ಆಗಸ್ಟ್ 2ರಂದು ಪೊಲೀಸ್ ಕಾನ್ಸ್ಟೆಬಲ್ ನೇಮಕಾತಿ ಪರೀಕ್ಷೆ: ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ
Police constable recruitment exam on August 2: Prohibitory orders around exam centres
ಬಳ್ಳಾರಿ 31: ಜಿಲ್ಲೆಯಲ್ಲಿನ ಪೊಲೀಸ್ ಕಾನ್ಸ್ಟೆಬಲ್ (ಸಿವಿಲ್) ಹುದ್ದೆಗಳ ನೇರ ನೇಮಕಾತಿಯ ಲಿಖಿತ ಪರೀಕ್ಷೆ ಆಗಸ್ಟ್ 2ರಂದು ನಡೆಯಲಿದ್ದು, ಪರೀಕ್ಷೆಯನ್ನು ಸುಸೂತ್ರ ಹಾಗೂ ಅಕ್ರಮರಹಿತವಾಗಿ ನಡೆಸುವ ಉದ್ದೇಶದಿಂದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೆ. ನಾಗೇಂದ್ರ ಪ್ರಸಾದ್ ಅವರು ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ರ ಕಲಂ 163 ರಡಿ 163ರ ಅನ್ವಯ ಈ ಆದೇಶ ಹೊರಡಿಸಲಾಗಿದೆ.
ಅಂದು ಬೆಳಿಗ್ಗೆ 10.30ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಪೊಲೀಸ್ ಕಾನ್ಸ್ಟೆಬಲ್ (ಸಿವಿಲ್ - ಮಿಕ್ಕುಳಿದ ವೃಂದ) ಹಾಗೂ ಸಂಜೆ 4ರಿಂದ 5.30 ಗಂಟೆಯವರೆಗೆ ಪೊಲೀಸ್ ಕಾನ್ಸ್ಟೆಬಲ್ (ಸಿವಿಲ್ - ಸ್ಥಳೀಯ ವೃಂದ)ಹುದ್ದೆಗಳ ಲಿಖಿತ ಪರೀಕ್ಷೆ ನಡೆಯಲಿದೆ. ಜಿಲ್ಲೆಯಾದ್ಯಂತ ಒಟ್ಟು 25 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ.
ಪರೀಕ್ಷೆಯ ಅವಧಿಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಲಿನ ಜೆರಾಕ್ಸ್ ಕೇಂದ್ರಗಳು ಹಾಗೂ ಇಂಟರ್ನೆಟ್ ಕೇಂದ್ರಗಳನ್ನು ಸಂಪೂರ್ಣವಾಗಿ ಬಂದ್ ಮಾಡುವಂತೆ ಸೂಚಿಸಲಾಗಿದೆ. ಅಲ್ಲದೆ, ಅನಧಿಕೃತ ವ್ಯಕ್ತಿಗಳು ಹಾಗೂ ಗುಂಪುಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಪರೀಕ್ಷಾ ಕರ್ತವ್ಯದಲ್ಲಿರುವ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಂಬಂಧಿತ ಸಿಬ್ಬಂದಿಗೆ ಈ ನಿಷೇಧಾಜ್ಞೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 