ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ
Police annual sports meet kicks off
ಪೊಲೀಸರು ದೈಹಿಕ, ಮಾನಸಿಕ ಸದೃಢತೆಗೆ ಪ್ರಾಶಸ್ತ್ಯ ನೀಡಿ-ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಎಸ್.ಭಾರತಿಹುಬ್ಬಳ್ಳಿ ನ.14: ಪೊಲೀಸರು ನಿತ್ಯ ಒತ್ತಡದಲ್ಲಿ ಕಾರ್ಯನಿರ್ವಹಿಸುತ್ತಾರೆ. ಕ್ರೀಡೆಯಿಂದ ಮನಸ್ಸು ಉಲ್ಲಾಸಗೊಳ್ಳುತ್ತದೆ. ಕ್ರೀಡೆಯಿಂದ ಉತ್ಸಾಹದಿಂದ ಕೆಲಸ ಕಾರ್ಯನಿರ್ವಹಿಸಲು ಸಹಾಯಕವಾಗಲಿದೆ. ಪೊಲೀಸರು ದೈಹಿಕ, ಮಾನಸಿಕ ಸದೃಢತೆಗೆ ಪ್ರಾಶಸ್ತ್ಯ ನೀಡಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಎಸ್.ಭಾರತಿ ಹೇಳಿದರು.ಇಂದು ಕಾರವಾರ ರಸ್ತೆಯ ಹಳೆಯ ಸಶಸ್ತ್ರ ಮೀಸಲು ಪಡೆಯ ಕವಾಯತು ಮೈದಾನದಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತಾಲಯ ಘಟಕದ ವತಿಯಿಂದ ಆಯೋಜಿಸಿದ್ದ ಪೊಲೀಸ್ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪೊಲೀಸರು ಆರೋಗ್ಯದ ಕಡೆಗೆ ಗಮನಹರಿಸಬೇಕು. ಪೊಲೀಸರಲ್ಲಿ ಹೃದಯದ ಖಾಯಿಲೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಕಾಯಿಲೆಗಳನ್ನು ತಡೆಗಟ್ಟಲು ಕ್ರೀಡೆ ಸಹಾಯಕವಾಗುವುದು. ನಿಮ್ಮ ಹಿರಿಯ ಅಧಿಕಾರಿಗಳಂತೆ ಕಿರಿಯರು ಉತ್ತಮ ಆರೋಗ್ಯಕ್ಕೆ ಆದ್ಯತೆ ನೀಡಬೇಕು. ಅವರು ನಮಗೆ ಮಾದರಿಯಾಗಿದ್ದಾರೆ. ನೀವು ಕೂಡ ಜೀವನದಲ್ಲಿ ಯಶಸ್ವಿಯಾಗಬೇಕು ಎಂದು ಅವರು ತಿಳಿಸಿದರು. ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿಶೇಷ ಭೂಸ್ವಾಧೀನಾಧಿಕಾರಿಗಳಾದ ದೇವರಾಜ ಮಾತನಾಡಿ, ಪೊಲೀಸರು ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗಬೇಕು. ತಮ್ಮ ವೃತ್ತಿಪರತೆ ಮೆರೆಯಲು ಕ್ರೀಡೆ ಅವಶ್ಯಕವಾಗಿದೆ. ದೈಹಿಕ ಪರಿಶ್ರಮ, ಕ್ರೀಡಾಕೂಟ ನಿರಂತರವಾಗಿ ನಡೆಯಬೇಕು. ಕ್ರೀಡಾಕೂಟ ಯಶಸ್ವಿಯಾಗಿ ನಡೆಯಲಿ ಎಂದು ಹಾರೈಸಿದರು.
ಆರ್‌ಪಿಐ ಸಂತೋಷ ಬೋಜಪ್ಪನವರ ನೇತೃತ್ವದಲ್ಲಿ ಉತ್ತರ ವಿಭಾಗ, ದಕ???ಣ ವಿಭಾಗ, ಧಾರವಾಡ ವಿಭಾಗ, ಸಂಚಾರ ವಿಭಾಗ, ಮಹಿಳಾ ವಿಭಾಗ ಮತ್ತು ಸಿಎಆರ್ ವಿಭಾಗ ತಂಡಗಳು ಆಕರ್ಷಕ ಪಥ ಸಂಚಲನ ನಡೆಸಿದವು. ಡಿಸಿಪಿ ರವೀಶ ಸಿ.ಆರ್., ಎಸಿಪಿ ಪ್ರಶಾಂತ ಸಿದ್ದನಗೌಡರ ಸೇರಿದಂತೆ ಪೊಲೀಸ ಅಧಿಕಾರಿಗಳು, ಸಿಬ್ಬಂದಿ, ಸಾರ್ವಜನಿಕರು ಇತರರು ಉಪಸ್ಥಿತರಿದ್ದರು. ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರಾದ ಎನ್ ಶಶಿಕುಮಾರ್ ಸ್ವಾಗತಿಸಿದರು. ಡಿಸಿಪಿ ಮಹಾನಿಂಗ ನಂದಗಾವಿ ವಂದಿಸಿದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 