ಬಾಗಲಕೋಟೆ: ವಿವಿಧ ಯೋಜನೆಗಳ ಅನುಷ್ಠಾನಕ್ಕೆ ಬಿಡುಗಡೆಯಾದ ಅನುದಾನ ಸದುಪಯೋಗವಾಗಬೇಕೆಂದು ಜಿಲ್ಲಾ ಪಂಚಾಯತ ಅಧ್ಯಕ್ಷೆ ಬಾಯಕ್ಕ ಮೇಟಿ ತಿಳಿಸಿದರು.
ಜಿಲ್ಲಾ ಪಂಚಾಯತ ಸಭಾಭವನದಲ್ಲಿಂದು ಜರುಗಿದ ಜಿ.ಪಂ ಕನರ್ಾಟಕ ಅಭಿವೃದ್ದಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿ.ಪಂ ವ್ಯಾಪ್ತಿಯ ಪ್ರತಿಯೊಂದು ಇಲಾಖೆಗಳಲ್ಲಿ ಬರುವ ವಿವಿಧ ಯೋಜನೆಗಳಿಗೆ ಬಿಡುಗಡೆಯಾದ ಅನುದಾನ ಸದುಪಯೋಗವಾಗಬೇಕು. ಜನರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮಾಡಲು ತಿಳಿಸಿದರು.
ಜಿಲ್ಲೆಯಲ್ಲಿ ರೈತರಿಗೆ ವಿತರಿಸಲಾಗುತ್ತಿರುವ ರೈತ ಸಂಪರ್ಕ ಕೇಂದ್ರಗಳಲ್ಲಿ ಬೀಜ, ರಸಗೊಬ್ಬರ ಹಾಗೂ ಔಷಧಿಗಳನ್ನು ಉತ್ತಮವಾಗಿರಬೇಕು. ವಿತರಿಸುವ ಪೂರ್ವದಲ್ಲಿ ಸ್ಯಾಂಪಲ್ಗಳನ್ನು ಪಡೆದು ಪರಿಶೀಲಿಸಿದ ನಂತರವೇ ವಿತರಣೆಗೆ ಕ್ರಮಕೈಗೊಳ್ಳಬೇಕು. ರೈತ ಸಂಪರ್ಕ ಕೇಂದ್ರಗಳಲ್ಲಿ ವಿತರಿಸುತ್ತಿರುವ ಗೋವಿನ ಜೋಳ ಕಳಪೆಯಿಂದ ರೈತರು ನಷ್ಟ ಅನುಭವಿಸಿದ್ದಾರೆ ಎಂದು ತಿಳಿಸಿದಾಗ ಇದಕ್ಕೆ ಪ್ರತಿಕ್ರಿಯಿಸಿದ ಜಂಟಿ ಕೃಷಿ ನಿದರ್ೇಶಕಿ ಚೈತ್ರಾ ಪಾಟೀಲ ಜಮಖಂಡಿ ತಾಲೂಕಿನ ರೈತ ಸಂಪರ್ಕ ಕೇಂದ್ರದಲ್ಲಿ ಗೋವಿನ ಜೋಳದ ಎರಡು ಮಾದರಿಗಳು ಕಳಪೆ ಮಟ್ಟದಾಗಿರುವುದು ಕಂಡಬು ಬಂದಿದ್ದು, ಬೀಜ ಸರಬರಾಜು ಸಂಸ್ಥೆಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಶಾಲೆಗೆ ತರುವ ಕೆಲಸವಾಗಬೇಕು. ಈಗಾಗಲೇ 400 ಮಕ್ಕಳ ಪೈಕಿ 240 ಮಕ್ಕಳು ಮರಳಿ ಶಾಲೆಗೆ ದಾಖಲಾಗಿದ್ದು, ಇನ್ನು 160 ಮಕ್ಕಳು ಶಾಲೆಯಿಂದ ಹೊರಗುಳಿದಿದ್ದಾರೆ. ಹೀಗಾಗಿ ಪ್ರತಿ ಮನೆ ಮನೆಗಳಿಗೆ ಬೇಟಿ ನೀಡಿ ಪಾಲಕರ ಮನವೊಲಿಸಿ ಮಕ್ಕಳು ಶಾಲೆಯಿಂದ ಹೊರಗುಳಿಯದಂತೆ ಕ್ರಮಕೈಗೊಳ್ಳಲು ಸೂಚಿಸಿದರು. ಶಿಕ್ಷಕರು ಶಾಲೆಗಳಿಗೆ ಸರಿಯಾಗಿ ಹೋಗುತ್ತಿಲ್ಲವೆಂದು ದೂರುಗಳು ಬಂದಿದ್ದು, ಈ ಕುರಿತು ಕ್ರಮಕೈಗೊಳ್ಳಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿದರ್ೇಶ ಎಸ್.ಎಸ್.ಬಿರಾದಾರ ಅವರಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ರೇಷ್ಮೆ ಬೆಳೆಗಾರರ ಸಂಖ್ಯೆ ಬಹಳಷ್ಟು ಕಡಿಮೆ ಇದ್ದು, ರೇಷ್ಮೆ ಬೆಳೆಯುವ ರೈತರ ಸಂಖ್ಯೆ ಹೆಚ್ಚಿಗೆಯಾಗಬೇಕು. ಮಹಾತ್ಮಾಗಾಂಧಿ ಉದ್ಯೋಗ ಖಾತರಿ ಯೋಜನೆಯಡಿ ಸಾಕಷ್ಟು ಅವಕಾಶವಿದ್ದು, ಇದರ ಸದುಪಯೋಗ ರೇಷ್ಮೆ ಬೆಳೆಗಾರರು ಪಡೆಯುವಂತೆ ಮಾಡಬೇಕು. ರೇಷ್ಮೆ ಬೆಳೆಯಿಂದ ಉತ್ತಮ ಆದಾಯವಿದ್ದು, ಇಲಾಖೆಯಿಂದ ಹೆಚ್ಚಿನ ಪ್ರಚಾರಕೈಗೊಂಡು ಹಿಪ್ಪು ನೇರಳೆ ಹೊಸನಾಟಿ ಹಾಗೂ ನರೇಗಾ ಯೋಜನೆಯಡಿ ಪ್ರಗತಿಗೆ ಹೆಚ್ಚು ಒತ್ತು ನೀಡಿ ರೈತರಲ್ಲಿ ರೇಷ್ಮೆ ಕೃಷಿ ಬಗ್ಗೆ ಮಾಹಿತಿ ನೀಡಬೇಕು ಎಂದರು ಬಾಯಕ್ಕ ಮೇಟಿ ತಿಳಿಸಿದರು.
