ಧ್ವನಿ ವರ್ಧಕ ಸೈಲನ್ಸರ್ಗಳ ವಿರುದ್ಧ ಪೊಲೀಸ್ ಕ್ರಮ
Police action against loudspeaker silencers
ಲೋಕದರ್ಶನ ವರದಿ
ಹಾವೇರಿ 03: ಸಾರ್ವಜನಿಕರ ನೆಮ್ಮದಿ ಹಾಗೂ ಸಂಚಾರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಶಬ್ದ ಮಾಲಿನ್ಯ ಉಂಟುಮಾಡುವ ವಾಹನಗಳ ವಿರುದ್ಧ ಮುಂದೆಯೂ ನಿರಂತರ ಕಾರ್ಯಾಚರಣೆ ನಡೆಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧ ವಂಟಗೋಡಿ ಹೇಳಿದರು. ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ, ನಿಯಮ ಉಲ್ಲಂಘಿಸಿ ಸಂಚರಿಸುತ್ತಿದ್ದ ಬುಲೆಟ್ ಬೈಕ್ಗಳಿಂದ ವಶಪಡಿಸಿಕೊಂಡಿದ್ದ ಸುಮಾರು 40ಕ್ಕೂ ಹೆಚ್ಚು ಸೈಲೆನ್ಸರ್ಗಳಲ್ಲಿನ ಧ್ವನಿ ವರ್ಧಕಗಳನ್ನು ನಿಷ್ಕ್ರಿಯಗೊಳಿಸಿದರು. ನಗರದ ಶಾಲೆ ಕಾಲೇಜು ಆಸ್ಪತ್ರೆ ಹಾಗೂ ಇನ್ನಿತರ ಸಾರ್ವಜನಿಕ ಸ್ಥಳಗಳಲ್ಲಿ ಅತಿಯಾದ ಶಬ್ದ ಮಾಲಿನ್ಯ ಉಂಟುಮಾಡುವ ಮಾರಿ್ಡಸಿದ ಸೈಲೆನ್ಸರ್ಗಳನ್ನು ಅಳವಡಿಸಿಕೊಂಡ ವಾಹನಗಳ ವಿರುದ್ಧ ಪೊಲೀಸ್ ಇಲಾಖೆ ಇತ್ತೀಚೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಪರೀಶೀಲನೆ ವೇಳೆ ವಶಪಡಿಸಿಕೊಂಡ ಸೈಲೆನ್ಸರ್ಗಳನ್ನು ಸಾರ್ವಜನಿಕರ ಸಮ್ಮುಖದಲ್ಲಿ ನಿಷ್ಕ್ರಿಯಗೊಳಿಸಲಾಯಿತು. ನಗರದ ವಾಹನ ಸವಾರರು ಸಂಚಾರ ನಿಯಮಗಳನ್ನು ಪಾಲಿಸಿ, ವಾಹನಗಳಲ್ಲಿ ಅನಧಿಕೃತ ಬದಲಾವಣೆಗಳನ್ನು ಮಾಡದಂತೆ ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ಶಿರಕೋಳ, ಡಿ ವಾಯ್ ಎಸ್ ಪಿ ಗಿರಿಮಲ್ಲಪ್ಪ, ಸಂಚಾರಿ ಪೊಲೀಸ್ ನೀರೀಕ್ಷಕರಾದ ಶೈಲಶ್ರೀ ಹಾಗೂ ಸಿಬ್ಬಂದಿಗಳು ಇದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 