ಕ್ರೀಡಾ ಮನೋಭಾವದಿಂದ ಆಟವಾಡಿ: ದಮ್ಮೂರಮಠ
Play with a sportsmanlike spirit: Dammuramatha
ತಾಳಿಕೋಟಿ: ವಿದ್ಯಾರ್ಥಿಗಳು ಪಾಠದ ಜೊತೆಗೆ ಕ್ರೀಡೆಗೂ ಮಹತ್ವ ನೀಡಬೇಕು. ಕ್ರೀಡೆಗಳು ದೈಹಿಕ ಹಾಗೂ ಮಾನಸಿಕ ವಿಕಸನಕ್ಕೆ ಪೂರಕವಾಗಿದ್ದು, ಸಮಾನವಾಗಿ ಸ್ವೀಕರಿಸುವ ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಮುದ್ದೇಬಿಹಾಳ ಕ್ಷೇತ್ರ ಸಮನ್ವಯ ಅಧಿಕಾರಿ ಆರಿ್ಬ. ದಮ್ಮೂರಮಠ ಹೇಳಿದರು.
ಪಟ್ಟಣದ ಸರ್ವಜ್ಞ ವಿದ್ಯಾಪೀಠ ಪ್ರೌಢಶಾಲೆಯಲ್ಲಿ 2026-27 ಸಾಲಿನ ಪಶ್ಚಿಮ ವಲಯ ಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟದ ಕ್ರೀಡಾ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಪಿಎಸ್‌ಐ ಜ್ಯೋತಿ ಖೋತ ಮಾತನಾಡಿ, ಕ್ರೀಡೆಗಳು ಜೀವನದ ಅವಿಭಾಜ್ಯ ಅಂಗವಾಗಬೇಕು. ನಿರ್ಣಾಯಕರು ನಿಷ್ಪಕ್ಷಪಾತವಾಗಿ ತೀಪು ನೀಡುವ ಮೂಲಕ ಕ್ರೀಡಾಳುಗಳನ್ನು ಪ್ರೋತ್ಸಾಹಿಸಬೇಕು ಎಂದರು.
ಸರ್ವಜ್ಞ ವಿದ್ಯಾಪೀಠ ಸಂಸ್ಥಾಪಕ ಅಧ್ಯಕ್ಷ ಸಿದ್ದನಗೌಡ ಮಂಗಳೂರ ಅಧ್ಯಕ್ಷತೆ ವಹಿಸಿದ್ದರು. ದೈಹಿಕ ಶಿಕ್ಷಕ ಶಾಂತಗೌಡ ಬಿರಾದಾರ ಪ್ರತಿಜ್ಞಾವಿಧಿ ಬೋಧಿಸಿದರು. ಕಾರ್ಯಕ್ರಮದಲ್ಲಿ ಸಿಆರ್ಸಿ ರಾಜು ವಿಜಾಪುರ, ಅಶೋಕ ಮಾಡಗಿ ಸೇರಿದಂತೆ ಶಿಕ್ಷಕರು, ಅಧಿಕಾರಿಗಳು ಹಾಗೂ ಕ್ರೀಡಾಪಟು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 