ಕ್ರೀಡೆಯಿಂದ ದೈಹಿಕ ಹಾಗೂ ಮಾನಸಿಕ ಸಧೃಡತೆ ಸಾಧ್ಯ : ರಾಜುಗೌಡ ಪಾಟೀಲ

ದೇವರಹಿಪ್ಪರಗಿ 04: ಈ ಹಿಂದೆ ವಿದ್ಯಾರ್ಥಿಗಳು ಮೈದಾನದಲ್ಲಿ ಆಟವಾಡಿ ತಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಂಡು ತಮ್ಮ ಭವಿಷ್ಯ ರೂಪಿಸಿಕೊಂಡ ಉದಾಹರಣೆಗಳಿವೆ. ಇಂದು ಮಕ್ಕಳು ಮೊಬೈಲ್ದಲ್ಲಿ ಆಟ ಆಡುತ್ತ ಆರೋಗ್ಯ ವಂಚಿತರಾಗುತ್ತಿದ್ದಾರೆ. ಕ್ರೀಡೆಯಿಂದ ದೈಹಿಕ, ಮಾನಸಿಕ ಸಧೃಡತೆ ಸಾಧ್ಯ ಎಂದು ಶಾಸಕ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ ತಮ್ಮ ಕಳವಳ ವ್ಯಕ್ತಪಡಿಸಿದರು.ತಾಲೂಕಿನ ಮಣೂರ ಗ್ರಾಮದ ಕೆ.ಎಸ್‌.ಎಲ್‌.ಎ ಪ್ರೌಢಶಾಲಾ ಆವರಣದಲ್ಲಿ ನಡೆದ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳ ಜಿಲ್ಲಾ ಮಟ್ಟದ ವಾಲಿಬಾಲ್ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ ಅವರು,ಪಾಲಕರು ಮತ್ತು ಶಿಕ್ಷಕರು ಮಕ್ಕಳಿಗೆ ಮೊಬೈಲ್ನಲ್ಲಿ ಆಟ ಆಡುವುದನ್ನು ನಿಲ್ಲಿಸಿ ಮೈದಾನದಲ್ಲಿ ಆಟವಾಡಲು ಪ್ರೋತ್ಸಾಹಿಸಬೇಕು. ಅಂದಾಗ ಮಕ್ಕಳ ಆರೋಗ್ಯ ವೃದ್ಧಿಯಾಗಲು ಸಾಧ್ಯ. ಕ್ರೀಡೆಗಳಲ್ಲಿ ಸೋಲು, ಗೆಲುವು ಸಾಮಾನ್ಯ ಆದ್ದರಿಂದ ಎರಡನ್ನು ಸಮಾನವಾಗಿ ಸ್ವೀಕರಿಸಿ ಸೋಲು ಗೆಲುವಿನ ಕೊನೆಯಲ್ಲವಾದ್ದರಿಂದ ಸೋಲನ್ನು ಗೆಲುವಾಗಿ ಪರಿವರ್ತಿಸುವ ಮೂಲಕ ರಾಷ್ಟ್ರ ಅಂತರಾಷ್ಟ್ರ ಮಟ್ಟದಲ್ಲಿ ಹೆಸರು ಗಳಿಸುವಂತ್ತಾಗಲಿ ಎಂದು ಶುಭ ಹಾರೈಸಿದರು.ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ದೇವೂರ ಗ್ರಾಮದ ಹಿರೇಮಠದ ಶ್ರೀ ಷ.ಬ್ರ ಮರಳಾರಾದ್ಯ ಶಿವಾಚಾರ್ಯರು ಮಾತನಾಡಿ, ಸಂಸ್ಥೆಯ ಅಧ್ಯಕ್ಷರು ಶಿಕ್ಷಕರು ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿ ಕೆಲಸ ನಿರ್ವಹಿಸುತ್ತಿರುವುದು ಶ್ಲಾಘನೀಯ.ವಿದ್ಯಾರ್ಥಿಗಳು ಕ್ರೀಡಾ ಸ್ಫೂರ್ತಿಯೊಂದಿಗೆ ಒಗ್ಗಟ್ಟಾಗಿ ಪಂದ್ಯಾಟದಲ್ಲಿ ಭಾಗವಹಿಸಿ ಎಂದು ಸಲಹೆ ನೀಡಿದರು. 

