ಗದಗ 09: ಗದಗ ಜಿಲ್ಲೆಯ ರೋಣ ಹಾಗೂ ಗದಗ ತಾಲೂಕುಗಳನ್ನು ಅತೀ ಹೆಚ್ಚು ಅಂತರ್ಜಲ ಬಳಕೆಯ ಪ್ರದೇಶಗಳೆಂದು ಘೋಷಿಸಲಾಗಿದೆ ಎಂದು ಗದಗ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ನುಡಿದರು.
ಗದಗ ಜಿಲ್ಲಾ ಅಂತರ್ಜಲ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈ ತಾಲೂಕುಗಳಲ್ಲಿ ಕೊಳವೆ ಭಾವಿ ಕೊರೆಯಿಸಲು ಜಿಲ್ಲಾ ಅಂತರ್ಜಲ ಪ್ರಾಧಿಕಾರದ ಅನುಮತಿ ಪಡೆಯುವದು ಕಡ್ಡಾಯವಾಗಿದೆ. ಈ ತಾಲೂಕುಗಳ ವ್ಯಾಪ್ತಿಗಳಲ್ಲಿ 2018ರ ಜನೇವರಿಯಿಂದ ಇತ್ತೀಚಿಗೆ ಅನುಮತಿ ಪಡೆಯದೇ ಕೊಳವೆ ಭಾವಿಗಳನ್ನು ಕೊರೆಯಿಸಿದಲ್ಲಿ ಅಂತಹವರು ಪ್ರಾಧಿಕಾರಕ್ಕೆ ಮಾಹಿತಿಯನ್ನು ನೀಡಿ ನೋಂದಣಿ ಮಾಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.
ಸಭೆಯಲ್ಲಿ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅಂತರ್ಜಲ ಇಲಾಖೆಯ ಹಿರಿಯ ಭೂ ವಿಜ್ಞಾನಿ ರಾಜಶೇಖರ ರೆಡ್ಡಿ, ಜಿಲ್ಲಾ ಪರಿಸರ ಅಧಿಕಾರಿ ರುದ್ರೇಶ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಹೆಸ್ಕಾಂ ಕಾರ್ಯಪಾಲಕ ಅಭಿಯಂತರರು, ಸಣ್ಣ ನೀರಾವರಿ ಇಲಾಖೆಯ ಸಹಾಯಕ ಕಾರ್ಯನಿವರ್ಾಹಕ ಅಭಿಯಂತರರು ಸಭೆಯಲ್ಲಿ ಭಾಗವಹಿಸಿದ್ದರು.