ಪಂ.ಶಂಕರ ಕಬಾಡಿ ಅವರ ಷಷ್ಟಬ್ದಿ ಮಹೋತ್ಸವ, ಗುರುವಂದನಾ ಕಾರ್ಯಕ್ರಮ
Pm. Shankar Kabadi's 60th birthday celebration, Guru Vandana program
ಪಂ.ಶಂಕರ ಕಬಾಡಿ ಅವರ ಷಷ್ಟಬ್ದಿ ಮಹೋತ್ಸವ, ಗುರುವಂದನಾ ಕಾರ್ಯಕ್ರಮ
ಧಾರವಾಡ, 07 ; ನಗರದ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಶಾರದಾ ಸಂಗೀತ ವಿದ್ಯಾಲಯದ ವತಿಯಿಂದ ಪಂ.ಶಂಕರ ಕಬಾಡಿ ಅವರ ಷಷ್ಟಬ್ದಿ ಮಹೋತ್ಸವ ಮತ್ತು ಗುರುವಂದನಾ ಕಾರ್ಯಕ್ರಮವನ್ನು ದಿನಾಂಕ: 10.08.2025ರಂದು ಮುಂ. 9.00 ಗಂಟೆಗೆ ಆಯೋಜಿಸಲಾಗಿದೆ.
ಹಿರಿಯ ವಯೋಲಿನ್ ವಾದಕ ಪಂ. ಬಿ.ಎಸ್.ಮಠ, ಪಂ.ವಾದಿರಾಜ ನಿಂಬರಗಿ ಹಾಗೂ ಹಿರಿಯ ತಬಲಾ ವಾದಕ ಪಂ. ರಘುನಾಥ ನಾಕೋಡ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ನಂತರ ಶಂಕರ ಕಬಾಡಿಯವರ ಶಿಷ್ಯ ವೃಂದದಿಂದ ಸ್ವರ ಝೇಂಕಾರ ವಯೋಲಿನ್ ನಾದ ನಮನ ಕಾರ್ಯಕ್ರಮ ನಡೆಸಿಕೊಡಲಿದ್ದು, ನಂತರ ಶಂಕರ ಕಬಾಡಿಯವರ ವಯೋಲಿನ್ ವಾದನಕ್ಕೆ ಡಾ. ರವಿಕಿರಣ ನಾಕೋಡ ತಬಲಾ ಸಾಥ್ ಸಂಗತ ನೀಡುವರು ಎಂದು ಶ್ರೀ ಕುಮಾರೇಶ್ವರ ಕಲ್ಚರಲ್ ಸೊಸೈಟಿ ಅಧ್ಯಕ್ಷ ಮಲ್ಲಿಕಾರ್ಜುನ ಚಿಕ್ಕಮಠ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು.
ಪ್ರಕಾಶ ಬಾಳಿಕಾಯಿ, ಶಿಷ್ಯವೃಂದದ ಮಳೇಮಲ್ಲೇಶ ಹೂಗಾರ, ಪಾಲಕ ವೃಂದದ ದಯಾನಂದ ದಾನಗೇರಿ, ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 