ಕಡಣಿ ಶಾಲೆಯಲ್ಲಿ ಹಂದಿಗಳ ದರಬಾರ್; ವಿದ್ಯಾರ್ಥಿಗಳ ಆರೋಗ್ಯಕ್ಕೆ ಆತಂಕ

ಕಡಣಿ ಶಾಲೆಯಲ್ಲಿ ಹಂದಿಗಳ ದರಬಾರ್; ವಿದ್ಯಾರ್ಥಿಗಳ ಆರೋಗ್ಯಕ್ಕೆ ಆತಂಕ  Pig prices rise at Kadani school; concerns over students' health

ಆಲಮೇಲ  28: ಸಮೀಪದ ಕಡಣಿ ಗ್ರಾಮದ ಸರ್ಕಾರಿ ಕನ್ನಡ ಗಂಡು ಮಕ್ಕಳ ಶಾಲೆಯ ಅಡುಗೆ ಕೋಣೆ ಬಳಿ ಹಂದಿಗಳು ಓಡಾಡುತ್ತಿದ್ದು, ಸ್ವಚ್ಛತೆ ಕೊರತೆಯಿಂದ ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ಆತಂಕ ವ್ಯಕ್ತವಾಗಿದೆ.  ಮಳೆ ನೀರು ಶಾಲಾ ಆವರಣದಲ್ಲಿ ನಿಂತಿರುವುದರಿಂದ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ತೊಂದರೆ ಅನುಭವಿಸುತ್ತಿದ್ದಾರೆ. ಹಂದಿಗಳ ಸಂಚಾರ ಹಾಗೂ ಕೊಳಚೆ ನೀರಿನಿಂದ ಮಕ್ಕಳಲ್ಲಿ ಜ್ವರ, ಕೆಮ್ಮು, ಶೀತ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಗಳು ಉಂಟಾಗುವ ಭೀತಿ ಇದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಈ ಕುರಿತು ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿರುವ ಗ್ರಾಮಸ್ಥರು, ಶಾಲಾ ಆವರಣವನ್ನು ತಕ್ಷಣ ಸ್ವಚ್ಛಗೊಳಿಸಿ ಶಾಶ್ವತ ಪರಿಹಾರ ಕಲ್ಪಿಸಬೇಕೆಂದು ಆಗ್ರಹಿಸಿದ್ದಾರೆ.