ಸೆ.9ರಂದು ‘ನನ್ನೊಳಗಿನ ಮೌನದ ಮಾತು’ ಕವನ ಸಂಕಲನ ಲೋಕಾರೆ್ಣ
Poetry collection ‘Nannolagina Mounada Maathu’ to be released on September 9
ಲೋಕದರ್ಶನ ವರದಿ
ಹರಪನಹಳ್ಳಿ, ಸೆ.7: ನವಜ್ಯೋತಿ ಸಾಂಸ್ಕೃತಿಕ ಸೇವಾ ಸಂಸ್ಥೆ ಹಾಗೂ ಸರ್ಕಾರಿ ಪದವಿ ಕಾಲೇಜು, ಹರಪನಹಳ್ಳಿ ಇವರ ಸಹಯೋಗದಲ್ಲಿ ಕನ್ನಡ ಉಪನ್ಯಾಸಕ ಹಾಗೂ ಕವಿಗಳಾದ ಎಚ್. ಮಲ್ಲಿಕಾರ್ಜುನ ಅವರ ‘ನನ್ನೊಳಗಿನ ಮೌನದ ಮಾತು’ ಕವನ ಸಂಕಲನದ ಲೋಕಾರೆ್ಣ ಸಮಾರಂಭ ಸೆ.9ರಂದು ಬೆಳಿಗ್ಗೆ 10 ಗಂಟೆಗೆ ಸರ್ಕಾರಿ ಪದವಿ ಕಾಲೇಜಿನಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ವಕೀಲ ಬಸವರಾಜ ಸಂಗಪ್ಪನವರ ಉದ್ಘಾಟಿಸಲಿದ್ದು, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಡಾ. ಕೆ. ಸತೀಶ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಾಹಿತಿ ಮೇಟಿ ಕೊಟ್ರ್ಪ ಅವರು ಕವನ ಸಂಕಲನವನ್ನು ಲೋಕಾರೆ್ಣ ಮಾಡಲಿದ್ದು, ಸಾಹಿತಿ ಹೊರಕೇರಿ ಶಿವಕುಮಾರ್ ಕೃತಿಯ ಪರಿಚಯ ಮಾಡಿಕೊಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ಹರಪನಹಳ್ಳಿ ಅಧ್ಯಕ್ಷ ಕೆ. ಉಚ್ಚಂಗಪ್ಪ, ಮಾಜಿ ಅಧ್ಯಕ್ಷರಾದ ಡಿ. ರಾಮನಮಲಿ ಹಾಗೂ ಬಿ. ರಾಮಪ್ರಸಾದಗಾಂಧಿ, ತುಂಗಭದ್ರಾ ಪ್ರೌಢಶಾಲೆಯ ಮುಖ್ಯಗುರು ಸುರೇಶ್ ಅಂಗಡಿ ಹಾಗೂ ನವಜ್ಯೋತಿ ಸಾಂಸ್ಕೃತಿಕ ಸೇವಾ ಸಂಸ್ಥೆಯ ಅಧ್ಯಕ್ಷೆ ಶ್ರೀಮತಿ ಸಪ್ನಾ ಮಲ್ಲಿಕಾರ್ಜುನ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಶೇಖರಗೌಡ ಪಾಟೀಲ, ಕಸಾಪ ಮಾಜಿ ಅಧ್ಯಕ್ಷೆ ಸುಭದ್ರಾ ಮಾಡಿಗೇರಿ, ನಿವೃತ್ತ ಶಿಕ್ಷಕರಾದ ಇಸ್ಮಾಯಿಲ್ ಯಲಿಗಾರ್ ಹಾಗೂ ಟಿ.ಜಿ.ಎಂ. ಸುಲೋಚನಾ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಉಪಸ್ಥಿತರಿರಲಿದ್ದಾರೆ.
ಇದೇ ವೇಳೆ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಗಿರಿಜಾ ನಾಗರಾಜ್, ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಣಕಾರ ರಾಜಶೇಖರ್, ಕಸಾಪ ಗೌರವ ಕೋಶಾಧಿಕಾರಿ ಕೆ. ರಾಘವೇಂದ್ರಶೆಟ್ಟಿ, ತೆಲಗಿ ಹೋಬಳಿ ಕಸಾಪ ಅಧ್ಯಕ್ಷ ಕೆ.ಎಸ್. ವೀರಭದ್ರ್ಪ, ಚಿಗಟೇರಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ರಾಮನಗೌಡ ಹಾಗೂ ಅರಸೀಕೆರೆ ಹೋಬಳಿ ಕಸಾಪ ಅಧ್ಯಕ್ಷ ಡಾ. ಎಂ. ಸುರೇಶ್ ಸೇರಿದಂತೆ ಹಲವು ಸಾಹಿತ್ಯಾಸಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಸಾಹಿತ್ಯಾಸಕ್ತರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ನವಜ್ಯೋತಿ ಸಾಂಸ್ಕೃತಿಕ ಸೇವಾ ಸಂಸ್ಥೆಯ ಅಧ್ಯಕ್ಷೆ ಸಪ್ನಾ ಮಲ್ಲಿಕಾರ್ಜುನ ಮನವಿ ಮಾಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 