ಜಿಲ್ಲೆಯ ಹಸರಿಕರಣಕ್ಕಾಗಿ ರೈತರಿಗೆ, ಸಂಘ ಸಂಸ್ಥೆ, ಶಾಲಾ-ಕಾಲೇಜು ಹಾಗೂ ವಸತಿ ನಿಲಯಗಳ ಆವರಣದಲ್ಲಿ ಸಸಿಗಳನ್ನು ವಿತರಿಸುವ ನಿಟ್ಟಿನಲ್ಲಿ ಒಟ್ಟು 636791 ಸಸಿಗಳನ್ನು ನೆಡೆಸಲಾಗಿದೆ. ಹೆಚ್ಚಾಗಿ ಬೇವು, ಹೆಬ್ಬೇವು, ಆಲ, ಅರಳಿ, ಬಸರಿ, ಪೇರಲ, ನಿಂಬು, ನುಗ್ಗೆ, ಸಾಗವಾನಿ, ತಪಸಿ, ಬದಾಮ, ಹೊಂಗೆ ಸೇರಿದಂತೆ ವಿವಿಧ ಜಾತಿಯ ಸಸಿಗಳನ್ನು ಬೆಳೆಸಲಾಗಿದ್ದು, ಅವುಗಳ ನಿರ್ವಹಣೆ ಕಾರ್ಯ ಮಾಡಲಾಗುತ್ತಿದೆ ಎಂದು ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಸಭೆಗೆ ತಿಳಿಸಿದರು.
ಹುನಗುಂದ ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ವಾಂತಿ ಭೇದಿ ಉಂಟಾಗಿದ್ದು, ಇದಕ್ಕೆ ಮುಂಜಾಗ್ರತ ಕ್ರಮಕೈಗೊಳ್ಳಲಾಗಿದ್ದು, ಯಾವುದೇ ಪ್ರಕರಣಗಳು ಕಂಡುಬಂದಿರುವದಿಲ್ಲ. ಮೂಗನೂರು, ಬಸವನಾಳ ಹಾಗೂ ಬೂದಿಹಾಳದಲ್ಲಿ ರಕ್ತ ಪರೀಕ್ಷೆಗೆ ತಂಡ ರಚಿಸಿ ಕ್ರಮಕೈಗೊಳ್ಳಲಾಗಿದೆ.
ಕೆಲೂರಿನಲ್ಲಿ ಆರೋಗ್ಯ ಕೇಂದ್ರದ ಕಟ್ಟಡ ಹಾಳಾಗಿದ್ದು, ಹೊಸದಾಗಿ ಕಟ್ಟಡ ಕಟ್ಟುವ ಕುರಿತು ಕೇಂದ್ರ ಕಚೇರಿಗೆ ಪತ್ರ ಬರೆಯಲಾಗಿದೆ. ಅಲ್ಲದೇ ಕಲಾದಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ವಸತಿ ಗೃಹದ ದುರಸ್ಥಿಗೂ ಪತ್ರ ಬರೆಯಲಾಗಿದೆ ಎಂದು ಜಿಲ್ಲಾ ಕುಷ್ಟರೋಗ ನಿಯಂತ್ರಣಾಧಿಕಾರಿ ಡಾ.ಕುಸುಮಾ ಮಾಗಿ ಸಭೆಗೆ ತಿಳಿಸಿದರು.
ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಮಾಡಲಾಯಿತು. ಸಭೆಯಲ್ಲಿ ಜಿ.ಪಂ ಉಪಾದ್ಯಕ್ಷ ಮುತ್ತಪ್ಪ ಕೋಮಾರ, ಜಿ.ಪಂ ಸದಸ್ಯರು, ಜಿ.ಪಂ ಯೋಜನಾ ನಿದರ್ೇಶಕ ವಿ.ಎಸ್.ಹಿರೇಮಠ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ತಾಲೂಕಾ ಪಂಚಾಯತ ಕಾರ್ಯನಿವರ್ಾಹಕ ಅಧಿಕಾರಿಗಳು ಉಪಸ್ಥಿತರಿದ್ದರು.