆ.ಪೆಟ್ರೋಲ್ ದರ ಏರಿಕೆಯಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಸಕ್ರಿಯವಾಗಿರುವ ಈ ಖದೀಮರು, ಮುಖಕ್ಕೆ ಮಾಸ್ಕ್ ಧರಿಸಿ ಕೈಯಲ್ಲಿ ಮಾರಕಾಸ್ತ್ರಗಳಾದ ಲಾಂಗು ಮತ್ತು ಪೆಟ್ರೋಲ್ ತುಂಬಲು ಬಾಟಲಿಗಳನ್ನು ಹಿಡಿದು ಬೀದಿಗಿಳಿದಿದ್ದಾರೆ. ಮನೆಗಳ ಮುಂದೆ ನಿಲ್ಲಿಸಿದ್ದ ಕಾರು ಹಾಗೂ ದ್ವಿಚಕ್ರ ವಾಹನಗಳನ್ನೇ ಟಾರ್ಗೆಟ್ ಮಾಡಿರುವ ಇವರು, ಪೆಟ್ರೋಲ್ ಮತ್ತು ಡೀಸೆಲ್ ಕದಿಯಲು ಅಂಚು ಹಾಕಿದ್ದಾರೆ.ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಮನೆಯ ಸಮೀಪವೇ ಇಂತಹ ಘಟನೆ ನಡೆದಿರುವುದು ಸ್ಥಳೀಯರ ಭದ್ರತೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಈ ಕಳ್ಳರ ಗ್ಯಾಂಗ್ ಅಟ್ಟಹಾಸದ ದೃಶ್ಯಗಳು ಸಮೀಪದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸ್ಪಷ್ಟವಾಗಿ ಸೆರೆಯಾಗಿವೆ. ದ್ವಿಚಕ್ರ ವಾಹನಗಳಷ್ಟೇ ಅಲ್ಲದೆ, ಕಾರುಗಳ ಟ್ಯಾಂಕ್ಗೂ ಕನ್ನ ಹಾಕಲು ಯತ್ನಿಸುತ್ತಿರುವ ಈ ಖದೀಮರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸ ಇಲಾಖೆಗೆ ಸ್ಥಳೀಯರು ಆಗ್ರಹಿಸಿದ್ದಾರೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 