ಇದೇ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಬಿ.ಯಡ್ರಾಮಿ, ಕ್ಷೇತ್ರ ದೈಹಿಕ ಶಿಕ್ಷಣಾರ್ಥಿಗಳಾದ ನಾಮದೇವ ಚವ್ಹಾಣ, ಸಂಸ್ಥೆಯ ಅಧ್ಯಕ್ಷರಾದ ಎಲ್‌.ಆರ್‌. ಅಂಗಡಿ, ಮುಖಂಡರುಗಳಾದ ವಿಜಯಕುಮಾರ್ ನಾಯಕ,ಕೇಸು ನಾಯಕ, ಮಲ್ಕಪ್ಪ ಬಾಗೇವಾಡಿ, ಅಂಬಣ್ಣ ಆನೆಗುಂದಿ, ಚಂದ್ರಕಾಂತ ಪ್ಯಾಟಿ,ಅನಿಲ್ ನಾಯಕ, ಕಲ್ಮೇಶ್ ಬಗಲಿ, ಅಬ್ಬಸಾಲಿ ಬಾಗವಾನ, ಭೀಮಾಶಂಕರ್ ಪಾಟೀಲ್, ಮುಖ್ಯ ಶಿಕ್ಷಕರಾದ ಎಸ್ .ಸಿ.ಕಿತ್ತೂರ, ಶಿಕ್ಷಕರಾದ ಎಂ.ಜಿ.ಸಜ್ಜನ್, ಎಸ್‌.ಡಿ ಆನೆಗುಂದಿ,ಪಿ.ಕೆ.ನಾಯಕ, ಆರ್‌.ಯು.ಜಾಡರ ಸೇರಿದಂತೆ ಗ್ರಾಮದ ಪ್ರಮುಖರು, ಗಣ್ಯರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಬಾಕ್ಸ್‌. ಜಿಲ್ಲಾ ಮಟ್ಟದಿಂದ ವಿಭಾಗ ಮಟ್ಟಕ್ಕೆ ಆಯ್ಕೆ. ದೇವರಹಿಪ್ಪರಗಿ ತಾಲೂಕಿನ ಮಣೂರ ಗ್ರಾಮದ ಕೆ.ಎಸ್‌.ಎಲ್‌.ಎ ಪ್ರೌಢಶಾಲಾ ಆವರಣದಲ್ಲಿ ಶುಕ್ರವಾರ ನಡೆದ  2024-25 ಸಾಲಿನ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದಕ್ಕೆ ಸಂಸ್ಥೆಯ ಅಧ್ಯಕ್ಷರು, ಪ್ರಾಂಶುಪಾಲರು, ಶಿಕ್ಷಕರು ವಿದ್ಯಾರ್ಥಿಗಳನ್ನು ಅಭಿನಂದಿಸಿ ಶುಭ ಹಾರೈಸಿದ್ದಾರೆ.ಇದೇ ಸಂದರ್ಭದಲ್ಲಿ ಶ್ರೀ ವೆಂಕಟೇಶ್ವರ ವಿದ್ಯಾವರ್ಧಕ ಸಂಸ್ಥೆಯ ಅಧ್ಯಕ್ಷ ಎಲ್‌.ಆರ್‌.ಅಂಗಡಿ,ಮುಖ್ಯ ಶಿಕ್ಷಕ ಎಸ್‌.ಸಿ.ಕಿತ್ತೂರ, ದೈಹಿಕ ಶಿಕ್ಷಕ ಎಸ್‌.ಡಿ.ಆನೆಗುಂದಿ, ಶಿಕ್ಷಕರಾದ ಪ್ರಕಾಶ ನಾಯಕ, ಮೋಹನ ಸಜ್ಜನ ಸೇರಿದಂತೆ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.